ಬೆಂಗಳೂರು: ʻʻಸಂವಿಧಾನ (Constitution) ತಿಳಿದವರು, ಪ್ರಜಾಪ್ರಭುತ್ವ ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಪ್ ಯೂನಿವರ್ಸಿಟಿಯಲ್ಲಿ (Whatsp University) ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು ಅಂತಹ ವಿಪಕ್ಷನಾಯಕ ಬೇಕಾಗಿದ್ದಾರೆʼʼ ಇದು ಯಾವುದೋ ಜಾಹೀರಾತಿನ ಪ್ರಕಟಣೆಯಲ್ಲ ರಾಜ್ಯ ಕಾಂಗ್ರೆಸ್, ಬಿಜೆಪಿಯನ್ನು (BJP) ಟ್ವೀಟ್ ಮೂಲಕ ಟೀಕಿಸಿರುವ ಪರಿ ಇದಾಗಿದೆ.
????ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು.
????ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು.
????ಮಂತ್ರಿಮಂಡಲವೂ ರಚನೆಯಾಯ್ತು.
????ಸರ್ಕಾರ ಕೆಲಸ ಶುರು ಮಾಡಿಯಾಯ್ತು.
????ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು.
????ಮೂರು ಗ್ಯಾರಂಟಿಗಳೂ ಜಾರಿಯಾದವು.
ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ…
— Karnataka Congress (@INCKarnataka) July 1, 2023
Advertisement
2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮುಗಿದು 50 ದಿನಗಳೇ ಕಳೆದಿದೆ. ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ವಹಿಸಿಕೊಂಡು ಒಂದು ತಿಂಗಳು ಕಳೆದಿದೆ. ಇಷ್ಟಾದರೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡುವಲ್ಲಿ ಎಡವಿದೆ. ಈ ವಿಚಾರದ ಬಗ್ಗೆ ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ. ಇದನ್ನೂ ಓದಿ: ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ಪತ್ರವನ್ನು ಹರಿದು ಹಾಕಿದ ಮಹಿಳೆ
Advertisement
????ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ
????ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
????ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
????RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
????ವಾಟ್ಸಾಪ್… pic.twitter.com/z0bzup2HGU
— Karnataka Congress (@INCKarnataka) July 1, 2023
Advertisement
ಕಾಂಗ್ರೆಸ್ ಟ್ವೀಟ್‌ನಲ್ಲಿ ಏನಿದೆ?
ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ…
* ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
* ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
* ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!
Advertisement
ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ರಾಜ್ಯ ಬಿಜೆಪಿ ಆಡಳಿತ ಮಾಡಲು ನಾಲಾಯಕ್ ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ. ಈಗ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್ ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನ ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ ಎಂದು ವ್ಯಂಗ್ಯ ಮಾಡಿದೆ. ಇದನ್ನೂ ಓದಿ: ತಡವಾಗಿ ಬಂದ ಬಸ್ ಅಡ್ಡಗಟ್ಟಿ ಡ್ರೈವರ್‌ಗೆ ಕ್ಲಾಸ್ ತೆಗೆದುಕೊಂಡ ಮಹಿಳೆಯರು
Web Stories