ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ (Pakistan General Election) ಮತದಾನ ಆರಂಭವಾಗಿದೆ. ಭದ್ರತಾ ಕಾರಣಗಳಿಗಾಗಿ ಸರ್ಕಾರವು ದೇಶದಲ್ಲಿ ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಿದೆ.
Advertisement
ಪಾಕಿಸ್ತಾನ ಮೂಲದ ಡಾನ್ ವರದಿಯ ಪ್ರಕಾರ, 12 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ಪಾಕಿಸ್ತಾನದಲ್ಲಿ ಬೆಳಗ್ಗೆ 8 ಗಂಟೆಗೆ (ಸ್ಥಳೀಯ ಕಾಲಮಾನ) ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸಂಜೆ 5 ರವರೆಗೆ ಇರಲಿದೆ. ಸದ್ಯ ಪಾಕಿಸ್ತಾನದ ಹಾಲಿ ಆಂತರಿಕ ಸಚಿವಾಲಯವು ಪಾಕಿಸ್ತಾನದ ಒಟ್ಟಾರೆ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: Loksabha Election: ಮಂಡ್ಯದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ?
Advertisement
Advertisement
ಭದ್ರತಾ ಕ್ರಮಗಳ ಭಾಗವಾಗಿ ಪಾಕಿಸ್ತಾನದಾದ್ಯಂತ ಮೊಬೈಲ್ ಸೇವೆಗಳನ್ನು ಸ್ಥಗಿತಗೊಳಿಸಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ. ಇಂದು ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ದೇಶದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
Advertisement
ದೇಶಾದ್ಯಂತ 90,675 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ದೇಶದ ಒಟ್ಟು 12 ಕೋಟಿಗೂ ಹೆಚ್ಚು ನೋಂದಾಯಿತ ಮತದಾರರು ಈ ಮತದಾನದಲ್ಲಿ ಭಾಗವಹಿಸಲಿದ್ದಾರೆ. ಈ ಎಲ್ಲಾ ನೋಂದಾಯಿತ ಮತದಾರರು 5,121 ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಸಾಧ್ಯವಾಗುತ್ತದೆ. ಅಭ್ಯರ್ಥಿಗಳ ಪೈಕಿ 4807 ಪುರುಷರು, 570 ಮಹಿಳೆಯರು ಮತ್ತು ಇಬ್ಬರು ತೃತೀಯಲಿಂಗಿಗಳಿದ್ದಾರೆ.