ಮುಂಬೈ: ಭಾರತ ತಂಡದ ಮಾಜಿ ಆಟಗಾರ ವಿ.ವಿ.ಎಸ್ ಲಕ್ಷ್ಮಣ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‍ಸಿಎ) ಮುಖ್ಯಸ್ಥರಾಗಿ ಡಿಸೆಂಬರ್ 13 ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
Advertisement
ಬಿಸಿಸಿಐ ವಾರ್ಷಿಕ ಮಹಾಸಭೆ ನಿನ್ನೆ ನಡೆದಿತ್ತು. ಈ ಸಭೆಯಲ್ಲಿ ಎನ್‍ಸಿಎ ಮುಖ್ಯಸ್ಥರ ಅಧಿಕಾರ ಸ್ವೀಕಾರ ಡಿ.13ರಂದು ನಡೆಯಲಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಸಭೆಯಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದ ಬಗ್ಗೆ ಚರ್ಚೆ ನಡೆದಿದ್ದು, ಸರಣಿ ಮುಂದೂಡಲು ತೀರ್ಮಾನಿಸಲಾಗಿದೆ ಎಂದು ಆಪ್ತ ಮೂಲಗಳಿಂದ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: ಬೌಲ್ಡಾದರೂ DRS ಮೊರೆ ಹೋಗಿ ಲೆಜೆಂಡ್ ಎನಿಸಿಕೊಂಡ ಅಶ್ವಿನ್
Advertisement
Advertisement
ಬೆಂಗಳೂರಿನಲ್ಲಿ ಎನ್‍ಸಿಎ ಮುಖ್ಯಸ್ಥರಾಗಿ ದ್ರಾವಿಡ್ ಸೇವೆಸಲ್ಲಿಸುತ್ತಿದ್ದರು ಇದೀಗ ಅವರು ರಾಷ್ಟ್ರೀಯ ತಂಡಕ್ಕೆ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವುದರಿಂದ ತೆರವುಗೊಂಡಿರುವ ಎನ್‍ಸಿಎ ಮುಖ್ಯಸ್ಥ ಸ್ಥಾನಕ್ಕೆ ಲಕ್ಷ್ಮಣ್ ನೇಮಕಗೊಂಡಿದ್ದು, ಲಕ್ಷ್ಮಣ್ ಬಿಸಿಸಿಐ ಜೊತೆ ಒಪ್ಪಂದಕ್ಕೂ ಸಹಿ ಹಾಕಿದ್ದಾರೆ. ಡಿ.13 ರಂದು ಕೋಚಿಂಗ್ ಸಿಬ್ಬಂದಿಯೊಂದಿಗೆ ಬೆಂಗಳೂರಿಗೆ ಆಗಮಿಸಿ ಅಧಿಕಾರ ಪಡೆಯಲಿದ್ದಾರೆ ಎಂದು ಆಪ್ತ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: 10 ವಿಕೆಟ್ ಕಿತ್ತು ಇತಿಹಾಸ ಸೃಷ್ಟಿಸಿದ ಭಾರತ ಮೂಲದ ಅಜಾಜ್ ಪಟೇಲ್
Advertisement