ಮಾಸ್ಕೋ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ (Moscow) ನಡೆದ ಉಗ್ರರ ದಾಳಿಯು ಅನಾಗರಿಕ ಭಯೋತ್ಪಾದಕ ಕೃತ್ಯ (Russia Terror Attack) ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬೇಸರ ಹೊರಹಾಕಿದ್ದಾರೆ.
ರಕ್ತಸಿಕ್ತ, ಬರ್ಬರ ಭಯೋತ್ಪಾದಕ ಕೃತ್ಯಕ್ಕೆ ಸಂಬಂಧಿಸಿದಂತೆ ನಾನು ಇಂದು ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ದಾಳಿಯಲ್ಲಿ ಅಮಾಯಕರು, ಶಾಂತಿಪ್ರಿಯ ಜನರು ಬಲಿಯಾಗಿದ್ದಾರೆ. ನಾನು ಮಾ.24 ಅನ್ನು ರಾಷ್ಟ್ರೀಯ ಶೋಕಾಚರಣೆಯ ದಿನವೆಂದು ಘೋಷಿಸುತ್ತೇನೆ ಎಂದು ಪುಟಿನ್ (Vladimir Putin) ದೂರದರ್ಶನದ ಭಾಷಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾದಲ್ಲಿ ಭೀಕರ ಭಯೋತ್ಪಾದಕ ದಾಳಿ ಪ್ರಕರಣ – 11 ಮಂದಿ ಬಂಧನ
Advertisement
Advertisement
ದಾಳಿಯಲ್ಲಿ ಭಾಗಿಯಾಗಿರುವ ಎಲ್ಲರಿಗೂ ಕಠಿಣ ಪ್ರತೀಕಾರ ನೀಡುವುದಾಗಿ ರಷ್ಯಾ ಅಧ್ಯಕ್ಷರು ಪ್ರತಿಜ್ಞೆ ಮಾಡಿದ್ದಾರೆ. ‘ಜನರನ್ನು ಕೊಂದ ಭಯೋತ್ಪಾದಕ ದಾಳಿಯ ಎಲ್ಲಾ ನಾಲ್ಕು ಅಪರಾಧಿಗಳನ್ನು ಬಂಧಿಸಲಾಗಿದೆ. ಭಯೋತ್ಪಾದಕರು, ಕೊಲೆಗಾರರು, ಮಾನವರಲ್ಲದವರು ಪ್ರತೀಕಾರದ ಭವಿಷ್ಯವನ್ನು ಎದುರಿಸುತ್ತಾರೆ. ಹೆಚ್ಚುವರಿ ಭದ್ರತಾ ಕ್ರಮಗಳನ್ನು ದೇಶಾದ್ಯಂತ ಕೈಗೊಳ್ಳಲಾಗಿದೆ’ ಎಂದು ಪುಟಿನ್ ಹೇಳಿದ್ದಾರೆ.
Advertisement
ಮಾಸ್ಕೋದಲ್ಲಿ ನಡೆದ ದಾಳಿಗೂ ಉಕ್ರೇನ್‌ಗೂ ಸಂಬಂಧವಿದೆ. ಬಂಧಿತ ನಾಲ್ವರು ದಾಳಿಕೋರರು ಉಕ್ರೇನ್ ಕಡೆಗೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ದಾಳಿಕೋರರನ್ನು ರಷ್ಯಾದಿಂದ ಗಡಿ ದಾಟಿಸಲು ಉಕ್ರೇನಿಯನ್ ಕಡೆಯ ಕೆಲವರು ಸಿದ್ಧತೆ ನಡೆಸಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯು ತೋರಿಸಿದೆ ಎಂದು ಪುಟಿನ್ ಆರೋಪಿಸಿದ್ದಾರೆ. ಇದನ್ನೂ ಓದಿ: ಮಾಸ್ಕೋದಲ್ಲಿ ಉಗ್ರರ ದಾಳಿ ಬಗ್ಗೆ ಮೊದಲೇ ಗೊತ್ತಿತ್ತು, ರಷ್ಯಾಗೂ ಎಚ್ಚರಿಕೆ ನೀಡಿತ್ತು – ಅಮೆರಿಕ
Advertisement
ಇಸ್ಲಾಮಿಕ್ ಸ್ಟೇಟ್ (ISIS) ಭೀಕರ ದಾಳಿಯ ಹೊಣೆಗಾರಿಕೆ ಹೊತ್ತುಕೊಂಡಿದೆ. ಆದರೆ ಸಮರ್ಥನೀಯ ಯಾವುದೇ ಪುರಾವೆಗಳನ್ನು ಒದಗಿಸಲಿಲ್ಲ.