ಬೆಂಗಳೂರು: ಪಬ್ಲಿಕ್ ಟಿವಿ (PUBLiC TV) ಪ್ರಸ್ತುತ ವಿದ್ಯಾಪೀಠ (Vidhyapeeta) 7ನೇ ಆವೃತ್ತಿಯ ಎಜ್ಯುಕೇಶನ್ ಎಕ್ಸ್‌ಪೋಗೆ (Education Expo) ಇಂದು ಎರಡನೇ ಹಾಗೂ ಕೊನೆಯ ದಿನ. ಉತ್ತಮ ಪ್ರತಿಕ್ರಿಯೆಯೊಂದಿಗೆ ಮೊದಲ ದಿನವೇ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಪೀಠಕ್ಕೆ ಆಗಮಿಸಿ ಜ್ಞಾನಾರ್ಜನೆ ಪಡೆದುಕೊಂಡಿದ್ದು, ಇಂದು ಕೊನೆಯ ದಿನ ಕೂಡ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುವ ಸಾಧ್ಯತೆ ಇದೆ.
ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತರುವ ಕಾರ್ಯಕ್ರಮಕ್ಕೆ ಮೊದಲ ದಿನ ಸುಮಾರು 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಗಮಿಸಿ ಜ್ಞಾನಾರ್ಜನೆ ಪಡೆದುಕೊಂಡಿದ್ದಾರೆ. ಸಂಜೆ 6 ಗಂಟೆಯವರೆಗೂ ಎಕ್ಸ್‌ಪೋದಲ್ಲಿ ಭಾಗಿಯಾಗಲು ಅವಕಾಶ ಇದ್ದು, ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸಗಳು ಇರಲಿವೆ. ಹ್ಯಾಂಡ್‌ರೈಟಿಂಗ್ ಎಕ್ಸ್ ಪರ್ಟ್ ಆಗಿರುವ ರಫೀಉಲ್ಲಾ ಬೇಗ್ ಅವರಿಂದ ವಿಶೇಷ ಸೆಮಿನಾರ್ ಕೂಡಾ ನಡೆಯಲಿದೆ. ಇದಲ್ಲದೆ ಬೈಸಿಕಲ್ ಸೇರಿದಂತೆ ಹಲವು ಬಂಪರ್ ಗಿಫ್ಟ್ ಗೆಲ್ಲುವ ಅವಕಾಶ ವಿದ್ಯಾರ್ಥಿಗಳಿಗೆ ಸಿಗಲಿದೆ. ಇದನ್ನೂ ಓದಿ: ಬೆಳಗಾವಿಗೆ ಬಂದಿಳಿದ ಪ್ರಧಾನಿ ಮೋದಿ
110ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿ: ಕರ್ನಾಟಕದ (Karnataka) ಅತಿ ದೊಡ್ಡ ಶೈಕ್ಷಣಿಕ ಮೇಳ ವಿದ್ಯಾಪೀಠದಲ್ಲಿ ರಾಜ್ಯದ ನಾನಾ ಭಾಗಗಳ 110ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಂಡಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪದವಿ, ಸ್ನಾತಕೋತ್ತರ ಪದವಿ, ಕೆಸಿಇಟಿ, ನೀಟ್ ಮತ್ತು ಕಾಮೆಡ್ ಕೆ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.
ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್ ಆರ್ಕಿಟೆಕ್ಚರ್, ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳು, ವಾಣಿಜ್ಯ ಮತ್ತು ಬ್ಯಾಂಕಿಂಗ್, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‌ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು, ಸಮೂಹ ಸಂವಹನ, ಎಂಬಿಎ ಸಂಸ್ಥೆಗಳು ವಿದ್ಯಾಪೀಠದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರ
ಮತದಾನ ಮಾಡಿದವರಿಗೆ ಉಡುಗೊರೆ
ಶೈಕ್ಷಣಿಕ ಮೇಳದಲ್ಲಿ ಸೆಮಿನಾರ್ ಸೇರಿದಂತೆ ಹಲವು ಕಾರ್ಯಕ್ರಮಗಳು ಇರಲಿವೆ. ಲಕ್ಕಿ ಡ್ರಾ ಮೂಲಕ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು. ಅದರಲ್ಲೂ ವಿಶೇಷವಾಗಿ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿ ಮತ ಚಲಾವಣೆ ಮಾಡಿದ ವಿದ್ಯಾರ್ಥಿಗಳಿಗೆ ಆಕರ್ಷಕ ಉಡುಗೊರೆ ಸಿಗಲಿದೆ.
ಚಿನ್ನದ ನಾಣ್ಯ, ಸೈಕಲ್ ಉಡುಗೊರೆ:
ವಿವಿಧ ಸ್ಪರ್ಧೆಯಲ್ಲಿ ಗೆದ್ದ ವಿಜೇತರಿಗೆ ಚಿನ್ನದ ನಾಣ್ಯ ಹಾಗೂ ಬೈಸಿಕಲ್ ಸೇರಿದಂತೆ ವಿಶೇಷ ಉಡುಗೊರೆ ನೀಡಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅಂಕಪಟ್ಟಿಯ ಫೋಟೋಕಾಪಿ ತಂದು ತೋರಿಸಿದ್ದಲ್ಲಿ ಅವರಿಗೂ ಉಡುಗೊರೆ ಸಿಗಲಿದೆ.