ಕೀವ್: ನಾನು ಕೀವ್‍ನಲ್ಲಿದ್ದೇನೆ. ನಾನು ಇಲ್ಲಿ ಕೆಲಸ ಮಾಡುತ್ತಿದ್ದೇನೆ, ಹೊರತಾಗಿ ತಪ್ಪಿಸಿಕೊಂಡು ಹೋಗಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ ಹೇಳಿದ್ದಾರೆ.
Advertisement
ರಷ್ಯಾ ಉಕ್ರೇನ್ ಯುದ್ಧದ ನಡುವಯೇ ಉಕ್ರೇನ್ ಅಧ್ಯಕ್ಷ ಪೋಲೆಂಡ್‍ಗೆ ಪಲಾಯನ ಮಾಡಿದ್ದಾರೆ ಎನ್ನುವ ಆರೋಪಗಳನ್ನು ಝೆಲೆನ್ಸ್ಕಿ ತಿರಸ್ಕರಿಸಿದ್ದಾರೆ. ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಝೆಲೆನ್ಸ್ಕಿ ವೀಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವೀಡಿಯೋದಲ್ಲಿ ಝೆಲೆನ್ಸ್ಕಿ ತಮ್ಮ ಕಚೇರಿಯಲ್ಲಿಯೇ ಇರುವುದು ಹಾಗೂ ಅವರ ಜೊತೆಗೆ ಮತ್ತೊಬ್ಬ ಅಧಿಕಾರಿ ಕೂಡ ಇರುವುದು ಕಂಡು ಬಂದಿದೆ. ನಾನು ಕೀವ್‍ನಲ್ಲಿದ್ದೇನೆ. ನಾನು ಇಲ್ಲಿ ಕೆಲಸ ಮಾಡುತ್ತಿದ್ದೇನೆ, ಹೊರತಾಗಿ ತಪ್ಪಿಸಿಕೊಂಡು ಹೋಗಿಲ್ಲ ಎಂದು ವೀಡಿಯೋಗೆ ಶಿರ್ಷಿಕೆ ನೀಡಿದ್ದಾರೆ. ಇದನ್ನೂ ಓದಿ: ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟಿನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ
Advertisement
View this post on Instagram
Advertisement
ಯುದ್ಧ ಆರಂಭವಾಗುತ್ತಿದ್ದಂತೆ ಹಲವಾರು ಪಾಶ್ಚಿಮಾತ್ಯ ರಾಷ್ಟ್ರಗಳು ಝೆಲೆನ್ಸ್ಕಿ ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು. ಜೊತೆಗೆ ತಮ್ಮ ರಾಷ್ಟ್ರಕ್ಕೆ ಆಹ್ವಾನವನ್ನು ನೀಡಿದ್ದವು. ಆದರೆ ಯಾವುದೇ ಕಾರಣಕ್ಕೂ ದೇಶ ತೊರೆಯುವುದಿಲ್ಲ ಎಂದು ಝೆಲೆನ್ಸ್ಕಿ ಹೇಳಿದ್ದರು. ಇದೇ ವೇಳೆ ತಾವು ಈ ಹಿಂದೆ ದೇಶ ತೊರೆದಿದ್ದಾರೆ ಎನ್ನುವ ಊಹಾಪೋಹವನ್ನು ತಳ್ಳಿಹಾಕಿದ್ಧಾರೆ.
Advertisement
ರಷ್ಯಾ ಯುದ್ಧ ಆರಂಭಿಸಿದ ನಂತರ ಉಕ್ರೇನಿನ ಅಧ್ಯಕ್ಷ ಝೆಲೆನ್ಸ್ಕಿ ಹತ್ಯೆಗೆ ಮೂರು ಬಾರಿ ಪ್ರಯತ್ನ ನಡೆಸಲಾಗಿತ್ತು. ಆದರೆ ಉಕ್ರೇನಿನ ಅಧಿಕಾರಿಗಳಿಗೆ ಈ ಬಗ್ಗೆ ಮೊದಲೇ ಮಾಹಿತಿ ಲಭ್ಯವಾಗಿದ್ದ ಹಿನ್ನೆಲೆಯಲ್ಲಿ ಸಂಚು ವಿಫಲಗೊಳ್ಳುವಂತೆ ಮಾಡಿದ್ದರು ಎಂದು ವರದಿಗಳು ತಿಳಿಸಿವೆ.