ಚೆನ್ನೈ: ಎಐಎಡಿಎಂಕೆ ಮುಖ್ಯಸ್ಥೆ ವಿಕೆ ಶಶಿಕಲಾ ಪತಿ ನಟರಾಜನ್ ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣ ಮಾರ್ಚ್ 16 ರಂದು ನಟರಾಜನ್ ಚೆನ್ನೈನ ಗ್ಲೆನೀಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಬಹುಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ 1.30ರ ವೇಳೆಗೆ ನಟರಾಜನ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಶಶಿಕಲಾ ಆಗಮನದ ಬಳಿಕ ಅಂತ್ಯಸಂಸ್ಕಾರ ನಡೆಯಲಿದ್ದು, ರಾಮಚಂದ್ರ ಆಸ್ಪತ್ರೆಯಲ್ಲಿ ನಟರಾಜನ್ ಮೃತದೇಹ ಸಂರಕ್ಷಣೆ ಮಾಡಲಾಗಿದೆ. ಶಶಿಕಲಾ ಈಗಾಗಲೇ ಪೆರೋಲ್‍ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.