ಕೋಲಾರ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ (S Muniswamy) ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ (SN Narayanaswamy) ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್‌ಐಆರ್ (FIR) ದಾಖಲಿಸಲಾಗಿದೆ.
ಶಾಸಕ ಎಸ್‌ಎನ್ ನಾರಾಯಣಸ್ವಾಮಿ ವಿರುದ್ಧ ಬಿಜೆಪಿ (BJP) ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ದೂರು ನೀಡಿದ್ದು, ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಸೆ.25ರಂದು ನಗರದ ಚನ್ನಯ್ಯ ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮುನಿಸ್ವಾಮಿ ಹಾಗೂ ನಾರಾಯಣಸ್ವಾಮಿ ಅವರು ಪರಸ್ಪರ ಗಲಾಟೆ ಮಾಡಿಕೊಂಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಈ ವೇಳೆ ಎಸ್ಪಿ ನಾರಾಯಣ ಅವರು ಇಬ್ಬರ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಅಲ್ಲದೇ ಜಿಲ್ಲಾ ಮಂತ್ರಿ ಭೈರತಿ ಸುರೇಶ್ ಮಧ್ಯ ಪ್ರವೇಶಿಸಿ ಸಂಸದರಿಂದ ಅಗಬಹುದಾದಂತಹ ಮಾರಣಾಂತಿಕ ಹಲ್ಲೆಯನ್ನು ತಪ್ಪಿಸಿದ್ದಾರೆ. ಇದನ್ನೂ ಓದಿ: ಕೈಯಿಂದ ಲೋಕ ಸಮರಕ್ಕೆ ತಯಾರಿ – ಸಿಎಂ ಪುತ್ರ ಯತೀಂದ್ರಗೆ ಸಿಗುತ್ತಾ ಟಿಕೆಟ್?
Advertisement
Advertisement
ಸಂಸದ ಮುನಿಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಶಾಸಕ ಎಸ್.ಎನ್ ನಾರಾಯಣಸ್ವಾಮಿ ದೂರು ನೀಡಿದ್ದಾರೆ. ಇವರ ದೂರಿನ ಅನ್ವಯ ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸಂಸದ ಮುನಿಸ್ವಾಮಿ ಅವರ ಮೇಲೆ ಒಂದೇ ತಿಂಗಳಲ್ಲಿ ಎರಡನೇ ಬಾರಿ ಎಫ್‌ಐಆರ್ ದಾಖಲಿಸಲಾಗಿದೆ. ಅರಣ್ಯ ಇಲಾಖೆ ತೆರವು ಕಾರ್ಯಾಚರಣೆ ವಿಚಾರದಲ್ಲಿ ಮುನಿಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಎ1 ಆರೋಪಿಯಾಗಿ ಮುನಿಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಇದನ್ನೂ ಓದಿ: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ – ದಾವಣಗೆರೆ ಮೂಲದ ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್
Advertisement
Advertisement
ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಸದ ಮುನಿಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈಗಾಗಲೇ ಎಸ್.ಎನ್ ನಾರಾಯಣಸ್ವಾಮಿ ಹಾಗೂ ಎಸ್ಪಿ ನಾರಾಯಣ್ ವಿರುದ್ಧ ರಾಜ್ಯಪಾಲರಿಗೆ ಮುನಿಸ್ವಾಮಿ ದೂರು ನೀಡಿದ್ದಾರೆ. ಸೆ.27ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಸಂಸದ ಮುನಿಸ್ವಾಮಿ ದೂರು ನೀಡಿದ್ದು, ಇದರ ಬೆನ್ನಲ್ಲೇ ಶನಿವಾರ ಸಂಸದ ಮುನಿಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ
Web Stories