ಬೆಂಗಳೂರು: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರಿಗೆ ಮಧ್ಯಂತರ ಜಾಮೀನು ಶೀಘ್ರ ಮಂಜೂರಾಗಿದೆ. ಅದರಂತೆ ಜನ ಸಾಮಾನ್ಯರಿಗೂ ಈ ಬಗೆಯ ಶೀಘ್ರ ಸೇವೆ ಲಭಿಸಬೇಕು ಎಂಬ ಕಾರಣಕ್ಕೆ ಸುಪ್ರೀಂ ಮುಖ್ಯನಾಯಾಧೀಶರಿಗೆ ಪತ್ರ ಬರೆಯಲಾಗಿದೆ ಎಂದು ರಾಜ್ಯ ವಕೀಲರ ಸಂಘದ (Advocates Association) ಅಧ್ಯಕ್ಷ ವಿವೇಕ್ ರೆಡ್ಡಿ (Vivek Subba Reddy) ಅಭಿಪ್ರಾಯಪಟ್ಟಿದ್ದಾರೆ.
ವಿಕಾಸಸೌಧದಲ್ಲಿ (Vikasa Soudha) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಜನರ ಪ್ರಕರಣಗಳಲ್ಲಿ ವಿಚಾರಣೆ ವಾರಗಟ್ಟಲೇ ತಡವಾಗುತ್ತಿದೆ. ಈ ಬಗ್ಗೆ ವಕೀಲರ ಸಂಘದ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು ಎಂದಿದ್ದಾರೆ. ಇದನ್ನೂ ಓದಿ: ಮಾಡಾಳ್ ಭ್ರಷ್ಟಾಚಾರ ಪಕ್ಷಕ್ಕೆ ಮುಜುಗರ; ಆರೋಪಿಗಳ ಪರ ಜೈಕಾರ ಹಾಕೋದು ಡಿಕೆಶಿ ಸಂಸ್ಕೃತಿ – ಸಿ.ಟಿ ರವಿ
Advertisement
Advertisement
ಸಾಮಾನ್ಯ ಜನರಿಗೆ ನ್ಯಾಯಾಲಯ ಪ್ರಕ್ರಿಯೆಗಳಲ್ಲಿ ವಿಳಂಬವಾಗುತ್ತಿದೆ. ಆದರೆ ಮಾಡಾಳ್ ಪ್ರಕರಣದಲ್ಲಿ ತ್ವರಿತವಾಗಿ ಜಾಮೀನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಹಾಗೂ ಹೈಕೊರ್ಟ್‍ನ (High Court) ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದೇವೆ. ಇಂತಹ ವ್ಯವಸ್ಥೆಯನ್ನು ಜನ ಸಾಮಾನ್ಯರಿಗೂ ಒದಗಿಸಿಕೊಡುವಂತೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Advertisement
Advertisement
ಜನರಿಗೆ ಅನುಕೂಲವಾಗುವಂತೆ ನಾವು ಮನವಿ ಮಾಡಿದ್ದೇವೆ. ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿಯವರ (CJI) ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವುದಕ್ಕೂ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಹೆಂಡತಿ ಹೆಸರಿನಲ್ಲಿ ಬಿಜೆಪಿ ರಾಜಕಾರಣ ಮಾಡಲ್ಲ: ಕಟೀಲ್