ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಶೀಘ್ರದಲ್ಲೇ ಭಾರತಕ್ಕೆ (India) ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗುರುವಾರ ತಿಳಿಸಿದ್ದಾರೆ.
ಮಾಸ್ಕೋದಲ್ಲಿರುವ ದೋವಲ್, ಪುಟಿನ್ ಭೇಟಿ ದಿನವನ್ನು ನಿರ್ದಿಷ್ಟಪಡಿಸಿಲ್ಲ. ಆದರೆ ಇಂಟರ್‌ಫ್ಯಾಕ್ಸ್ ಸುದ್ದಿ ಸಂಸ್ಥೆ ವರದಿ ಮಾಡಿರುವ ಪ್ರಕಾರ, ಈ ವರ್ಷದ ಕೊನೆಯಲ್ಲಿ ಅವರು ಭೇಟಿ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಶಾಕ್ – ಆಮದುಗಳ ಮೇಲೆ 50% ಸುಂಕ ವಿಧಿಸಿದ ಟ್ರಂಪ್
ನಮ್ಮದು ವಿಶೇಷವಾದ, ದೀರ್ಘವಾದ ಸಂಬಂಧ. ನಾವು ಈ ಸಂಬಂಧವನ್ನು ಗೌರವಿಸುತ್ತೇವೆ. ನಾವು ಉನ್ನತ ಮಟ್ಟದ ಸಂಬಂಧಗಳನ್ನು ಹೊಂದಿದ್ದೇವೆ. ಈ ಉನ್ನತ ಮಟ್ಟದ ಸಂಬಂಧಗಳು ಗಣನೀಯವಾಗಿ ಕೊಡುಗೆ ನೀಡಿವೆ. ಅಧ್ಯಕ್ಷ ಪುಟಿನ್ ಅವರ ಭಾರತ ಭೇಟಿಯ ಬಗ್ಗೆ ತಿಳಿದು ನಾವು ತುಂಬಾ ಉತ್ಸುಕರಾಗಿದ್ದೇವೆ ಎಂದು ದೋವಲ್ ಹೇಳಿದ್ದಾರೆ.
ರಷ್ಯಾದೊಂದಿಗಿನ ವ್ಯಾಪಾರ ಸಂಬಂಧಗಳ ಕುರಿತು ಭಾರತ ಮತ್ತು ಅಮೆರಿಕ ನಡುವೆ ತಿಕ್ಕಾಟ ಹೆಚ್ಚುತ್ತಿರುವ ಹೊತ್ತಲ್ಲೇ ಈ ಪ್ರವಾಸದ ಘೋಷಣೆ ಕೇಳಿಬಂದಿದೆ. ರಷ್ಯಾದಿಂದ ಇಂಧನ ಖರೀದಿಸುವ ಮೂಲಕ ಉಕ್ರೇನ್ ವಿರುದ್ಧದ ಮಾಸ್ಕೋ ಯುದ್ಧಕ್ಕೆ ಭಾರತ ಸಹಾಯ ಮಾಡುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಇದು ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಮಾತುಕತೆಗಳನ್ನು ಹಳಿತಪ್ಪಿಸಿದೆ. ಇದನ್ನೂ ಓದಿ: ಭಾರತ ಕೊಟ್ಟ ತಿರುಗೇಟಿಗೆ ಸರಿಯಾಗಿ ಉತ್ತರ ನೀಡದೇ ನುಣುಚಿದ ಟ್ರಂಪ್
ಟ್ರಂಪ್ ಹೊಸ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದು, ರಷ್ಯಾದ ತೈಲ ಖರೀದಿಯನ್ನು ಮುಂದುವರೆಸಿದ್ದಕ್ಕಾಗಿ ಭಾರತದಿಂದ ಆಮದು ಮಾಡಿಕೊಳ್ಳುವ ಉತ್ಪನ್ನಗಳ ಮೇಲೆ 50% ಸುಂಕ ವಿಧಿಸುವುದಾಗಿ ತಿಳಿಸಿದ್ದಾರೆ.
ಭಾರತ ಮತ್ತು ರಷ್ಯಾ ದೀರ್ಘಕಾಲದ ಸಂಬಂಧ ಹೊಂದಿವೆ. ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳು ಸೋವಿಯತ್ ಯುಗದಿಂದಲೂ ಇವೆ. ಎರಡೂ ರಾಷ್ಟ್ರಗಳು ತಮ್ಮ ಆರ್ಥಿಕ ಸಹಕಾರವನ್ನು ಬಲಪಡಿಸಿಕೊಂಡಿವೆ. ಇದನ್ನೂ ಓದಿ: ಟ್ರಂಪ್ ಬೆದರಿಕೆಗೆ ಡೋಂಟ್ ಕೇರ್ – ಸಂಬಂಧ ಬಲಪಡಿಸಲು ರಷ್ಯಾಗೆ ಅಜಿತ್ ದೋವಲ್ ಭೇಟಿ