ಕಾರವಾರ: ಇದೇ ಮೊದಲ ಬಾರಿಗೆ ಸಾರ್ವಜನಿಕ ವೇದಿಕೆಯಲ್ಲಿ ಶಿರಸಿ(Sirsi) ಪ್ರತ್ಯೇಕ ಜಿಲ್ಲೆ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegde Kageri) ಮಾತನಾಡಿದ್ದು, ಜಿಲ್ಲೆಯ ರಚನೆಯ ಕುರಿತು ಸಕಾರಾತ್ಮಕ ಸ್ಪಂದನೆ ಮಾಡಿದ್ದಾರೆ.
ಶಿರಸಿಯಲ್ಲಿ ನಡೆದ ಕಾರ್ಮಿಕ ಇಲಾಖೆ ರಾಜ್ಯ ವಿಮಾ ಯೋಜನೆ ಚಿಕಿತ್ಸಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ರಾಜ್ಯದ ವಿವಿಧ ಜಿಲ್ಲೆ ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚನೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳನ್ನು ಒಳಗೊಂಡ ಶಿರಸಿ ಪ್ರತ್ಯೇಕ ಜಿಲ್ಲೆಯ ಬೇಡಿಕೆಗೆ ಬಲ ಬರುತ್ತಿದೆ. ಈ ಬಗ್ಗೆ ಸಾರ್ವಜನಿಕರು ನನ್ನ ಹಾಗೂ ಸಚಿವ ಶಿವರಾಮ ಹೆಬ್ಬಾರ್(Shivram Hebbar) ಅವರನ್ನು ಕೇಳುತ್ತಿದ್ದಾರೆ ಎಂದರು. ಇದನ್ನೂ ಓದಿ: ಕರ್ನಾಟಕ ಚುನಾವಣೆಗೆ ಹಿಂದುತ್ವ, ದೇಶಾಭಿಮಾನವೇ ಬಿಜೆಪಿ ತಂತ್ರ- ಸಚಿವರಿಗೆ ಹೈಕಮಾಂಡ್ ಟಾಸ್ಕ್ ಡೆಡ್ ಲೈನ್
Advertisement
Advertisement
ಪ್ರತ್ಯೇಕ ಜಿಲ್ಲೆ ಬೇಡಿಕೆ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಬಳಿ ಚರ್ಚಿಸಲಾಗಿದೆ. ಪ್ರತ್ಯೇಕ ಜಿಲ್ಲೆಯಾಗಲು ಸಚಿವ ಹೆಬ್ಬಾರ್ ಅವರ ಸಹಕಾರವೂ ಮುಖ್ಯ. ಈ ಬಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿ ಅವರಲ್ಲಿ ಇಬ್ಬರೂ ಚರ್ಚಿಸುತ್ತೇವೆ. ಸಮಯ, ಸಂದರ್ಭ ನೋಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು. ಈ ವೇಳೆ ಸಚಿವ ಹೆಬ್ಬಾರ್ ಸಹ ಉಪಸ್ಥಿತರಿದ್ದರು.