ಬೆಂಗಳೂರು: ರಾಹುಲ್ ದ್ರಾವಿಡ್ ಭಾರತ ತಂಡದ ಕೋಚ್ ಆಗಿ ನೇಮಕಗೊಂಡ ಬೆನ್ನಲ್ಲೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‍ಸಿಎ) ಮುಖ್ಯಸ್ಥ ಸ್ಥಾನ ತೆರವಾಗಿದೆ. ಈ ಸ್ಥಾನಕ್ಕೆ ಇದೀಗ ಭಾರತ ತಂಡದ ಮಾಜಿ ಆಟಗಾರ ವಿ.ವಿ.ಎಸ್ ಲಕ್ಷ್ಮಣ್ ಆಯ್ಕೆಯಾಗುವುದು ಬಹುತೇಕ ನಿಶ್ಚಿತ ಎಂದು ವರದಿಯಾಗಿದೆ.
Advertisement
ಎನ್‍ಸಿಎ ಮುಖ್ಯಸ್ಥರಾಗಿ ಸೇವೆಸಲ್ಲಿಸುತ್ತಿದ್ದ ರಾಹುಲ್ ದ್ರಾವಿಡ್ ಅವರನ್ನು ರವಿಶಾಸ್ತ್ರಿ ಟೀಂ ಇಂಡಿಯಾ ಕೋಚ್ ಹುದ್ದೆಯ ಅಧಿಕಾರವದಿ ಮುಗಿದ ಬಳಿಕ ಬಿಸಿಸಿಐ ನೂತನ ಕೋಚ್ ಆಗಿ ದ್ರಾವಿಡ್ ಅವರನ್ನು ನೇಮಿಸಿದೆ. ಆ ಬಳಿಕ ಬೆಂಗಳೂರಿನಲ್ಲಿರುವ ನ್‍ಸಿಎಗೆ ಮೂತನ ಮುಖ್ಯಸ್ಥರಿಗಾಗಿ ಬಿಸಿಸಿಐ ಹುಡುಕಾಟದಲ್ಲಿತ್ತು. ಇದೀಗ ಬಿಸಿಸಿಐ ಲಕ್ಷ್ಮಣ್ ಅವರನ್ನು ಎನ್‍ಸಿಎ ಮುಖ್ಯಸ್ಥರನ್ನಾಗಿ ಅಂತಿಮಗೊಳಿಸಿದೆ ಎಂದು ಬಿಸಿಸಿಐ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ ಗೆದ್ದ ಖುಷಿಗೆ ಬೂಟ್‍ನಲ್ಲಿ ಬಿಯರ್ ಸೇವಿಸಿದ ಆಸ್ಟ್ರೇಲಿಯಾ ಆಟಗಾರರು
Advertisement
Advertisement
ಕಾಮೆಂಟರಿ ಮತ್ತು ಐಪಿಎಲ್‍ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಮೆಂಟರ್ ಆಗಿರುವುದರಿಂದಾಗಿ ಎನ್‍ಸಿಎ ಮುಖ್ಯಸ್ಥರಾಗಲು ಮೊದಲು ಲಕ್ಷ್ಮಣ್ ಒಪ್ಪಿಕೊಂಡಿರಲಿಲ್ಲ. ಆ ಬಳಿಕ ಈ ಹಿಂದೆ ಸಹ ಆಟಗಾರರಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ರಾಹುಲ್ ದ್ರಾವಿಡ್ ಮಾತುಕತೆ ನಡೆಸಿ ಲಕ್ಷ್ಮಣ್ ಅವರನ್ನು ಒಪ್ಪಿಸಿದ್ದಾರೆ ಎಂದು ವರದಿಯಾಗಿದ್ದು, ಈ ಮೂಲಕ ದಿಗ್ಗಜ ಆಟಗಾರರು ಮತ್ತೆ ಭಾರತ ಕ್ರಿಕೆಟ್ ತಂಡಕ್ಕೆ ನೆರವಾಗಲು ಮುಂದಾಗಿದ್ದಾರೆ. ಇದನ್ನೂ ಓದಿ: ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ
Advertisement