-ಸಂಜೆ 5 ಗಂಟೆ ಬಳಿಕ ಅತೀ ಹೆಚ್ಚು ಮತದಾನವಾಗುತ್ತದೆ
ನವದೆಹಲಿ: ಶುಕ್ರವಾರ ಬೆಂಗಳೂರಿಗೆ (Bengaluru) ಬರುವ ಮುನ್ನ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮಹಾದೇವಪುರದಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಲೋಕಸಭೆ ಚುನಾವಣೆ (Lokasabha Election) ವೇಳೆ ಮತಗಳ್ಳತನ ನಡೆದಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷ ನಾಯಕ ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದದಲ್ಲಿ ಬರುವ ಮಹಾದೇವಪುರದಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ಅಕ್ರಮ ಅಕ್ರಮ ನಡೆದಿದೆ ಎಂದು ದಾಖಲೆ ಸಮೇತವಾಗಿ ಆರೋಪಿಸಿದ್ದಾರೆ.ಇದನ್ನೂ ಓದಿ: 25 ಲಕ್ಷ ವಂಚನೆ, ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಸೂಸೈಡ್ – ಡೆತ್‌ನೋಟ್‌ನಲ್ಲಿ ಏನಿದೆ?
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 16 ಸ್ಥಾನ ಹಾಗೂ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಅಚ್ಚರಿಯಾಗಿ ಸೋಲನ್ನು ಅನುಭವಿಸಿತು. ಹೀಗಾಗಿ ಕಡಿಮೆ ಅಂತರದಲ್ಲಿ ಸೋತ ಏಳು ಕ್ಷೇತ್ರಗಳ ಪೈಕಿ ಮಹಾದೇವಪುರ ಕ್ಷೇತ್ರದಲ್ಲಿ ತನಿಖೆ ನಡೆಸಿದೆವು. ಈ ವೇಳೆ ಕಾಂಗ್ರೆಸ್ 1,15,586 ಮತಗಳನ್ನು ಪಡೆದರೆ, ಬಿಜೆಪಿ 2,29,632 ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್‌ಗಿಂತ ಬಿಜೆಪಿ 1,14,046 ಮತಗಳ ಬಹುಮತ ಪಡೆದುಕೊಂಡಿದೆ. ಈ ಮತಗಳಲ್ಲಿ 11,965 ನಕಲಿ ಮತದಾರರು, 40,009 ನಕಲಿ ವಿಳಾಸದ ಮತಗಳು, ಒಂದೇ ವಿಳಾಸದಲ್ಲಿ ಹತ್ತಾರು ಮತಗಳಿರುವಂತಹ 10,452 ಮತಗಳು, ಫೋಟೋ ಇಲ್ಲದಿರುವ 4,132 ಹಾಗೂ ಫಾರಂ 6 ದುರ್ಬಳಕೆಯಾದ 33,692 ಮತಗಳಿವೆ ಸ್ಫೋಟಕ ಆರೋಪ ಮಾಡಿದರು.
ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಚುನಾವಣೆ ಸೇರಿ ಹಲವೆಡೆ ಮತಗಳ್ಳತನ ಆಗಿದೆ. ಇನ್ನೂ ಕಳೆದ ಐದು ತಿಂಗಳಲ್ಲಿ ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಮತದಾರರು ಸೇರ್ಪಡೆಯಾಗಿದ್ದಾರೆ. ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ. ಸಂಜೆ ಐದು ಗಂಟೆಯ ಬಳಿಕ ಅತಿ ಹೆಚ್ಚು ಮತದಾನವಾಗುತ್ತದೆ ಎಂದು ಆರೋಪಿಸಿದ್ದಾರೆ.
LIVE: Press Conference – #VoteChori | Indira Bhawan, New Delhi https://t.co/BlZwacZpto
— Rahul Gandhi (@RahulGandhi) August 7, 2025
ಈ ಕುರಿತು ನಾವು ಚುನಾವಣಾ ಆಯೋಗವನ್ನು ಸಂಪರ್ಕಿಸಿದರೆ ನಮಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಆಯೋಗ ನಮಗೆ ಮತದಾರರ ಪಟ್ಟಿ ನೀಡಲು ನಿರಾಕರಿಸಿದೆ. ಅದಲ್ಲದೇ ರಾಜಕೀಯ ಪಕ್ಷಗಳಿಗೂ ಕೂಡ ಮತದಾರರ ಪಟ್ಟಿ ನೀಡಿಲ್ಲ. ಜೊತೆಗೆ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ – ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ