ವಾಘ್ ಬಕ್ರಿ ಚಹಾ ಕಂಪನಿ ಮಾಲೀಕ ಮೆದುಳು ರಕ್ತಸ್ರಾವದಿಂದ ಸಾವು

Public TV
2 Min Read
Parag Desai Wagh Bakra

ಗಾಂಧಿನಗರ: ವಾಘ್ ಬಕ್ರಿ (Wagh Bakri) ಟೀ ಗ್ರೂಪ್‌ನ ಮಾಲೀಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ (49) ಅವರು ಮೆದುಳಿನ ರಕ್ತಸ್ರಾವದಿಂದ (Brain Hemorrhage) ಭಾನುವಾರ ಸಂಜೆ ನಿಧನರಾಗಿದ್ದಾರೆ.

ದೇಸಾಯಿ (Parag Desai) ಅವರು ಕಳೆದ ವಾರ ಉದ್ಯಾನವನದಲ್ಲಿ ಬೆಳಗ್ಗೆ ವಾಕ್ ಮಾಡುತ್ತಿದ್ದ ಸಂದರ್ಭ ಬಿದ್ದು ಮೆದುಳಿನ ರಕ್ತಸ್ರಾವಕ್ಕೆ ಒಳಗಾಗಿದ್ದರು. ಇದರಿಂದಾಗಿ ಅವರನ್ನು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದನ್ನೂ ಓದಿ:  ಶಾಲೆಯಲ್ಲಿ ನಮಾಜ್‌ ಮಾಡಿದ ವಿದ್ಯಾರ್ಥಿಗಳು – ಪ್ರಾಂಶುಪಾಲೆ ಅಮಾನತು

Parag Desai Wagh Bakra 1

ಅವರ ಅಗಲಿಕೆಯ ಕುರಿತು, ವಾಘ್ ಬಕ್ರಿ ಕಂಪನಿಯು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಸಂತಾಪ ಸೂಚಿಸಿದೆ. ಗಾಢವಾದ ದುಃಖದೊಂದಿಗೆ, ನಮ್ಮ ಪ್ರೀತಿಯ ಪರಾಗ್ ದೇಸಾಯಿ ಅವರ ನಿಧನವನ್ನು ತಿಳಿಸಲು ನಾವು ವಿಷಾದಿಸುತ್ತೇವೆ ಎಂದು ಕಂಪನಿ ಬರೆದುಕೊಂಡಿದೆ. ಇದನ್ನೂ ಓದಿ: ಸಿಯಾಚಿನ್‌ನಲ್ಲಿ ಕರ್ತವ್ಯದಲ್ಲಿದ್ದ ಅಗ್ನಿವೀರ್‌ ಹುತಾತ್ಮ – ಸೇನೆಯಿಂದ ಗೌರವ

ಅಕ್ಟೋಬರ್ 15 ರಂದು ತನ್ನ ಮೇಲೆ ದಾಳಿ ಮಾಡಿದ ಬೀದಿನಾಯಿಗಳನ್ನು (Stray Dog) ಓಡಿಸಲು ಪ್ರಯತ್ನಿಸುತ್ತಿದ್ದ ಸಂದರ್ಭ ಪರಾಗ್ ದೇಸಾಯಿ ತನ್ನ ನಿವಾಸದ ಹೊರಗೆ ಜಾರಿ ಬಿದ್ದಿದ್ದರು. ಘಟನೆಯ ಬಳಿಕ ಅವರನ್ನು ಶೆಲ್ಬಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ದೇಸಾಯಿ ಅವರನ್ನು ಶಸ್ತ್ರಚಿಕಿತ್ಸೆಗಾಗಿ ಝೈಡಸ್ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಚಿಕಿತ್ಸೆ ವೇಳೆ ಮಿದುಳು ರಕ್ತಸ್ರಾವಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು

ದೇಸಾಯಿ ಅವರು ವಾಘ್ ಬಕ್ರಿ ಟೀ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕರಾದ ರಸೇಶ್ ದೇಸಾಯಿ ಅವರ ಪುತ್ರ. ಅವರು ಪತ್ನಿ ವಿದಿಶಾ ಮತ್ತು ಮಗಳು ಪರಿಶಾ ಅವರನ್ನು ಅಗಲಿದ್ದಾರೆ. ದೇಸಾಯಿ ಅವರು 30 ವರ್ಷಗಳ ಉದ್ಯಮಶೀಲತೆಯ ಅನುಭವದೊಂದಿಗೆ, ಗ್ರೂಪ್‌ನ ಅಂತಾರಾಷ್ಟ್ರೀಯ ವ್ಯಾಪಾರ, ಮಾರಾಟ ಮತ್ತು ಮಾರ್ಕೆಟಿಂಗ್ ಅನ್ನು ಮುನ್ನಡೆಸಿದ್ದರು. ಅವರು ಭಾರತೀಯ ಕೈಗಾರಿಕೆಗಳ ಒಕ್ಕೂಟದಂತಹ ಪ್ರಮುಖ ಉದ್ಯಮ ವೇದಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದು ಮಾತ್ರವಲ್ಲದೇ ಉದ್ಯಮದ ಗೌರವಾನ್ವಿತ ಧ್ವನಿಯಾಗಿದ್ದರು. ಇದನ್ನೂ ಓದಿ: ಗಾರ್ಬಾ ನೃತ್ಯದಲ್ಲಿ ತೊಡಗಿದ್ದವರಿಗೆ ಹೃದಯಾಘಾತ – 10 ಸಾವು

ಮೆದುಳು ರಕ್ತಸ್ರಾವ ಎಂದರೇನು?
ಮೆದುಳಿನ ರಕ್ತಸ್ರಾವವು ಮೂಲಭೂತವಾಗಿ ಒಂದು ರೀತಿಯ ಸ್ಟ್ರೋಕ್ ಆಗಿದೆ. ಮೆದುಳಿನಲ್ಲಿನ ಅಪಧಮನಿ ಸ್ಫೋಟಗೊಂಡಾಗ ಮತ್ತು ಸುತ್ತಮುತ್ತಲಿನ ಅಂಗಾಂಶಗಳಲ್ಲಿ ಸ್ಥಳೀಯ ರಕ್ತಸ್ರಾವವನ್ನು ಉಂಟುಮಾಡಿದಾಗ ಮೆದುಳಿನ ರಕ್ತಸ್ರಾವ ಸಂಭವಿಸುತ್ತದೆ. ಮೆದುಳಿನಲ್ಲಿ ರಕ್ತಸ್ರಾವವು ಹಲವಾರು ಕಾರಣಗಳನ್ನು ಹೊಂದಿರಬಹುದು. ಕೆಲವು ಸಂದರ್ಭಗಳಲ್ಲಿ ತಲೆಗೆ ಸಣ್ಣ ಗಾಯವಾದರೂ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಬಹುದು. ಇದನ್ನೂ ಓದಿ: ತರಬೇತಿ ವಿಮಾನ ಪತನ – ಇಬ್ಬರೂ ಪೈಲಟ್ ಗಂಭೀರ

Web Stories

Share This Article