ಬೆಂಗಳೂರು: ಮತದಾರರ ಪಟ್ಟಿ ಕಳವು ಪ್ರಕರಣ ಸಂಬಂಧ ರಾಜಕಾರಣಿಗಳು ಕೂಡ ಇದರಲ್ಲಿ ಶಾಮಿಲಾಗಿರುವುದು ಈಗಾಗಲೇ ಬಯಲಾಗಿದೆ. ಈ ಬೆನ್ನಲ್ಲೇ ರಾಜಕಾರಣಿಗಳಿಗೆ ನಿರಂತರವಾಗಿ ಇ-ಮೇಲ್ (E-Mail) ಮಾಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ.
Advertisement
ಸುಮಾರು 20ಕ್ಕೂ ಹೆಚ್ಚು ಪ್ರಭಾವಿ ರಾಜಕಾರಣಿಗಳಿಗೆ ಇ- ಮೇಲ್ ಮಾಡಿದ್ದು ಅದರಲ್ಲಿ, ಸರ್ವೇ ಮಾಡಿ ನಿಮಗೆ ಸಹಾಯ ಮಾಡ್ತೀವಿ. ನಮ್ಮ ಕೆಲಸಕ್ಕೆ ಇಂತಿಷ್ಟು ದುಡ್ಡು ತೆಗೆದುಕೊಳ್ತೀವಿ ಎಂದು ತಿಳಿಸಲಾಗಿದೆ. ಇದಕ್ಕೆ ಒಂದಷ್ಟು ರಾಜಕಾರಣಿಗಳು ಕೂಡ ರಿಪ್ಲೆ ಮಾಡಿದ್ದಾರೆ. ಸದ್ಯ ಕಂಪ್ಯೂಟರ್ ನಲ್ಲಿ ಈ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಇದನ್ನೂ ಓದಿ: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್- ಪೊಲೀಸರ ಮುಂದೆ ನಾಲ್ವರು ತಪ್ಪೊಪ್ಪಿಗೆ
Advertisement
Advertisement
ಈ ನಡುವೆ ಚಿಲುಮೆ ಸಂಸ್ಥೆ (Chilume Enterprises Private Limited) ಯ ಮೇಲೆ ಪೊಲೀಸರ ದಾಳಿ ಮಾಡಿದ್ದು, ಈ ವೇಳೆ 80 ಬಿಎಲ್ ಓ ಕಾರ್ಡ್, ಲ್ಯಾಪ್ ಟಾಪ್ ಗಳು, ಒಂದು ಟ್ಯಾಬ್, ಕಂಪ್ಯೂಟರ್ ಗಳು, ಕೆಲವೊಂದು ಲೆಟರ್ ಹೆಡ್ ಗಳು, ಹಣ ಎಣಿಸೋ ಮೆಷಿನ್ ಹಾಗೂ ಬ್ಯಾಂಕ್ ಅಕೌಂಟ್‍ಗಳನ್ನು ಪೊಲೀಸರು ಫ್ರೀಜ್ ಮಾಡಿದ್ದಾರೆ. ಅಲ್ಲದೆ ಎಸ್‍ಬಿಐ, ಆಕ್ಸಿಸ್ ಬ್ಯಾಂಕ್‍ನಲ್ಲಿ ಕೋಟ್ಯಂತರ ರೂ. ವ್ಯವಹಾರ ಮಾಡಿರುವ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಮತದಾರರ ಪಟ್ಟಿ ಕಳವು ಆರೋಪ- ಚಿಲುಮೆ ಸಂಸ್ಥೆ ಜೊತೆ ರಾಜಕಾರಣಿಗಳೂ ಶಾಮೀಲು!
Advertisement
ನಾಲ್ವರು ಚಿಲುಮೆ ಸಿಬ್ಬಂದಿಗೆ ನೋಟಿಸ್: ವೋಟರ್ ಐಡಿಗಳ ಮಾಹಿತಿ ಸಂಗ್ರಹ ಪ್ರಕರಣ ಸಂಬಂಧ ಹಲಸೂರು ಗೇಟ್ ಪೊಲೀಸರು ವಿಚಾರಗೆ ಹಾಜರಾಗುವಂತೆ ಚಿಲುಮೆ ಸಂಸ್ಥೆಯ ನಾಲ್ವರು ಸಿಬ್ಬಂದಿಗೆ ನೋಟೀಸ್ ನೀಡಿದ್ದಾರೆ. ಪ್ರಕರಣದ ಕುರಿತು ಎಫ್‍ಐಆರ್ ದಾಖಲಾಗುತ್ತಿದ್ದಂತೆ ಮೂವರು ಎಸ್ಕೇಪ್ ಆಗಿದ್ದಾರೆ. ಚಿಲುಮೆ ಸಂಸ್ಥೆಯ ಮಾಲೀಕ ರವಿಕುಮಾರ್, ಸಿಬ್ಬಂದಿ ಕೆಂಪೇಗೌಡ ಹಾಗೂ ರಕ್ಷಿತ್ ಎಸ್ಕೇಪ್ ಆಗಿದ್ದಾರೆ.