ತಿರುವನಂತಪುರ: ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಂಡ ಬೆನ್ನಲ್ಲೇ ನೆರೆಯ ಕೇರಳದ ಕೊಚ್ಚಿ ಸಮೀಪದ ಇಡೀ ಗ್ರಾಮವೊಂದರ 610 ಕುಟುಂಬಗಳು ಕೂಡ ವಕ್ಫ್ ಮಂಡಳಿಯಿಂದಾಗಿ (Waqf Board) ತಮ್ಮ 464 ಎಕರೆಯಷ್ಟು ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕಕ್ಕೆ ಒಳಗಾಗಿವೆ. ಹೀಗಾಗಿ ಮುನಂಬಂ (Munambam) ಹಾಗೂ ಅಕ್ಕಪಕ್ಕದ ಕೆಲ ಗ್ರಾಮಗಳ 600ಕ್ಕೂ ಹೆಚ್ಚು ಕುಟುಂಬಗಳು ಬೀದಿಗಿಳಿದು ಹೋರಾಟ ಆರಂಭಿಸಿವೆ. ಈ ವಿಷಯ ಇದೀಗ ವಯನಾಡು ಚುನಾವಣೆ (Wayanad Election) ವೇಳೆಯೂ ಪ್ರತಿಧ್ವನಿಸಿದೆ.
ವಿವಾದಿತ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿರುವ ಕೇರಳದ ಆಡಳಿತಾರೂಢ ಎಡಪಕ್ಷಗಳ ಎಲ್‌ಡಿಎಫ್ ಮೈತ್ರಿಕೂಟ ಮತ್ತು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಯುಡಿಎಫ್ ಮೈತ್ರಿಕೂಟ, ವಿವಾದಿತ ಜಮೀನು ವಕ್ಫ್ ಮಂಡಳಿಗೆ ಸೇರಿಲ್ಲವೆಂದು ಹೇಳುತ್ತಿವೆಯಾದರೂ ನೇರವಾಗಿ ಜನರ ಪ್ರತಿಭಟನೆಗೆ ಕೈಜೋಡಿಸದೇ ದೂರ ಉಳಿದು ಜಾಣತನ ಪ್ರದರ್ಶಿಸಿವೆ. ಮತ್ತೊಂದೆಡೆ ಜಮೀನು ಕಳೆದುಕೊಳ್ಳುವ ಭೀತಿಯಲ್ಲಿರುವ ಕ್ರೈಸ್ತ ಸಮುದಾಯದ ನೆರವಿಗೆ ಧಾವಿಸಿರುವ ಸ್ಥಳೀಯ ಚರ್ಚ್ಗಳು, ಜನರ ಹೋರಾಟಕ್ಕೆ ಬೆಂಬಲ ನೀಡಿದ್ದು ಕೇಂದ್ರದ ವಕ್ಫ್ ಮಂಡಳಿ ತಿದ್ದುಪಡಿ ಬೆಂಬಲಿಸಿವೆ. ಇದನ್ನೂ ಓದಿ: ವಕ್ಫ್ ಆಸ್ತಿ ವಿವಾದದ ಕಿಚ್ಚು – ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ
Advertisement
Advertisement
ಏನಿದು ವಿವಾದ?
1902ರಲ್ಲಿ ತಿರುವಾಂಕೂರು ರಾಜ, ಮೀನುಗಾರಿಕೆಗಾಗಿ ಗುಜರಾತ್‌ನಿಂದ ಕೇರಳಕ್ಕೆ ಬಂದಿದ್ದ ಅಬ್ದುಲ್ ಸತ್ತಾರ್ ಮೂಸಾ ಎಂಬುವವರಿಗೆ 464 ಎಕರೆ ಜಾಗ ನೀಡಿದ್ದರು. ಈ ನಡುವೆ 4 ದಶಕಗಳ ಅವಧಿಯಲ್ಲಿ ರಾಜ ನೀಡಿದ್ದ ಜಾಗದ ಪೈಕಿ ಸಾಕಷ್ಟು ಸಮುದ್ರ ಕೊರೆತದಿಂದ ನಾಶವಾಗಿತ್ತು. 1948ರಲ್ಲಿ ಸತ್ತಾರ್ ಅವರ ಉತ್ತರಾಧಿಕಾರಿ ಸಿದ್ಧಿಕಿ ಸೇಠ್, ಈ ಜಾಗವನ್ನು ನೋಂದಣಿ ಮಾಡಿಸಿದ ವೇಳೆ ಸ್ಥಳೀಯ ಮೀನುಗಾರರ ಜಮೀನು ಕೂಡಾ ಅದರಲ್ಲಿ ಸೇರಿಕೊಂಡಿತ್ತು. ಜೊತೆಗೆ ನೋಂದಣಿ ವೇಳೆ ಅದು ಹೇಗೋ ವಕ್ಫ್ ಎಂಬ ಪದ ಕೂಡಾ ಸೇರಿಬಿಟ್ಟಿತ್ತು. ಈ ನಡುವೆ 1950ರಲ್ಲಿ ಸಿದ್ಧಿಕಿ ಈ ಜಾಗವನ್ನು ಫಾರೂಖ್ ಕಾಲೇಜು ನಿರ್ಮಾಣಕ್ಕೆ ದಾನವಾಗಿ ನೀಡಿದರು. ಈ ವೇಳೆ ಅದನ್ನು ಬೇರಾವ ಉದ್ದೇಶಕ್ಕೂ ಬಳಸದಂತೆ, ಬಳಸಿದರೆ ಅದು ಮೂಲ ಮಾಲೀಕರಿಗೆ ಹೋಗಲಿದೆ ಎಂದು ಷರತ್ತು ಹಾಕಲಾಗಿತ್ತು. ಇದಾದ 3 ವರ್ಷದಲ್ಲಿ ರಾಜ್ಯದಲ್ಲಿ ಹೊಸ ವಕ್ಫ್ ಕಾಯ್ದೆ ಜಾರಿಗೆ ಬಂದಿತ್ತು. ಇದನ್ನೂ ಓದಿ: ಉಡುಪಿ| ಮಗುವಿನ ಮೇಲೆ ಹಲ್ಲೆ ನಡೆಸಿದ್ದ ತಾಯಿ, ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ
Advertisement
Advertisement
ಈ ಕಾಯ್ದೆ ಜಾರಿಗೂ ಮೊದಲೇ ಕಾಲೇಜು ಆಡಳಿತ ಮಂಡಳಿಯಿಂದ ನೂರಾರು ಕುಟುಂಬಗಳು ಹಣ ಕೊಟ್ಟು ಜಾಗ ಖರೀದಿ ಮಾಡಿ ದಾಖಲೆ ಪತ್ರ ಪಡೆದುಕೊಂಡಿದ್ದರು. ಈ ನಡುವೆ 2019ರಲ್ಲಿ ಮುನಂಬಂ ಗ್ರಾಮ ತನಗೆ ಸೇರಿದ್ದು ಎಂದು ವಕ್ಫ್ ಮಂಡಳಿ ಘೋಷಿಸಿತು. ಆದಾದ ಬಳಿಕ ನಿಯಮದ ಅನ್ವಯ, ಪಂಚಾಯತ್ ವ್ಯಾಪ್ತಿಯಲ್ಲಿ ಜನರಿಂದ ಆಸ್ತಿ ತೆರಿಗೆ ಸಂಗ್ರಹಿಸಿದಂತೆ ತಡೆಯಾಜ್ಞೆಯನ್ನೂ ತಂತು. ಪರಿಣಾಮ, ಇದುವರೆಗೂ ಜನತೆ ತಮ್ಮ ಆಸ್ತಿಗೆ ತಾವು ತೆರಿಗೆಯನ್ನೂ ಕಟ್ಟಲಾಗದೇ ಯಾವುದೇ ಸಮಯದಲ್ಲಿ ಆಸ್ತಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹೀಗಾಗಿ, ಈಗ ಇರುವ ವಕ್ಫ್ ಕಾಯ್ದೆ ರದ್ದುಪಡಿಸಿ ಕಾನೂನು ಬದ್ಧವಾಗಿ ತಾವು ಖರೀದಿಸಿದ ಆಸ್ತಿಯನ್ನು ತಮಗೆ ಉಳಿಸಿಕೊಡಿ ಎಂದು ಹೋರಾಟ ಆರಂಭಿಸಿದ್ದಾರೆ. ಇದನ್ನೂ ಓದಿ: ಪತಿಯ ಮೊದಲ ಹೆಂಡತಿಯೊಂದಿಗೆ ಗಲಾಟೆ ಮಾಡಿ 50 ಬಾರಿ ಚಾಕು ಚುಚ್ಚಿದ ಮಹಿಳೆ!