ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election) ಪಂಚರತ್ನ ಯೋಜನೆಗಳನ್ನು (Pancharatna Yatra) ಇಟ್ಟುಕೊಂಡು ಅಭಿವೃದ್ಧಿಯ ಅಜೆಂಡಾದೊಂದಿಗೆ ಜನರ ಮುಂದೆ ಹೋಗುತ್ತೇನೆಯೇ ಹೊರತು, ಜಾತಿ ಮತ್ತು ಧರ್ಮ ಇಟ್ಟುಕೊಂಡು ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D Kumarswamy) ಹೇಳಿದ್ದಾರೆ.
Advertisement
ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ ನಿಮಿತ್ತ ಗ್ರಾಮ ವಾಸ್ತವ್ಯ ಹೂಡಿದ್ದ ಹೆಚ್‍ಡಿಕೆ ಭಾನುವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿ, ಸಾವಿರಾರು ಜನರನ್ನು ಅನಾಥರನ್ನಾಗಿ ಮಾಡಿದ್ದೇ ಬಿಜೆಪಿ. ಕರ್ನಾಟಕ ರಾಜ್ಯ ಅತ್ಯಂತ ಶಾಂತಿಯುತವಾಗಿ ಇದ್ದ ರಾಜ್ಯ. ಜನ ನೆಮ್ಮದಿಯಿಂದ ಇದ್ದರು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬಿಜೆಪಿ (BJP) ಬೆಂಕಿ ಹಚ್ಚುತ್ತಿದೆ. ರಾಜ್ಯದಲ್ಲಿ ಶಾಂತಿ ನೆಲೆಸಬೇಕು. ಅದಕ್ಕೆ ಜೆಡಿಎಸ್ (JDS) ಬರಲೇಬೇಕು. ಜೆಡಿಎಸ್ ಸರ್ಕಾರ ಬರುವ ಅನಿವಾರ್ಯತೆ ಹಿಂದೆಂದಿಗಿಂತ ಈಗ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಕಾವು ಪಡೆದ ರಾಜಕೀಯ – ಕನಕಪುರದ ಬಂಡೆ ಮದ್ದೂರಿನಲ್ಲಿ ಸ್ಪರ್ಧೆ?
Advertisement
Advertisement
ಮುಂದಿನ ಚುನಾವಣೆಗೆ ನಾನು ಧರ್ಮದ ಹೆಸರಿನಲ್ಲಿ ಪ್ರಚಾರ ಮಾಡ್ತಿಲ್ಲ. ಪಂಚರತ್ನ ಯೋಜನೆಯನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡ್ತಿದ್ದೇನೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಜನರ ಜೀವನ ಉತ್ತಮಗೊಳಿಸುವೆ. ಕೋವಿಡ್‍ನಿಂದ (Covid-19) ಸಾವನ್ನಪ್ಪಿದವರಿಗೆ 1 ಲಕ್ಷ ರೂ. ಪರಿಹಾರ ಕೊಡುತ್ತೇವೆ. ಬಿಜೆಪಿ ಸರ್ಕಾರದಿಂದ ಇದುವರೆಗೂ ಯಾರಿಗೂ ಒಂದು ರೂಪಾಯಿ ಸಿಕ್ಕಿಲ್ಲ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಆರೋಗ್ಯ ವ್ಯವಸ್ಥೆಯನ್ನು ಅಮೂಲಾಗ್ರವಾಗಿ ಸುಧಾರಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ. ಇದನ್ನೂ ಓದಿ: ಕೆಎಂಎಫ್ ಹಾಲು ಪೂರೈಕೆದಾರರಿಂದ ಮುಷ್ಕರ – ನಂದಿನಿ ಬೂತ್‌ಗಳಲ್ಲಿ ಹಾಲು, ಮೊಸರು ಸಿಗದೇ ಜನ ವಾಪಸ್
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k