ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕರ್ನಾಟಕದ (Karnataka) ಒಂದು ಕ್ಷೇತ್ರದಲ್ಲಿ ವಂಚನೆ ನಡೆದಿದೆ ಎಂಬ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಆರೋಪ ಆಧಾರರಹಿತ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ ಎಂದು ANI ವರದಿ ಮಾಡಿವೆ.
ಹೈಕೋರ್ಟ್ ತೀರ್ಪಿಗಾಗಿ ಕಾಯಲಾಗುತ್ತಿದೆ. ತೀರ್ಪು ಬರೋವರೆಗೆ ಕಾಯಬೇಕು. ಆಧಾರ ರಹಿತ ಆರೋಪಗಳು ಯಾಕೆ ಮಾಡಲಾಗುತ್ತಿದೆ ಎಂದು ಆಯೋಗ ಪ್ರಶ್ನಿಸಿದೆ.
ರಾಹುಲ್ ಗಾಂಧಿ ಹೇಳಿದ್ದೇನು?
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ಹೋರಾಟ ಹೊಸ ತಿರುವು ಪಡೆದುಕೊಂಡಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆ (Lok Sabha Election) ವೇಳೆ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ (Karnataka) ಕಳ್ಳಾಟವಾಗಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ದರ್ಶನ್-ಪವಿತ್ರಾ ಲಿವ್ ಇನ್ ರಿಲೇಷನ್ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು, ಅಲ್ಲಿನ ಚುನಾವಣಾ ಪ್ರಕ್ರಿಯೆ ಬಗ್ಗೆ ಆಳವಾದ ಅಧ್ಯಯನ ನಡೆಸಿದ್ದೆವು. ಬೋಗಸ್ ವೋಟಿಂಗ್ ಬಗ್ಗೆ ಇಂಚಿಂಚು ಮಾಹಿತಿ ನಮಗೆ ಲಭ್ಯವಾಗಿದೆ. ಎಲ್ಲಾ ವಿಚಾರಗಳನ್ನು ಸದ್ಯದಲ್ಲೇ ಜನರ ಮುಂದೆ ಇಡಲಿದ್ದೇವೆ. ಎಲ್ಲಾ ಕಳ್ಳಾಟ ಸದ್ಯದಲ್ಲೇ ಹೊರಬರಲಿದೆ ಎಂದು ಹೇಳಿದ್ದಾರೆ.
ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ನಂತರ ಬಿಹಾರದಾದ್ಯಂತ (Bihar) 56 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುವುದು ಎಂದು ಚುನಾವಣಾ (Election Commission) ಆಯೋಗ ಹೇಳಿದ್ದಕ್ಕೆ ವಿಪಕ್ಷಗಳು ಈಗ ಭಾರೀ ಪ್ರತಿಭಟನೆ ನಡೆಸುತ್ತಿವೆ. ಇದನ್ನೂ ಓದಿ: Madikeri | ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – ಕೊಲೆ ಶಂಕೆ, ಕುಟುಂಬಸ್ಥರಿಂದ ದೂರು
ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗ, ಮತದಾರರ ಪಟ್ಟಿಯಲ್ಲಿ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಲು 1 ತಿಂಗಳ ಅವಕಾಶ ನೀಡಲಾಗುತ್ತದೆ. ಈ ಅವಧಿಯೊಳಗಡೆ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ದರೆ ಅರ್ಹ ಮತದಾರರು ಆಯೋಗದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.
ಚುನಾವಣಾ ಸಮಯದಲ್ಲೇ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಿ ವಿಪಕ್ಷಗಳು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿಗೆ ಸಲ್ಲಿಸಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ತಡೆ ನೀಡದೇ ಚುನಾವಣಾ ಆಯೋಗಕ್ಕೆ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಅನುಮತಿ ನೀಡಿತ್ತು.