ಮೈಸೂರು: ಟಿಪ್ಪು ಎಕ್ಸ್‌ಪ್ರೆಸ್ (Tipu Express) ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ (Wodeyar Express) ಹೆಸರಿನ ಬೋರ್ಡ್ ಅನ್ನು ರೈಲ್ವೆ ಇಲಾಖೆ (Railway Department) ಇಂದು ನೇತು ಹಾಕಿದೆ.
Advertisement
ಮೈಸೂರು – ಬೆಂಗಳೂರು ನಡುವಿನ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರು ಬದಲಾಯಿಸಿ ಕೇಂದ್ರ ರೈಲ್ವೆ ಮಂಡಳಿ ಶುಕ್ರವಾರ ಆದೇಶ ಹೊರಡಿಸಿತ್ತು. ಮರುನಾಮಕರಣ ಬಳಿಕ ಮೊದಲ ಬಾರಿಗೆ ಒಡೆಯರ್ ಎಕ್ಸ್‌ಪ್ರೆಸ್ ಬೆಂಗಳೂರಿನ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ (Krantiveera sangolli rayanna station) ಇಂದು ಬೆಳಗ್ಗೆ ಆಗಮಿಸಿತ್ತು. ಇದನ್ನೂ ಓದಿ: ಟಿಪ್ಪು ಎಕ್ಸ್‌ಪ್ರೆಸ್ ಇನ್ನುಮುಂದೆ ಒಡೆಯರ್ ಎಕ್ಸ್‌ಪ್ರೆಸ್ – ಶಿವಮೊಗ್ಗಕ್ಕೆ ಕುವೆಂಪು ಎಕ್ಸ್‌ಪ್ರೆಸ್
Advertisement
ಶುಕ್ರವಾರದ ಶುಭ ಸುದ್ದಿ!
ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ಪ್ರೆಸ್” ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! pic.twitter.com/uZzHt1uzZz
— Pratap Simha (@mepratap) October 7, 2022
Advertisement
ಮೈಸೂರು – ಬೆಂಗಳೂರು ನಡುವಿನ ಟಿಪ್ಪು ಎಕ್ಸ್‌ಪ್ರೆಸ್ ಹೆಸರು ಬದಲಾಯಿಸಿ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರು ನಾಮಕರಣ ಮಾಡಲಾಗಿದ್ದು, ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‍ಗೆ ಕುವೆಂಪು ಎಕ್ಸ್‌ಪ್ರೆಸ್ ಎಂದು ಮರು ನಾಮಕರಣ ಮಾಡಲಾಗಿದೆ. ಈ ಕುರಿತಂತೆ ಶುಕ್ರವಾರ ಟ್ವೀಟ್ ಮಾಡಿದ್ದ ಸಂಸದ ಪ್ರತಾಪ್ ಸಿಂಹ (Pratap Simha) ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಶುಕ್ರವಾರದ ಶುಭ ಸುದ್ದಿ. ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು ‘ಒಡೆಯರ್ ಎಕ್ಸ್ಪ್ರೆಸ್’ ನಿಮಗೆ ಸೇವೆ ನೀಡಲಿದೆ. ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ಪ್ರೆಸ್” ಆಗಲಿದೆ. ಅಶ್ವಿನಿ ವೈಷ್ಣವ್ ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ ಅವರಿಗೆ ಥಾಂಕ್ಯೂ ಎಂದು ಹೇಳಿದರು.
Advertisement
ಈ ಹಿಂದೆ ಪ್ರತಾಪ್ ಸಿಂಹ ಅವರು ದೆಹಲಿಯಲ್ಲಿ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟಿದೆ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್ ಹೆಸರಿಡುವಂತೆ ಲಿಖಿತ ರೂಪದಲ್ಲಿ ಮನವಿ ಮಾಡಿದ್ದರು.