ಬೆಂಗಳೂರು: ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕರಿಗೆ ವಾಹನ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರದ ಬಳಿ ನಡೆದಿದೆ.
ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಮೂವರು ಕಾರ್ಮಿಕರಿಗೆ ಈಚರ್ ವಾಹನ ಡಿಕ್ಕಿ ಹೊಡೆದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟಿರುವ ಕಾರ್ಮಿಕರು ಅಸ್ಸಾಂ ಮೂಲದವರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಜಿ20 ಶೃಂಗಸಭೆ – ರೆಸಾರ್ಟ್ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ
ಕೆಲಸ ಮುಗಿಸಿ ಕಾರ್ಮಿಕರು ರಸ್ತೆ ಬಳಿ ನಡೆದುಕೊಂಡು ಮನೆಗೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವಾಹನ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ವಾಹನ ಚಾಲಕ ಅಪಘಾತ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗದ ಬಿಡಿ ಭಾಗಗಳು ಬಿದ್ದಿರುವುದನ್ನು ನೋಡಿ ಸ್ಥಳೀಯರು ಕೂಡಲೇ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ವಾಹನ ಸಮೇತ ಪರಾರಿಯಾಗಿರುವ ಚಾಲಕನ ಬಂಧನಕ್ಕೆ ಬಲೆ ಬೀಸಿದ್ದಾರೆ.
ಅಸ್ಸಾ ಮೂಲದ ಕಾರ್ಮಿಕರ ಸಂಬಂಧಿಕರು ಸಿಕ್ಕ ಬಳಿಕ ಅವರ ಹೆಸರು ಹಾಗೂ ಎಲ್ಲಿ ವಾಸ ಇದ್ದರೂ ಎನ್ನುವ ಬಗ್ಗ ಇನ್ನಷ್ಟೇ ಮಾಹಿತಿ ಸಿಗಬೇಕಾಗಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಹಾಗೂ ಅತ್ತಿಬೆಲೆ ಇನ್‌ಸ್ಪೆಕ್ಟರ್ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಮಕ್ಕಳಿಗೆ ಪಾಠ ಮಾಡುವ ಶಿಕ್ಷಕನಿಂದ 18 ಕ್ಕೂ ಹೆಚ್ಚು ದೇವಸ್ಥಾನ ದರೋಡೆ