ನವದೆಹಲಿ: ಪೈಲಟ್‌ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ದಿನಕ್ಕೆ 25-30 ವಿಮಾನಗಳ ಹಾರಾಟ ರದ್ದುಗೊಳಿಸಲಾಗುವುದು ಎಂದು ವಿಸ್ತಾರ ಏರ್‌ಲೈನ್ಸ್ (Vistara airlines) ಭಾನುವಾರ ತಿಳಿಸಿದೆ.
ಪರಿಸ್ಕೃತ ವೇತನದ ವಿರುದ್ಧ ಅಸಮಾಧಾನಗೊಂಡಿರುವ ಪೈಲಟ್‌ಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಏರ್‌ಲೈನ್‌ನಲ್ಲಿ ಪೈಲಟ್‌ಗಳ ಕೊರತೆ ಎದುರಾಗಿದೆ. ಇದರ ಬೆನ್ನಲ್ಲೇ ವಿಸ್ತಾರದಿಂದ ವಿಮಾನಗಳ ಕಾರ್ಯಾಚರಣೆಯಲ್ಲಿ ಕಡಿತಗೊಳಿಸಿರುವ ಬಗ್ಗೆ ಘೋಷಣೆ ಹೊರಬಿದ್ದಿದೆ.
Advertisement
Advertisement
ರದ್ದತಿಗಳನ್ನು ಹೆಚ್ಚಾಗಿ ದೇಶೀಯ ನೆಟ್‌ವರ್ಕ್‌ನಲ್ಲಿ ಮಾಡಲಾಗಿದೆ. ಪ್ರಯಾಣಿಕರಿಗೆ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ಏರ್‌ಲೈನ್ ತಿಳಿಸಿದೆ.
Advertisement
ದಿನಕ್ಕೆ ಸುಮಾರು 25-30 ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಲಾಗಿದೆ. ಅಂದರೆ ನಾವು ಕಾರ್ಯನಿರ್ವಹಿಸುತ್ತಿದ್ದ ಸಾಮರ್ಥ್ಯದ ಸರಿಸುಮಾರು 10% ಕಡಿತಗೊಳಿಸಲಾಗುವುದು ಎಂದು ವಿಸ್ತಾರ ಏರ್‌ಲೈನ್ಸ್ ಮಾಹಿತಿ ನೀಡಿದೆ.
Advertisement
ಮಾರ್ಚ್ 31 ರಿಂದ ಆರಂಭವಾಗಿರುವ ಬೇಸಿಗೆ ವೇಳಾಪಟ್ಟಿ ಪ್ರಕಾರ, ವಿಸ್ತಾರ ನಿತ್ಯ 300 ಕ್ಕೂ ಅಧಿಕ ವಿಮಾನಗಳ ಹಾರಾಟ ನಡೆಸುತ್ತಿದೆ.