ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಈ ಬಾರಿಯ ಆಸ್ಕರ್ (Oscar) ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಡೆಸಿಕೊಡಲಿದ್ದಾರೆ. ಈ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಒಟ್ಟು 16 ಜನರನ್ನು ನಿರೂಪಕರನ್ನಾಗಿ ಆಯ್ಕೆ ಮಾಡಿದ್ದು, ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು ಎನ್ನುವುದು ವಿಶೇಷ. ಈ ಆಯ್ಕೆಯನ್ನು ದಿ ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಸ್ವಾಗತಿಸಿದ್ದಾರೆ. ಭಾರತವು ಎಲ್ಲ ಕ್ಷೇತ್ರದಲ್ಲೂ ಮುನ್ನುಗ್ಗುತ್ತಿದೆ. ಇದೇ ಅಚ್ಚೇ ದಿನ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Advertisement
ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಆ ದಿನಕ್ಕಾಗಿ ಕಾಯುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಟ ಗೋಪಿಚಂದ್‌ಗೆ ಸ್ಯಾಂಡಲ್‌ವುಡ್ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್
Advertisement
Advertisement
ಇದೇ ಮಾರ್ಚ್ 12ರಂದು (ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್ 13) ಲಾಸ್ ಏಂಜಲೀಸ್ ನಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಹತ್ತು ಜನ ನಿರೂಪಕರು ಕೆಲಸ ಮಾಡಲಿದ್ದಾರೆ. ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು. ದೀಪಿಕಾ ಜೊತೆ ಮೆಲಿಸ್ಸಾ ಮೆಕಾರ್ಥಿ, ಜಾನೆಲ್ಲೆ ಮೋನೆ, ಜೆನ್ನಿಫರ್ ಕೊನ್ನೆಲ್ಲಿ, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ಜೋ ಸಲ್ಡಾನಾ ಸೇರಿದಂತೆ ಇತರರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
Advertisement
ಈ ಬಾರಿ ಆಸ್ಕರ್ ವೇದಿಕೆಯ ಮೇಲೆ ನಿರಂತರವಾಗಿ ದೀಪಿಕಾ ಕಾಣಿಸಿಕೊಂಡರೆ, ರಾಮ್ ಚರಣ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಲೈವ್ ಆಗಿ ಡ್ಯಾನ್ಸ್ ಮಾಡಲಿದ್ದಾರೆ. ಅಲ್ಲದೇ, ಅದೇ ವೇದಿಕೆಯಲ್ಲೇ ಗಾಯಕರಾದ ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲಾ ಭೈರವ ಹಾಡಲಿದ್ದಾರೆ. ಭಾರತದಿಂದ ಆಲ್ ದಟ್ ಬ್ರೀಥ್ಸ್, ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಗಳು ನಾಮ ನಿರ್ದೇಶನಗೊಂಡಿವೆ. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಕೂಡ ಪ್ರಶಸ್ತಿಯ ರೇಸ್ ನಲ್ಲಿದೆ.