ದಾವಣಗೆರೆ/ಬಾಗಲಕೋಟೆ: ದಾವಣಗೆರೆ ದಕ್ಷಿಣ (Davanagere South) ಮತ್ತು ಬಾಗಲಕೋಟೆ (Bagalkote By Election) ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ.
ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದ್ದು ಎರಡೂ ಕ್ಷೇತ್ರಗಳಿಂದ ಒಟ್ಟು 34 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಸುಗಮ ಮತದಾನಕ್ಕಾಗಿ ಎರಡೂ ಕ್ಷೇತ್ರಗಳಲ್ಲಿ ಸುಮಾರು 2,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಉಪಚುನಾವಣೆಯ ಫಲಿತಾಂಶವು ಮೇ 4 ಸೋಮವಾರ ಪ್ರಕಟವಾಗಲಿದೆ.
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ. ಕಣದಲ್ಲಿದ್ದಾರೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನಿಂದ ಉಮೇಶ್ ಮೇಟಿ ಮತ್ತು ಬಿಜೆಪಿಯಿಂದ ವೀರಣ್ಣ ಚರಂತಿಮಠ ನಡುವೆ ಪ್ರಮುಖ ಸ್ಪರ್ಧೆಯಿದೆ.

