ಮೈಸೂರು: ಕರ್ನಾಟಕ ವಿಧಾನಸಭಾ ಚುನವಾಣೆ ಇನ್ನೇನು ಹತ್ತಿರ ಬರುತ್ತಿದ್ದಂತೆ ಯದುವಂಶದ ಮಹಾರಾಜ ಯದುವೀರ್ ಒಡೆಯರ್ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡುವಂತೆ ಮಹಾರಾಜ ಯದುವೀರ್ ಒಡೆಯರ್ ಮನವಿ ಮಾಡಿದ್ದು, ಆ ವಿಡಿಯೋವನ್ನು ತಮ್ಮ ಫೇಸ್‍ಬುಕ್ ಹಾಗೂ ಇನ್ಸ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ.
“ನಮ್ಮ ಪೂರ್ವಜರ ಮಹೋನ್ನತ ಆದರ್ಶಗಳನ್ನು ಒಳಗೂಡಿಸಿಕೊಂಡು ನಮ್ಮ ನಾಡನ್ನು ಸ್ಥಾಪಿಸಿದ್ದಾರೆ. ಅವರ ಆಕಾಂಕ್ಷೆಗಳಂತೆ ನಮ್ಮ ರಾಜ್ಯ ಕಲೆ, ಸಾಹಿತ್ಯ, ವಾಸ್ತುಶಿಲ್ಪ, ವಿಜ್ಞಾನ, ಪ್ರಕೃತಿಯ ಸಂರಕ್ಷಣೆ, ಸ್ವಶ್ಚತೆ ಹಾಗು ಹುತಾತ್ಮಕರ ಯೋಜನೆಗಳು ಇವುಗಳೆಲ್ಲ ನಮ್ಮ ಅಭಿವೃದ್ಧಿ ಬಿಂದು. ಸಂಸ್ಕೃತಿ ರಾಜ್ಯದ ರಾಯಭಾರಿಗಳಾಗಿ ಮುಂಬರುವ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಅವುಗಳನ್ನು ರಕ್ಷಿಸಬೇಕು.
ನಮ್ಮ ಹಿರಿಯರ ಆಕಾಂಕ್ಷೆಗಳನ್ನು ಎತ್ತಿ ಹಿಡಿಯಬೇಕು. ನಮ್ಮ ಊರಿನ ಅನನ್ಯತೆ ಹಾಗೂ ಅಭಿವೃದ್ಧಿಗೆ ಪ್ರಜಾಪ್ರಭುತ್ವ ನೀಡಿರುವ ಮಾರ್ಗವೇ ಮತದಾನ. ಹೀಗಾಗಿ ಇದೇ ಮೇ 12ರಂದು ತಪ್ಪದೇ ಮತ ಚಲಾಯಿಸಿ ನಮ್ಮ ಪೂರ್ವಜರ ಆಕಾಂಕ್ಷೆಗಳನ್ನು ಎತ್ತಿಹಿಡಿಯಬೇಕೆಂದು ಹಾರೈಸುತ್ತೇನೆ ಎಂದು ಯದುವೀರ್ ಒಡೆಯರ್ ಮನವಿ ಮಾಡಿದ್ದಾರೆ.
https://www.instagram.com/p/Bijg7JrAk1-/?hl=en&taken-by=ykcwadiyar