ಬೆಂಗಳೂರು: ಜನಸಂಖ್ಯೆಗೆ ಅನುಗುಣವಾಗಿ ಒಕ್ಕಲಿಗ ಸಮುದಾಯದ (Vokkaliga Community) ಮೀಸಲಾತಿ (Reservation) ಪ್ರಮಾಣವನ್ನು ಶೇ.4ರಿಂದ ಶೇ.10ಕ್ಕೆ ಹೆಚ್ಚಿಸಬೇಕು ಎಂದು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.
ರಾಜ್ಯದ ಜನಸಂಖ್ಯೆಯಲ್ಲಿ ಶೇ.16ರಷ್ಟು ಒಕ್ಕಲಿಗ ಸಮುದಾಯದ (Vokkaliga Community) ಜನಸಂಖ್ಯೆ ಇದ್ದು, ಶೇ.4 ಮೀಸಲಾತಿ ಕಡಿಮೆಯಾಗಿದೆ. ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿನ 3A ಅಡಿಯಲ್ಲಿ ಒಕ್ಕಲಿಗರ ಸಮುದಾಯ ಸೇರಿಸಲಾಗಿದೆ. 3A ನಲ್ಲಿ ಒಕ್ಕಲಿಗರ ಉಪ ಪಂಗಡಗಳು ಹಾಗೂ ಇತರೆ ಜಾತಿಗಳೂ (Cast) ಸೇರಿವೆ ಎಂದು ಹೇಳಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಪೋಸ್ಟ್ ಮಾಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು
Advertisement
Advertisement
ರಾಜ್ಯ ಸರ್ಕಾರ (Government Of Karnataka) ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ (SC ST Reservation) ಹೆಚ್ಚಳ ಮಾಡಿರುವುದನ್ನು ಒಕ್ಕಲಿಗರ ಸಂಘ ಸ್ವಾಗತಿಸುತ್ತದೆ. ಅದೇ ರೀತಿ 3ಎ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.10ಕ್ಕೆ ಹೆಚ್ಚಿಸುವ ಮೂಲಕ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಸಂಘ ಮನವಿ ಮಾಡಿದೆ. ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಕೊಡುಗೆ ನೆನೆಯದಿದ್ದರೆ ನರಕಕ್ಕೆ ಹೋಗ್ತೀರಾ: ಬಿ.ಎಲ್. ಸಂತೋಷ್
Advertisement
Advertisement
ನಮ್ಮ ಸಮುದಾಯ ಅನಾದಿಕಾಲದಿಂದಲೂ ಕೃಷಿಯನ್ನೇ ನಂಬಿ ಬದುಕುತ್ತಿದೆ. ಬೇಸಾಯದ ವೆಚ್ಚ ದಿನದಿಂದ ದಿನಕ್ಕೆ ದುಬಾರಿಯಾಗಿದ್ದು, ಅತಿವೃಷ್ಟಿ, ಪ್ರವಾಹ, ಬರ, ಕೀಟ ಹಾಗೂ ರೋಗ ಬಾಧೆಯಿಂದ ಪದೇ-ಪದೇ ಸಂಕಷ್ಟಕ್ಕೆ ಸಿಲುಕುತ್ತಿದೆ. ನಮ್ಮ ಸಮುದಾಯದ ಶೇ.70ರಷ್ಟು ಮಂದಿ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಸಾಕಷ್ಟು ಬಡವರೂ ಇದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಈ ಮೂಲಕ ಒಕ್ಕಲಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷರು ಹಾಗೂ ಶಾಸಕರೂ ಆದ ಸಿ.ಎನ್.ಬಾಲಕೃಷ್ಣ (CN Balakrishna), ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.