Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್‌ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಕ್ಫ್‌ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ

Districts

ವಕ್ಫ್‌ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ

Public TV
Last updated: October 27, 2024 8:09 pm
Public TV
Share
2 Min Read
MB Patil
SHARE

– ವಿಜಯಪುರದಲ್ಲಿ ರೈತರ ಒಂದಿಷ್ಟೂ ಜಮೀನು ವಕ್ಫ್‌ಗೆ ಸೇರಿಸಿಲ್ಲ; ಎಂ.ಬಿ ಪಾಟೀಲ್‌ ಸ್ಪಷ್ಟನೆ

ವಿಜಯಪುರ: ಜಿಲ್ಲೆಯ ವಕ್ಫ್ ಆಸ್ತಿಗೆ (Waqf Property) ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್‌ ಸಮಿತಿಯೊಂದನ್ನು ರಚಿಸಿ, 1964 ರಿಂದ 1974ರ ವರೆಗಿನ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್‌ (MB Patil) ಸೂಚಿಸಿದರು.

ನಗರದ ಸೋಲಾಪುರ ರಸ್ತೆಯಲ್ಲಿರುವ ಸಚಿವರ ಗೃಹ ಕಚೇರಿಯಲ್ಲಿ ಜಿಲ್ಲೆಯ ವಿವಿಧ ತಹಶೀಲ್ದಾರರು, ವಕ್ಫ್ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದರು. ಬಳಿಕ ಮಾತನಾಡಿದ ಎಂ.ಬಿ ಪಾಟೀಲ್‌, ವಿಜಯಪುರ (Vijayapura) ಜಿಲ್ಲೆಯಾದ್ಯಂತ ರೈತರು (Farmers) ಸೇರಿದಂತೆ ಖಾಸಗಿ ಜಮೀನುಗಳ ಪೈಕಿ ಒಂದು ಎಕರೆಯೂ ಸಹ ವಕ್ಫ್‌ಗೆ ಸೇರಿಸಿಲ್ಲ. 1974ರ ಗೆಜೆಟ್ ನೋಟಿಫಿಕೇಶನ್ ಪ್ರಕಾರ ವಕ್ಫ್ ಆಸ್ತಿ ಮಾತ್ರ ಇಂದೀಕರಣ ಮಾಡಲಾಗುತ್ತಿದ್ದು, ಈ ಕುರಿತು ಅನವಶ್ಯಕವಾಗಿ ಗೊಂದಲ ಸೃಷ್ಟಿಸಲಾಗುತ್ತಿದೆ. ಎಲ್ಲ ಗೊಂದಲಕ್ಕೆ ಅಂತ್ಯ ಹಾಡಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಸಮಿತಿ ರಚಿಸಿಕೊಂಡು 1964 ರಿಂದ 1974ರ ವರೆಗಿನ ದಾಖಲೆ ಪರಿಶೀಲಿಸಿ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

1974ರಲ್ಲಿ ಹೊರಡಿಸಲಾದ ಗೆಜೆಟ್ ನೋಟಿಫಿಕೇಶನ್‍ನಲ್ಲಿ ನಗರದಲ್ಲಿರುವ ಖಾಜಾ ಅಮೀನ ದರ್ಗಾ ಸರ್ವೇ ನಂಬರ್ ಹೊನವಾಡ ಗ್ರಾಮದ ಆಸ್ತಿ ಎಂದು ನಮೂದಾಗಿರುವುದರಿಂದ ವಕ್ಫ್ ಮಂಡಳಿಯಿಂದ ಮತ್ತೇ 1977ರಲ್ಲಿ ಮತ್ತೆ ಬದಲಾವಣೆ ಮಾಡಿ ಸರಿಪಡಿಸಲಾಗಿದೆ. ಹೊನವಾಡ ಗ್ರಾಮದ ಯಾರಿಗೂ ನೋಟಿಸ್ ಈವರೆಗೆ ಜಾರಿ ಮಾಡಿರುವುದಿಲ್ಲ, ಸಂಬಂಧಿಸಿದ ರೈತರ-ಮಾಲೀಕರ ಹೆಸರಿನಲ್ಲಿಯೇ ಜಮೀನುಗಳು ಇವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಈ ವೇಳೆ ಗೆಜೆಟ್ ನೋಟಿಫಿಕೇಶನ್‍ಗಿಂತ ಮುಂಚಿತವಾಗಿ 1964 ರಿಂದ 1974ರ ವರೆಗಿನ ದಾಖಲೆಗಳನ್ನು ಪರಿಶೀಲಿಸಿ ಸರಿಪಡಿಸಿ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಈವರೆಗೆ ಮಾತ್ರ 124 ನೋಟಿಸ್ ನೀಡಲಾಗಿದೆ. ಇಂಡಿ ತಾಲೂಕಿಗೆ ಸಂಬಂಧಿಸಿದಂತೆ ತಹಶೀಲ್ದಾರರು ನೋಟಿಸ್ ನೀಡದೆಯೇ 41 ಆಸ್ತಿಗಳ ಇಂದೀಕರಣ ಕುರಿತು ಉಪವಿಭಾಗಾಧಿಕಾರಿಗಳು ಸ್ವಯಂಪ್ರೇರಿತ ಪ್ರಕರಣವೆಂದು ಪರಿಗಣಿಸಿ ಅಗತ್ಯ ಕ್ರಮ ವಹಿಸಬೇಕು. ಸಿಂದಗಿಯ ವಿರಕ್ತಮಠದ ಆಸ್ತಿ ಸರ್ವೇ ನಂ.1029 ಬದಲಿಗೆ 1020 ಆಗಿದ್ದು, ಈ ಕುರಿತು ಅಗತ್ಯ ಕ್ರಮ ವಹಿಸಿ ಸರಿಪಡಿಸುವಂತೆ ಅವರು ಸೂಚನೆ ನೀಡಿದರು.

ಯಾರೂ ತಮ್ಮ ಆಸ್ತಿ- ಜಮೀನುಗಳ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ ವಕ್ಫ್ ಇಲಾಖೆಯ ಆಸ್ತಿಗಳ ಇಂದೀಕರಣ ಮಾತ್ರ ಮಾಡಲಾಗುತ್ತಿರುವ ಕುರಿತು ಜನರಲ್ಲಿ ತಿಳುವಳಿಕೆ ಮೂಡಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಕ್ಫ್ ಇಲಾಖೆ ಅಧಿಕಾರಿ ಶ್ರೀಮತಿ ತಬಸ್ಸುಮ್ ಎಂ. ಮೊಹಸೀನ್ ಜಮಖಂಡಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:HonawadMB PatilvijayapuraWaqf BoardZameer Ahmed Khanಎಂ.ಬಿ.ಪಾಟೀಲ್ರೈತರುವಕ್ಫ್ ಆಸ್ತಿವಕ್ಫ್ ಬೋರ್ಡ್ವಿಜಯಪುರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

CET Exam
Chikkamagaluru

ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ

Public TV
By Public TV
13 minutes ago
West Bengal clash
Latest

West Bengal Elections | ಕಚ್ಚಾ ಬಾಂಬ್ ದಾಳಿ ಬಳಿಕ ಉಲ್ಬಣಗೊಂಡ TMC-AJUP ಕಾರ್ಯಕರ್ತರ ಘರ್ಷಣೆ

Public TV
By Public TV
29 minutes ago
SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
59 minutes ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
1 hour ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
2 hours ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?