ಸಾಮಾನ್ಯವಾಗಿ ಸಿನಿಮಾ ಸಂಸ್ಥೆಗಳು ತಮ್ಮ ಚಿತ್ರಗಳ ಬಜೆಟ್ ಅನ್ನು ಘೋಷಣೆ ಮಾಡುವುದಿಲ್ಲ. ವ್ಯಾಪಾರ ದೃಷ್ಟಿಯಿಂದ ಆದಷ್ಟು ಅದನ್ನು ಗೌಪ್ಯವಾಗಿ ಇಡಲಾಗುತ್ತದೆ. ಬಜೆಟ್ ಲೆಕ್ಕಾಚಾರ ಆಚೆ ಬಂದರೂ ಅದು ಅಧಿಕೃತ ಸಂಸ್ಥೆಯಿಂದ ಬರುವುದು ತೀರಾ ಕಡಿಮೆ. ಆದರೆ, ದಿ ವ್ಯಾಕ್ಸಿನ್ ವಾರ್ (The Vaccine War) ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ತಮ್ಮ ಸಿನಿಮಾದ ಬಜೆಟ್ ಅನ್ನು ಬಹಿರಂಗವಾಗಿ ಹಂಚಿಕೊಂಡಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
Advertisement
ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಅಗ್ನಿಹೋತ್ರಿ ಕೇವಲ 12 ಕೋಟಿ ರೂಪಾಯಿಯಲ್ಲಿ ತಯಾರಿಸಿದ್ದರಂತೆ. ಆನಂತರ ಆ ಸಿನಿಮಾ ಕೋಟಿ ಕೋಟಿ ಬಾಚಿತು. ಅಂದಾಜು 200 ಕೋಟಿಗೂ ಅಧಿಕ ಹಣವನ್ನು ದಿ ಕಾಶ್ಮೀರ್ ಫೈಲ್ಸ್ ಗಳಿಸಿತ್ತು. ದಿ ವ್ಯಾಕ್ಸಿನ್ ವಾರ್ ಚಿತ್ರವನ್ನು ಕೇವಲ 10 ಕೋಟಿ ವೆಚ್ಚದಲ್ಲಿ ಮಾಡಿರುವುದಾಗಿ ವಿವೇಕ್ ಅಗ್ನಿಹೋತ್ರಿ ಘೋಷಿಸಿಕೊಂಡಿದ್ದಾರೆ. ಇದನ್ನೂ ಓದಿ:ರಿಷಬ್ ನಿರ್ಮಾಣದ ‘ಶಿವಮ್ಮ’ನಿಗೆ ಮತ್ತೆ ಅಂತಾರಾಷ್ಟ್ರೀಯ ಪ್ರಶಸ್ತಿ
Advertisement
Advertisement
‘ದಿ ವ್ಯಾಕ್ಸಿನ್ ವಾರ್’ (The Vaccine War) ಸಿನಿಮಾ ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಮೂಡಿ ಬರುತ್ತಿರುವುದು ವಿಶೇಷ. ಭಾರತದ ನಾನಾ ಕಡೆಗಳಲ್ಲಿ ಈ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ ನಿರ್ದೇಶಕರು. ಕೊರೋನಾ ಸಮಯದಲ್ಲಿ ವ್ಯಾಕ್ಸಿನ್ ಏನೆಲ್ಲ ಆವಾಂತರ ಸೃಷ್ಟಿ ಮಾಡಿತು ಎನ್ನುವ ಅರಿವು ಬಹುತೇಕರಿಗಿದೆ. ಈ ವ್ಯಾಕ್ಸಿನ್ ಏನೆಲ್ಲ ಕೆಲಸ ಮಾಡಿತು ಎಂದು ಕಂಡವರು ಇದ್ದಾರೆ. ವ್ಯಾಕ್ಸಿನ್ ಮಾಫಿಯಾ ಬಗ್ಗೆಯೂ ಹಲವು ಅನುಮಾನಗಳು ವ್ಯಕ್ತವಾದವು. ಹೀಗಾಗಿಯೇ ವ್ಯಾಕ್ಸಿನ್ ಸುತ್ತ ಕಥೆಯನ್ನು ಬರೆದಿರುವ ವಿವೇಕ್, ವ್ಯಾಕ್ಸಿನ್ ಸಾಧಕ ಬಾಧಕಗಳ ಬಗ್ಗೆಯೇ ಸಿನಿಮಾ ಮಾಡಿದ್ದಾರೆ.
Advertisement
ದಿ ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾ ತಯಾರಿ ವೇಳೆಯಲ್ಲೇ ವ್ಯಾಕ್ಸಿನ್ ಬಗ್ಗೆ ಸಂಶೋಧನೆ ಮಾಡಿದ್ದರಂತೆ ವಿವೇಕ್. ಕೋವಿಡ್ ಕಾರಣದಿಂದಾಗಿ ಕಾಶ್ಮೀರ್ ಫೈಲ್ಸ್ ಶೂಟಿಂಗ್ ಮುಂದೂಡಲ್ಪಟ್ಟಾಗ ವ್ಯಾಕ್ಸಿನ್ ಹಿಂದೆ ಬಿದ್ದಿದ್ದರಂತೆ. ತಮ್ಮ ಸಂಶೋಧನೆಯಲ್ಲಿ ಕಂಡ ಅನುಭವಗಳನ್ನು ಈ ಸಿನಿಮಾದಲ್ಲಿ ಅವರು ಅಳವಡಿಸಿಕೊಂಡಿದ್ದಾರಂತೆ. ವ್ಯಾಕ್ಸಿನ ತಯಾರಿಕೆಯಲ್ಲಿ ಗೆದ್ದಿರುವ ವಿಜ್ಞಾನಿಗಳ ಶ್ರಮ, ಅದನ್ನು ಅಷ್ಟೇ ವೇಗವಾಗಿ ತಲುಪಿಸಿದ ರೋಚಕ ಕಥೆಯೂ ಈ ಸಿನಿಮಾದಲ್ಲಿ ಇರಲಿದೆಯಂತೆ.
ತಮ್ಮದೇ ಬ್ಯಾನರ್ ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ವಿವೇಕ್, ಪತ್ನಿ ನಟಿ ಪಲ್ಲವಿ ಜೋಷಿ ಅವರೇ ಈ ಚಿತ್ರದ ನಿರ್ಮಾಪಕರು. ಬಾಲಿವುಡ್ ಹೆಸರಾಂತ ನಟ ಅನುಪಮ್ ಖೇರ್ (Anupam Kher), ಕಾಂತಾರ ಸಿನಿಮಾ ಖ್ಯಾತಿಯ ಕನ್ನಡತಿ ಸಪ್ತಮಿ ಗೌಡ (Saptami Gowda )ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ.
Web Stories