– ಪರಿಷತ್ ಉಪಚುನಾವಣೆಯಲ್ಲಿ ಸೋತ ಮೈತ್ರಿ ಅಭ್ಯರ್ಥಿ; ಸಿಎಂ ಟಾಂಗ್
– ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ
ಬೆಂಗಳೂರು: ಬಿಜೆಪಿ (BJP) ಮತ್ತು ಜೆಡಿಎಸ್ (JDS) ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ (Vidhan Parishad By-Election) ಫಲಿತಾಂಶ ಸ್ಪಷ್ಟಪಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
Advertisement
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ. ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ. ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ (Puttanna) ಅಭಿನಂದನೆಗಳು. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದರು. ಇದನ್ನೂ ಓದಿ: ಇಡಿ, ಐಟಿಯನ್ನು ಮೋದಿ, ಅಮಿತ್ ಶಾ ಕಂಟ್ರೋಲ್ ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ್ ಖರ್ಗೆ
Advertisement
Advertisement
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ ಎಂದು ಟೀಕೆ ಮಾಡಿದರು. ಇದನ್ನೂ ಓದಿ: ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸಿ, ಕೇಂದ್ರದ ಅನುದಾನ ಬರುತ್ತದೆ: ಕಾಂಗ್ರೆಸ್‌ಗೆ ಬೊಮ್ಮಾಯಿ ಠಕ್ಕರ್
Advertisement
ಕುಟುಂಬದ ಹಿತಕ್ಕಾಗಿ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಪರಿಷತ್ ಉಪಚುನಾವಣೆಯಲ್ಲಿ ‘ಕೈ’ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು; ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗ
ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ. ಲೋಕಸಭಾ ಚುನಾವಣೆ (Lok Sabha Election) ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಅವಿರೋಧ ಆಯ್ಕೆ