Bengaluru CityCinemaKarnatakaLatestMain PostSandalwood

`ಕಾಂತಾರ’ ನೋಡಿ ರಿಷಬ್‌ಗೆ ಹ್ಯಾಟ್ಸ್ ಆಫ್ ಎಂದ ವಿವೇಕ್ ಅಗ್ನಿಹೋತ್ರಿ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ `ಕಾಂತಾರ’ (Kantara Film) ಸಿನಿಮಾ ಸಕ್ಸಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ರಾರಾಜಿಸುತ್ತಿದೆ. ಇದೀಗ `ದಿ ಕಾಶ್ಮೀರ್ ಫೈಲ್ಸ್’ (The Kashmir Files) ನಿರ್ದೇಶಕ ವಿವೇಕ್ ಅಗ್ನಿಹೋತ್ರಿ `ಕಾಂತಾರ’ ಸಿನಿಮಾ ನೋಡಿ, ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

`ಕಾಂತಾರ' ನೋಡಿ ರಿಷಬ್‌ಗೆ ಹ್ಯಾಟ್ಸ್ ಆಫ್ ಎಂದ ವಿವೇಕ್ ಅಗ್ನಿಹೋತ್ರಿ

90ರ ದಶಕದ ಕಾಶ್ಮೀರಿ ಪಂಡಿತರ ಕಥೆಯನ್ನ ತೆರೆಯ ಮೇಲೆ ತೋರಿಸಿ, ಅಪಾರ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದ `ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ `ಕಾಂತಾರ’ ಚಿತ್ರವನ್ನು ನೋಡಿ ಹೊಗಳಿದ್ದಾರೆ. ರಿಷಬ್ ಶೆಟ್ಟಿಯ (Rishab Shetty) ಬೆನ್ನು ತಟ್ಟಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ.

`ಕಾಂತಾರ' ನೋಡಿ ರಿಷಬ್‌ಗೆ ಹ್ಯಾಟ್ಸ್ ಆಫ್ ಎಂದ ವಿವೇಕ್ ಅಗ್ನಿಹೋತ್ರಿ

`ಕಾಂತಾರ’ ಸಿನಿಮಾ ನೋಡಿ ಬಂದೆ. ಇದೊಂದು ಅದ್ಭುತ ಅನುಭವ ಕೊಟ್ಟ ಚಿತ್ರ. ಈ ರೀತಿಯ ಚಿತ್ರವನ್ನು ನೀವು ನೋಡಿರುವುದಿಲ್ಲ. ನಾನಂತೂ ಈ ರೀತಿಯ ಸಿನಿಮಾವನ್ನು ನೋಡಿರಲಿಲ್ಲ. ರಿಷಬ್ ಶೆಟ್ಟಿಗೆ ಹ್ಯಾಟ್ಸ್ ಆಫ್. ರಿಷಬ್ ನೀವು ಅದ್ಭುತ ಕೆಲಸ ಮಾಡಿದ್ದೀರಿ. ನಾನು ನಿಮಗೆ ಕರೆ ಮಾಡಿ ಮಾತನಾಡುತ್ತೇನೆ. ಇದನ್ನೂ ಓದಿ:ಚೇತನ್ ಹೇಳಿಕೆ ಬಗ್ಗೆ ಏನೂ ಹೇಳಲ್ಲ: ರಿಷಬ್ ಶೆಟ್ಟಿ

ನನ್ನ ಅನುಭವವನ್ನು ಹಂಚಿಕೊಳ್ಳದೇ ಇರಲು ಸಾಧ್ಯವಾಗಲಿಲ್ಲ. ಕಲೆ, ಜಾನಪದ ವಿಚಾರಗಳು ಸಿನಿಮಾದಲ್ಲಿ ಅಡಗಿದೆ. ಸಿನಿಮಾದ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ. ನಿಮ್ಮ ಬಳಿ ಇರುವುದು ಅದೆಂತಹ ಎನರ್ಜಿ. ನಾನು ಈವರೆಗೆ ನೋಡಿಲ್ಲ. ರಿಷಬ್ ಶೆಟ್ಟಿ ಮಾಡಿದ ಮಾಸ್ಟರ್‌ಪೀಸ್ ಈ ಸಿನಿಮಾದಲ್ಲಿ ಎಲ್ಲವೂ ಚೆನ್ನಾಗಿದೆ ಎಂದು ಹಾಡಿ ಹೊಗಳಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button