ಮುಂಬೈ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಬಿಜೆಪಿ ನಾಯಕರಿಗೆ ಸಿನಿಮಾ ಉಚಿತ ಪ್ರದರ್ಶನ ನೀಡುವುದನ್ನು ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ದೇಶಾದ್ಯಂತ ಪರ-ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಕಾಶ್ಮೀರದಲ್ಲಿ ಹಿಂಸೆ, ಅತ್ಯಾಚಾರಗಳನ್ನು ಅನುಭವಿಸಿ ದಕ್ಷಿಣದ ಕಡೆಗೆ ಮಹಾವಲಸೆಗೈದ ಕಾಶ್ಮೀರಿ ಪಂಡಿತರ ರಕ್ತಪಾತದ ಕಥೆ ಹೇಳುವ ಸಿನಿಮಾವನ್ನು ಸರ್ಕಾರ ಜನರಿಗೆ ತೋರಿಸಲು ತೆರಿಗೆ ಮುಕ್ತಗೊಳಿಸಿತ್ತು. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸಹಾಯ ಮಾಡುವುದಿಲ್ಲ: ಸಂಜಯ್ ರಾವತ್
Advertisement
Advertisement
ಇದೀಗ ಭಾರೀ ಸುದ್ದಿಯಾಗುತ್ತಿರುವ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಜನರಿಗೆ ತೋರಿಸಲು ಹಲವು ಬಿಜೆಪಿ ನಾಯಕರು ಉಚಿತ ಪ್ರದರ್ಶನಗಳನ್ನು ನೀಡುತ್ತಿದ್ದಾರೆ. ಆದರೆ ಬಿಜೆಪಿಯವರು ಮಾಡುತ್ತಿರುವ ಈ ಕೆಲಸಕ್ಕೆ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿರೋಧ ವ್ಯಕ್ತಪಡಿಸಿದ್ದಾರೆ.
Advertisement
ಹರಿಯಾಣದ ರೇವಾರಿಯಲ್ಲಿರುವ ಬಿಜೆಪಿ ನಾಯಕರೊಬ್ಬರು ಸಿನಿಮಾವನ್ನು ಉಚಿತವಾಗಿ ಜನರಿಗೆ ಪ್ರದರ್ಶಿಸಲು ಮುಂದಾಗಿದ್ದಾಗ ವಿವೇಕ್ ಅಗ್ನಿಹೋತ್ರಿ ಇದನ್ನು ವಿರೋಧಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಇದರ ಬಗ್ಗೆ ಬರೆದಿರುವ ಅಗ್ನಿಹೋತ್ರಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಉಚಿತವಾಗಿ ತೋರಿಸುವುದು ಅಪರಾಧ. ಈ ರೀತಿ ಉಚಿತ ಪ್ರದರ್ಶನ ನೀಡುವುದನ್ನು ನಿಲ್ಲಿಸುವಂತೆ ನಾನು ವಿನಂತಿಸುತ್ತಿದ್ದೇನೆ. ರಾಜಕೀಯ ನಾಯಕರು ಸೃಜನಾತ್ಮಕ ವ್ಯವಹಾರಗಳನ್ನು ಗೌರವಿಸಬೇಕು. ನಿಜವಾದ ರಾಷ್ಟ್ರೀಯತೆ ಹಾಗೂ ಸಮಾಜ ಸೇವೆ ಎಂದರೆ ಕಾನೂನನ್ನು ಪಾಲಿಸುವುದು ಹಾಗೂ ಶಾಂತಿಯುತ ರೀತಿಯಲ್ಲಿ ಟಿಕೆಟ್‌ಗಳನ್ನು ಖರೀದಿಸುವುದು ಎಂದಿದ್ದಾರೆ. ಇದನ್ನೂ ಓದಿ: ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ
Advertisement
WARNING:
Showing #TheKashmirFiles like this in open and free is a CRIMINAL OFFENCE. Dear @mlkhattar ji, I’d request you to stop this. Political leaders must respect creative business and true Nationalism and Social service means buying tickets in a legal and peaceful manner. ???? pic.twitter.com/b8yGqdrmUh
— Vivek Ranjan Agnihotri (@vivekagnihotri) March 20, 2022
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ 1990ರಲ್ಲಿ ಕಾಶ್ಮೀರದಲ್ಲಿ ನಡೆದ ನೈಜ ಘಟನೆಯನ್ನು ವಿವರಿಸುತ್ತದೆ. ಕಾಶ್ಮೀರಿ ಪಂಡಿತರು ಕಾಶ್ಮೀರದಲ್ಲಿ ಅನುಭವಿಸಿದ ಸಾವು-ನೋವು, ಮಹಾ ವಲಸೆ, ಭೀಕರ ಹತ್ಯೆ, ಹೃದಯ ವಿದ್ರಾವಕ ಸನ್ನಿವೇಶಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ.