ಮೈಸೂರು: ಉತ್ತರಾಧಿಕಾರಿ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ..
ವೋಟ್ ಚೋರಿ (Vote Choroi) ಸಹಿ ಸಂಗ್ರಹ ಸಭೆಯಲ್ಲಿ ಮತಗಳ್ಳತನ ವಿರುದ್ಧ ಮಾತನಾಡುವಾಗ ಕೇಂದ್ರ ಚುನಾವಣಾ ಆಯುಕ್ತರನ್ನು (Chief Election Commissioner of India) ರಾಜಕೀಯ ಪುಢಾರಿ ಎಂದು ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಇದನ್ನೂ ಓದಿ: ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿದ್ದರಾಮಯ್ಯ
ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ನಡೆದ ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಈ ವಿವಾದಾತ್ಮಕ ಭಾಷಣ ಮಾಡಿದ್ದಾರೆ. ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ. ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ ರೀತಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಿಹಾರ, ಪಶ್ಚಿಮ ಬಂಗಾಳ ಮತದಾರರ ಪಟ್ಟಿಯಲ್ಲಿ ಹೆಸರು – ಚುನಾವಣಾ ಆಯೋಗದಿಂದ ಪ್ರಶಾಂತ್ ಕಿಶೋರ್‌ಗೆ ನೋಟಿಸ್
ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ (Rahul Gandhi) ಸಾಕ್ಷಿ ಸಮೇತ ದೂರು ಕೊಟ್ಟಿದ್ದಾರೆ. ಆದರೆ ದೂರು ಕೊಟ್ಟವರ ಮೇಲೆಯೇ ಚುನಾವಣಾ ಆಯುಕ್ತರು ಮಾತನಾಡುತ್ತಿದ್ದಾರೆ. ಆರೋಪ ಮಾಡಿರುವವರ ಮೇಲೆಯೇ ದಾಳಿ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬಗ್ಗೆ ಟೀಕಿಸಿದ್ದಾರೆ.

