ಚಾಮರಾಜನಗರ: ಕಳೆದ 20 ದಿನಗಳಿಂದ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ನೇರ ಜಿದ್ದಾಜಿದ್ದಿಗೆ, ಪ್ರತಿಷ್ಠೆಗೆ ಸಾಕ್ಷಿಯಾಗಿದ್ದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಆರಂಭವಾಗಿದೆ.
Advertisement
ಸಹಕಾರ ಸಚಿವರಾಗಿದ್ದ ಮಹದೇವ ಪ್ರಸಾದ್ ಅವರ ಅಕಾಲಿಕ ನಿಧನದಿಂದಾಗಿ ಉಪ ಚುನಾವಣೆ ನಡೆಯುತ್ತಿದೆ. ಮಹದೇವಪ್ರಸಾದ್ ಅವರ ಪತ್ನಿ ಗೀತಾ ಮಹದೇವ ಪ್ರಸಾದ್‍ರನ್ನು ಅನುಕಂಪದ ಆಧಾರದ ಮೇಲೆ ಕಣಕ್ಕಿಳಿಸಿದೆ. ಇದೇ ಐದು ಬಾರಿ ಚುನಾವಣೆ ಸೋತಿರುವ ನಿರಂಜನ್ ಕುಮಾರ್‍ರನ್ನು ಬಿಜೆಪಿ ಸ್ಪರ್ಧೆಗೆ ಇಳಿಸಿದೆ.
Advertisement
Advertisement
ಪಕ್ಷೇತರ ಅಭ್ಯರ್ಥಿಗಳಾದ ಶಿವರಾಮ್, ಕೆ.ಸೋಮಶೇಖರ್, ಮಹಾದೇವ ಪ್ರಸಾದ್ ಬಿ ಮತ್ತು ರಿಪ್ಲಬಿಕ್ ಪಾರ್ಟಿ ಆಪ್ ಇಂಡಿಯಾ ಪಕ್ಷದಿಂದ ಶಿವರಾಜು, ಭಾರತೀಯ ಡಾ.ಬಿ.ಆರ್.ಅಂಬೇಡ್ಕರ್ ಜನತಾ ಪಾರ್ಟಿ ಎಂ, ಹೊನ್ನೂರಯ್ಯ ಸೇರಿ ಏಳು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
Advertisement
ಕ್ಷೇತ್ರದಲ್ಲಿ ಒಟ್ಟು 2,00,862 ಮತದಾರರಿದ್ದು, ಈ ಪೈಕಿ 1,00,144 ಪುರುಷ ಮತದಾರರು, 1,00,701 ಮಹಿಳಾ ಮತದಾರರಿದ್ದಾರೆ. ಕ್ಷೇತ್ರದಲ್ಲಿ 250 ಮತಗಟ್ಟೆಗಳಿವೆ.