ಬೆಂಗಳೂರು: ದೃಷ್ಟಿ ವಿಕಲಚೇತನರಿಗಾಗಿ ಸ್ವಯಂಸೇವಕರು ಮತ್ತು ಧೀನೋಧರ ಟ್ರಸ್ಟ್ ಆಗಸ್ಟ್ 14 ರಂದು ವಯೋಮಿತಿ ಒಳಗೊಂಡ ಚೆಸ್ ಪಂದ್ಯಾವಳಿಯನ್ನು ಆಯೋಜಿಸಿದೆ.
Advertisement
ಭಾರತದ ಸ್ವಾತಂತ್ರ್ಯದ 75 ವರ್ಷಗಳ ಗೌರವಾರ್ಥವಾಗಿ ರಾಜ್ಯಾದ್ಯಂತ ಸುಮಾರು 76 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಇಂದಿರಾನಗರದಲ್ಲಿರುವ ನ್ಯೂ ಹೊರೈಜನ್ ಪಬ್ಲಿಕ್ ಸ್ಕೂಲ್‍ನಲ್ಲಿ ಪಂದ್ಯಾವಳಿಗಳು ನಡೆಯಲಿದೆ. ಒಟ್ಟು 35,000 ರೂಪಾಯಿಗಳ ಬಹುಮಾನದ ಮೊತ್ತ ನಿಗದಿಪಡಿಸಲಾಗಿದೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ – ಅಂಚೆ ಇಲಾಖೆಯಿಂದ 10 ದಿನಗಳಲ್ಲಿ 1 ಕೋಟಿ ಧ್ವಜ ಮಾರಾಟ
Advertisement
ವಿಕೆಲಚೇತನರು ಕೂಡ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈ ಪಂದ್ಯಾವಳಿಯನ್ನು ಸಂಘಟಕರು ಆಯೋಜಿಸಿದ್ದಾರೆ. ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಯಲಿದ್ದು, ಸ್ವಿಸ್ ಲೀಗ್ ಮಾದರಿಯಲ್ಲಿ (ರೌಂಡ್-ರಾಬಿನ್) ಪಂದ್ಯಾಟ ನಡೆಯಲಿದೆ. ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಪಂದ್ಯಾವಳಿ ನಡೆಯಲಿದೆ.
Advertisement
Advertisement
ಪಂದ್ಯಾಟದ ಮೂಲಕ ಸ್ವಯಂಸೇವಕರಿಂದ ಧನಸಹಾಯವನ್ನು ಸ್ವೀಕರಿಸಲಾಗುತ್ತಿದ್ದು, ಇದರಿಂದ ಬಂದಂತಹ ಧನಸಹಾಯವನ್ನು ವಿಕಲಚೇತನರ ಅಭಿವೃದ್ಧಿಗಾಗಿ ಬಳಸಲು ಆಯೋಜಕರು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿಗೆ ಮತ್ತಷ್ಟು ಎಲೆಕ್ಟ್ರಿಕ್ ಬಸ್‍ಗಳು – ಆಗಸ್ಟ್ 15ಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ