ದರ್ಗಾಗೆ ಹೊರಟವರು ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ್ರು

Public TV
1 Min Read
car accident 2

ಹೈದರಾಬಾದ್: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ದುರ್ಮರಣವಾಗಿರುವ ಘಟನೆ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಈ ಅಪಘಾತದಲ್ಲಿ ಉಳಿದಂತೆ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ಹೈದರಾಬಾದ್‍ನ ಮಲಕ್‍ಪೇಟ್ ಮತ್ತು ಚಾದರ್‍ಘಾಟ್‍ನ ನಿವಾಸಿಗಳು ಎಂದು ಗುರುತಿಸಲಾಗಿದೆ. ಇವರೆಲ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: BJP ಅವಧಿಯಲ್ಲಿ ಅಭಿವೃದ್ಧಿಯಾಗಿದ್ದು ಮೋದಿ ಸ್ನೇಹಿತರಷ್ಟೇ: ಪ್ರಿಯಾಂಕಾ ಗಾಂಧಿ

speed road hump

ಟೊಯೊಟಾ ಕ್ವಾಲಿಸ್‍ನಲ್ಲಿ ಎರಡು ಕುಟುಂಬದ 12 ಸದಸ್ಯರು ಮಹಾರಾಷ್ಟ್ರದ ನಾಂದೇಡ್‍ನಲ್ಲಿರುವ ಹಜರತ್ ಶಾ ಕಾಮಿಲ್ ದಾದ್ ದರ್ಗಾಗೆ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 161ರಲ್ಲಿ ವೇಗವಾಗಿ ಬಂದ ಟೊಯೊಟಾ ಕ್ವಾಲಿಸ್ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕಾರಿನ ರಭಸಕ್ಕೆ ಅದರ ಅರ್ಧ ಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಇದನ್ನೂ ಓದಿ: 7 ವರ್ಷದಲ್ಲಿ ಅವರೇನು ಮಾಡಿದ್ದಾರೆ? – ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ROAD

ಅಪಘಾತದಲ್ಲಿ ಗಾಯಗೊಂಡವರನ್ನ ಬಾನ್ಸವಾಡ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮೃತದೇಹಗಳನ್ನ ಈಗಾಗಲೇ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಅಪಘಾತಕ್ಕೀಡಾಗಿರುವ ಸಂಬಂಧಿಕರಿಗಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬಾನ್ಸವಾಡ ಡಿಎಸ್‍ಪಿ ಜೈಪಾಲ್ ರೆಡ್ಡಿ ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಮೃತಸಾರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ – ಕೋಪ್ರೋದ್ರಿಕ್ತ ಗುಂಪಿನಿಂದ ಹತ್ಯೆ

Share This Article
Leave a Comment

Leave a Reply

Your email address will not be published. Required fields are marked *