Connect with us

Dakshina Kannada

ವಿಸ್ಟಾಡೋಮ್ ಬೋಗಿಗಳ ರೈಲಿಗೆ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ

Published

on

Share this

– ರೈಲಿನ ವಿಶೇಷತೆ ಏನು..?

ಮಂಗಳೂರು: ಯಶವಂತಪುರ-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಇಂದು ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್‍ರವರು ರೈಲಿಗೆ ಹಸಿರು ನಿಶಾನೆ ತೋರಿದರು.

ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಸಂಚರಿಸಲಿರುವ ಈ ವಿಸ್ಟಾಡೋಮ್ ಕೋಚ್ ಹೊಂದಿರುವ ರೈಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಯಾಗಿದೆ. ಹಗಲಿನಲ್ಲಿ ಸಂಚರಿಸುತ್ತಾ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಈ ವಿಸ್ಟಾಡೋಮ್ ಕೋಚ್ ಉಳ್ಳ ರೈಲು ಸಿದ್ಧವಾಗಿದೆ. ಪಶ್ಚಿಮ ಘಟ್ಟಗಳ ಮೂಲಕ ರೈಲು ಸಂಚರಿಸಲಿದ್ದು, ಪ್ರಯಾಣದ ಸಂದರ್ಭದ ರಮಣೀಯ ಪ್ರಾಕೃತಿಕ ಸೊಬಗನ್ನು ಸವಿಯಲು ರಚಿಸಲಾಗಿರುವ ವಿಸ್ಟಾಡೋಮ್ ವಿಂಡೋಸ್ ಎಲ್ಲರ ಗಮನಸೆಳೆಯುತ್ತಿದೆ. ಇದನ್ನೂ ಓದಿ: ರಾಜಕೀಯ ಕ್ಷೇತ್ರದಲ್ಲಿರುವ ನಾವು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಲ್ಲ: ಕಟೀಲ್

ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಇದೆ. ಜೊತೆಗೆ ಕೋಚ್‍ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇದೆ. ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗದ ಸೌಂದರ್ಯ ಸವಿಯಲು ಈ ರೈಲು ಪ್ರಯಾಣಿಕರನ್ನು ಕೈಬೀಸಿ ಕರೆಯುತ್ತಿದೆ.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಡಿ.ಆರ್ ಎಂ ಕೊಠಾರಿ, ಕಾರ್ಪೋರೇಟರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement