ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಅಲಿಪುರ ಬಳಿಯ ಗೋಡೌನ್‌ನಲ್ಲಿ ಶುಕ್ರವಾರ ಗೋಡೆ ಕುಸಿದ ಪರಿಣಾಮ 5 ಜನ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿದ್ದಾರೆ ಎಂದು ವರದಿಯಾಗಿದೆ.
ನಿರ್ಮಾಣ ಹಂತದಲ್ಲಿದ್ದ ಗೋಡೆ ಶುಕ್ರವಾರ ಮಧ್ಯಾಹ್ನ ಸುಮಾರು 12:40ರ ವೇಳೆಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಗಾಯಗೊಂಡಿರುವ 9 ಮಂದಿಯ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಥಳದಿಂದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಭವಿಸುತ್ತಿದ್ದಂತೆ 4 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗುತ್ತಿದ್ದು, ಇನ್ನೂ ಹೆಚ್ಚಿನ ಜನರು ಸಿಲುಕಿರುವ ಶಂಕೆ ಇರುವುದರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅನುಮತಿಯಿಲ್ಲದೇ ದೇಶ ಬಿಟ್ಟು ಹೋಗಬೇಡಿ: ರಾಜಪಕ್ಸೆ ಕುಟುಂಬಕ್ಕೆ ಸುಪ್ರೀಂ ಕೋರ್ಟ್ ಆದೇಶ
ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಅಲಿಪುರದಲ್ಲಿ ನಡೆದ ಘಟನೆ ಅತ್ಯಂತ ಆಘಾತ ತಂದಿದೆ. ಜಿಲ್ಲಾಡಳಿತ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಪರಿಹಾರ ಕಾರ್ಯದ ಮೇಲ್ವಿಚಾರಣೆಯಲ್ಲಿ ನಾನು ತೊಡಗಿದ್ದೇನೆ. ಮೃತರ ಆತ್ಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Alipur wall collapse, Delhi | 5 dead, 9 injured including 2 critical cases. Debris being cleared from the site: Delhi Police pic.twitter.com/imcY7jApt5
— ANI (@ANI) July 15, 2022
ಪ್ರಧಾನಿ ನರೇಂದ್ರ ಮೋದಿ ಕೂಡ ಅಲಿಪುರದ ಗೋಡೆ ಕುಸಿತದ ಬಗ್ಗೆ ಆಘಾತ ವ್ಯಕ್ತಪಡಿಸಿ, ದೆಹಲಿಯ ಅಲಿಪುರದಲ್ಲಿ ಸಂಭವಿಸಿದ ದುರ್ಘಟನೆಯಿಂದ ದುಃಖವಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆಯಲ್ಲಿವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ ಟಾಪ್ ಕಾಲೇಜುಗಳ ಪಟ್ಟಿ ಔಟ್ – ಕರ್ನಾಟಕದ ಯಾವ ಕಾಲೇಜುಗಳಿಗೆ ಎಷ್ಟನೇ ಸ್ಥಾನ?