ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ, ಹಿಂದೂ ವಿರೋಧಿ ನೀತಿ ತಾಳಿದ್ದು, ರೈತರ ಆಸ್ತಿಗಳನ್ನ ವಕ್ಫ್‌ಗೆ ಅಕ್ರಮವಾಗಿ ಪರಭಾರೆ ಮಾಡುತ್ತಿದ್ದಾರೆ ಅಂತ ಆರೋಪಿಸಿ ಬಿಜೆಪಿ (BJP) ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆಗೆ (Protest) ಪ್ಲ್ಯಾನ್ ಮಾಡಲಾಗಿದೆ.
ನವೆಂಬರ್ 4 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಬಿಜೆಪಿ ಭರದ ಸಿದ್ಧತೆ ನಡೆಸಿದೆ. ಅಂತೆಯೇ ಚಿಕ್ಕಬಳ್ಳಾಪುರದಲ್ಲೂ (Chikkaballapura) ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ: Waqf Land Row | ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ, ಮುಖಂಡರಾದ ಮುನಿರಾಜು, ಸೀಕಲ್ ರಾಮಚಂದ್ರಗೌಡ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದನ್ನೂ ಓದಿ: Haryana | ಐಎನ್‌ಎಲ್‌ಡಿಯ ದೀಪಾವಳಿ ಸಮಾರಂಭದಲ್ಲಿ ಪಾಕಿಸ್ತಾನ ಸಂಸದ ಅಬ್ದುಲ್ ರೆಹಮಾನ್ ಭಾಗಿ
ನವೆಂಬರ್ 4ರ ಸೋಮವಾರದಂದು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ, ರಾಜ್ಯ ಸರ್ಕಾರದ ವಿರುದ್ದ ಹೋರಾಟ ನಡೆಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಅಲ್ಪಸಂಖ್ಯಾಂತರ ಒಲೈಕೆಗೆ ರೈತರ, ದೇವಾಲಯಗಳ, ಮಠಮಾನ್ಯಗಳ ಆಸ್ತಿಯನ್ನ ವಕ್ಫ್ ಹೆಸರಿಗೆ ವರ್ಗಾಯಿಸಲು ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಕಾರ್ಮಿಕರ ಮೇಲೆ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಹತ್ಯೆಗೈದ ಸೇನೆ