ಬೆಂಗಳೂರು: ಏ.26 ರಂದು ಮೊದಲ ಹಂತ ನಡೆಯಲಿರುವ ಲೋಕಸಭಾ ಕ್ಷೇತ್ರಗಳಲ್ಲಿ ನಾಳೆಯಿಂದ ಹಿರಿಯ ನಾಗರಿಕರ ಮತದಾನ ನಡೆಯಲಿದೆ.
ರಾಜ್ಯದಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ (ಎವಿಎಸ್‍ಸಿ) ಹಾಗೂ ವಿಶೇಷ ಚೇತನರಿಗೆ (40%ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳ, ಮತದಾರರ ಪಟ್ಟಿಯಲ್ಲಿ ಗುರುತಿಸಿರುವವರಿಗೆ) ಅಂಚೆ ಮತದಾನದ (Postal voting) ಮೂಲಕ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್ ಬಂಧನ- NIA, ಪೊಲೀಸರಿಗೆ ಪರಮೇಶ್ವರ್ ಅಭಿನಂದನೆ
Advertisement
ಬೆಂಗಳೂರಿನಲ್ಲಿ (Bengaluru) 85 ವರ್ಷ ಮೇಲ್ಪಟ್ಟ 95,128 ಹಾಗೂ 22,222 ವಿಶೇಷ ಚೇತನರನ್ನು ಗುರುತಿಸಲಾಗಿದೆ. ಈ ಪೈಕಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.
Advertisement
85 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 13 ರಿಂದ ಏಪ್ರಿಲ್ 18 ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವಿಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲಿಸಲಾಗುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ವಿಡಿಯೋ ಮೂಲಕ ಸೆರೆಹಿಡಿಯಲಾಗುತ್ತದೆ.
Advertisement
Advertisement
ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಾರೆ. ಮುಂಚಿತವಾಗಿ ಮಾಹಿತಿ ನೀಡಿದ ಬಳಿಕವೇ ಮತಗಟ್ಟೆ ಸಿಬ್ಬಂದಿ ಭೇಟಿ ನೀಡುತ್ತಾರೆ. ಮೊದಲ ಬಾರಿ ಮತದಾರರು ಮನೆಯಲ್ಲಿರದಿದ್ದರೆ, ಎರಡನೇ ಬಾರಿ ಹೋಗುತ್ತಾರೆ. ಈ ವೇಳೆ ಮತದಾರರು ಸಿಗದಿದ್ದರೆ, ಬಳಿಕ ಮತದಾನಕ್ಕೆ ಅವಕಾಶವಿರುವುದಿಲ್ಲ.
ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ. ಇದನ್ನೂ ಓದಿ: ದೀದಿ ಆಡಳಿತದ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗ: ರಾಮೇಶ್ವರಂ ಕೆಫೆ ಬಾಂಬರ್ ಅರೆಸ್ಟ್ ಬಗ್ಗೆ ಅಮಿತ್ ಮಾಳವಿಯ ಮಾತು