Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನೇ ಅಭ್ಯರ್ಥಿ ಎಂದು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ನಾನೇ ಅಭ್ಯರ್ಥಿ ಎಂದು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ: ಸಿದ್ದರಾಮಯ್ಯ

Belgaum

ನಾನೇ ಅಭ್ಯರ್ಥಿ ಎಂದು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ: ಸಿದ್ದರಾಮಯ್ಯ

Public TV
Last updated: April 28, 2024 9:34 pm
Public TV
Share
4 Min Read
Siddaramaiah Politics Congress BJP Rameshwaram Cafe
SHARE

ಬೆಳಗಾವಿ: ಲೋಕಸಭಾ ಕ್ಷೇತ್ರದಿಂದ (Lok Sabha Election) ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ (Congress) ಅಭ್ಯರ್ಥಿಗೆ ಮತಹಾಕಿದರೆ ನನಗೆ ಮತ ಹಾಕಿದಂತೆ. ಈ ಮೂಲಕ ಸ್ಥಳೀಯ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕರೆ ನೀಡಿದರು.

ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇ 7 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ತನ್ನ ಸದಸ್ಯನ ಮಗಳನ್ನೇ ರಕ್ಷಣೆ ಮಾಡೋಕೆ ಆಗ್ಲಿಲ್ಲ: ನೇಹಾ ಹತ್ಯೆ ಖಂಡಿಸಿದ ಮೋದಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. 2014ರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಲೋಕಸಭೆಗೆ ನಿಂತು ಸ್ವಲ್ಪ ಮತಗಳಿಂದ ಸೋತಿದ್ದರು. ಈ ಬಾರಿ ಅವರ ಮಗನನ್ನು ಆರಿಸಿ ಲೋಕಸಭೆಗೆ ಕಳುಹಿಸಿಕೊಡಬೇಕು ಎಂದರು. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಪೀಠ 7ನೇ ಆವೃತ್ತಿಗೆ ಅದ್ದೂರಿ ತೆರೆ

ಕಳೆದ ಚುನಾವಣೆಯಲ್ಲಿ ಕರ್ನಾಟಕದಿಂದ 25 ಜನ ಬಿಜೆಪಿಯಿಂದ ಗೆದ್ದಿದ್ದರು. ಸುರೇಶ್ ಅಂಗಡಿ ಮಂತ್ರಿ ಆಗಿದ್ದರು. ಬಳಿಕ ಅವರ ಪತ್ನಿ ಕೂಡ ಗೆದ್ದಿದ್ದರು. ಬಿಜೆಪಿಯ 25 ಜನ ಎಂಪಿಗಳು ಮಾತಾಡಿಲ್ಲ. ಹೀಗಿರುವಾಗ ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಎದುರು ಮಾತಾಡುವ ಧೈರ್ಯ ಇದ್ಯಾ? ಮೋದಿ ಕಂಡರೆ ಅವರಿಗೆ ಭಯ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಹೆಚ್‌.ಡಿ.ರೇವಣ್ಣ ಎ1, ಪ್ರಜ್ವಲ್‌ ರೇವಣ್ಣ ಎ2 ಆರೋಪಿ – ಮನೆ ಕೆಲಸದಾಕೆಯಿಂದ ದೂರು

ಮಂಗಳಾ ಅಂಗಡಿಗೆ ಟಿಕೆಟ್ ಕೊಟ್ಟರೆ ಗೆಲ್ಲೋದಿಲ್ಲ ಅಂತ ಈ ಬಾರಿ ಜಗದೀಶ್ ಶೆಟ್ಟರ್ ಅವರನ್ನು ಹುಬ್ಬಳ್ಳಿಯಿಂದ ನಿಲ್ಲಿಸಿದ್ದಾರೆ. ಜಗದೀಶ್ ಶೆಟ್ಟರ್ ಚಂಚಲ ಮನಸಿನ ವ್ಯಕ್ತಿ, ಬದ್ಧತೆ ಇಲ್ಲದ ಮನುಷ್ಯ. ಕಳೆದ ಬಾರಿ ಬಿಜೆಪಿಯವರು ಟಿಕೆಟ್ ಕೊಡದಿದ್ದಕ್ಕೆ ಕಾಂಗ್ರೆಸ್‌ಗೆ ಬಂದರು. ಕಾಂಗ್ರೆಸ್ ಟಿಕೆಟ್ ಕೊಟ್ಟರೂ ಶೆಟ್ಟರ್ ಸೋತರು. ಇದೀಗ ಬೆಳಗಾವಿಯಲ್ಲಿ ಮಂಗಳಾ ಅಂಗಡಿ ಬದಲಿಗೆ ಶೆಟ್ಟರ್ ಅವರನ್ನು ನಿಲ್ಲಿಸಲಾಗಿದೆ. ಕರ್ನಾಟಕದಲ್ಲಿ 12, ದೇಶಾದ್ಯಂತ 100 ಹಾಲಿ ಎಂಪಿಗಳಿಗೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ. ಇನ್ನು ಹುಬ್ಬಳ್ಳಿಯಲ್ಲಿ ಗೆಲ್ಲದ ಶೆಟ್ಟರ್ ಇಲ್ಲಿ ನಿಜವಾಗಿಯೂ ಗೆಲ್ತಾರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮೋದಿ ಕಾರ್ಯಕ್ರಮ ಸ್ಥಳಕ್ಕೆ NSUI ಸಂಘಟನೆ ಮುತ್ತಿಗೆ ಯತ್ನ

ಪ್ರಧಾನಿ ಮೋದಿ ಮಾತನಾಡಿದರೆ ಹಸಿ ಸುಳ್ಳು. ಶಿವಾಜಿ, ಕಿತ್ತೂರು ರಾಣಿ ಚೆನ್ನಮ್ಮಗೆ ಕಾಂಗ್ರೆಸ್ ಅವಮಾನಿಸಿದೆ ಎಂದು ಮೋದಿ ಸುಳ್ಳು ಹೇಳಿದ್ದಾರೆ. ಈ ಮಹನೀಯರನ್ನು ಅತ್ಯಂತ ಗೌರವಯುತವಾಗಿ ಕಾಂಗ್ರೆಸ್ ನೋಡಿಕೊಂಡಿದೆ. ಭಕ್ತರ ಅನುಕೂಲಕ್ಕೆ ಯಲ್ಲಮ್ಮನ ಪ್ರಾಧಿಕಾರ ಮಾಡುತ್ತೇವೆ ಎಂದರು. ಇದನ್ನೂ ಓದಿ: ನೇಹಾ ಬದಲು ಮುಸ್ಲಿಂ ಸಾವಾಗಿದ್ರೆ ಸಿಎಂ ಹೆಲಿಕಾಪ್ಟರ್ ಇಳಿಸ್ತಿದ್ರು: ಯತ್ನಾಳ್

10 ವರ್ಷಗಳಿಂದ ಮೋದಿ ಪ್ರಧಾನಿ ಆಗಿದ್ದರೂ ಜನಸಾಮಾನ್ಯರಿಗೆ ಏನು ಪ್ರಯೋಜನ ಆಗಿಲ್ಲ. ಅಗತ್ಯ ಬೆಲೆ ಇಳಿಯಲಿಲ್ಲ. ಎಲ್ಲಿ ಹೋಯಿತು ಮೋದಿ ಹೇಳಿದ ಅಚ್ಛೆ ದಿನ್? 2014ರಲ್ಲಿ ಡಿಸೇಲ್ 48, ಇವತ್ತು 95 ರೂಪಾಯಿ ಆಗಿದೆ. ಅಗತ್ಯ ವಸ್ತುಗಳ ಬೆಲೆ ದುಪ್ಪಟ್ಟು ಆಗಿದೆ. ರೈತರ ಆದಾಯ ದುಪ್ಪಟ್ಟು ಮಾಡಲಿಲ್ಲ. ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ. ಸುಳ್ಳೇ ಅವರ ಮನೆ ದೇವರು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್ – ನೊಂದ ಮಹಿಳೆಯಿಂದ ಮಹಿಳಾ ಆಯೋಗಕ್ಕೆ ದೂರು

ನಾವು ನುಡಿದಂತೆ ನಡೆದಿದ್ದೇವೆ. ಚುನಾವಣೆಗೂ ಮುನ್ನ ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದುವರೆಗೂ 200 ಕೋಟಿ ಮಹಿಳೆಯರು ಫ್ರೀ ಆಗಿ ಪ್ರಯಾಣ ಮಾಡಿದ್ದಾರೆ. ಈ ಹಿಂದಿನ ನಮ್ಮ ಸರ್ಕಾರ ಅನ್ನಭಾಗ್ಯ ಕಾರ್ಯಕ್ರಮದಡಿ 7 ಕೆಜಿ ನೀಡುತ್ತಿದ್ದೆವು. ಬಿಎಸ್ ಯಡಿಯೂರಪ್ಪ 5 ಕೆಜಿಗೆ ಇಳಿಸಿದರು. 2023ರಲ್ಲಿ 10ಕೆಜಿ ಅಕ್ಕಿಯನ್ನು ಫ್ರೀ ಆಗಿ ಕೊಡುತ್ತೇವೆ ಎಂದು ಹೇಳಿದರು. ನಾವು ದುಡ್ಡು ಕೊಟ್ಟರು ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ. ಅಕ್ಕಿ ಬದಲಿಗೆ ತಿಂಗಳಿಗೆ 170 ರೂಪಾಯಿ ಕೊಡ್ತಾ ಇದ್ದೀವಿ. ಗೃಹ ಜ್ಯೋತಿ 200 ಯೂನಿಟ್‌ರವರೆಗೆ ಎಲ್ಲರಿಗೂ ಫ್ರೀ, ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ ಮನೆಯ ಒಡತಿಯರಿಗೆ ತಿಂಗಳಿಗೆ 2,000 ರೂ. ನೀಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಪ್ರತಿ ಕುಟುಂಬಕ್ಕೆ 5 ರಿಂದ 6 ಸಾವಿರ ರೂ. ಸಿಗುತ್ತಿದೆ ಎಂದರು. ಇದನ್ನೂ ಓದಿ: ರಾಮ ಮಂದಿರ ನಿರ್ಮಾಣ ಮಾಡದಂತೆ ಕಾಂಗ್ರೆಸ್‌, ಹಿಂಬಾಲಕರಿಂದ ಕುತಂತ್ರ: ಮೋದಿ

ಲೋಕಸಭಾ ಚುನಾವಣಾ ನಂತರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ. ಇದಕ್ಕಾಗಿ 50 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಮೀಸಲು ಇಡಲಾಗಿದೆ. ನಮ್ಮ ಖಜಾನೆ ಖಾಲಿ ಆಗಿಲ್ಲ, ಆಗೋದು ಇಲ್ಲ ಎಂದು ಹೇಳಿದರು. ಬರ ಪರಿಹಾರ ನೀಡಲು ವಿಳಂಬ ಮಾಡಿದ ಕೇಂದ್ರ ಸರ್ಕಾರ 100 ರೂಪಾಯಿ ಕೇಳಿದರೆ ಕೇವಲ 19 ರೂಪಾಯಿ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ – ಸಮಗ್ರ ತನಿಖೆಗೆ ಎಸ್‌ಐಟಿ ರಚನೆ

TAGGED:belagavicongressnarendra modisiddaramaiahಕಾಂಗ್ರೆಸ್ನರೇಂದ್ರ ಮೋದಿಬೆಳಗಾವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Mudigere Police Station
Chikkamagaluru

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Public TV
By Public TV
3 minutes ago
Gold
Bengaluru City

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Public TV
By Public TV
12 minutes ago
Bidar Medical Student Suicide
Bidar

ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
20 minutes ago
Ballari
Bellary

ಬಳ್ಳಾರಿಯ KIADB ಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – 4 ವರ್ಷಗಳಲ್ಲಿ 17.17 ಕೋಟಿ ಲೂಟಿ

Public TV
By Public TV
36 minutes ago
Eshwar Khandre Sameeksha Reddy 1
Bengaluru City

ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಈಶ್ವರ್‌ ಖಂಡ್ರೆ ಭರವಸೆ

Public TV
By Public TV
41 minutes ago
Karnataka grants Rs 10 crore to Wayanad landslide victims BJP JDS slams congress govt
Bengaluru City

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ – ಬಿಜೆಪಿ, ಜೆಡಿಎಸ್‌ ಆಕ್ರೋಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?