– ಬೆಳಗಾವಿಯಲ್ಲಿ ಬೃಹತ್ ಸಮಾವೇಶ
ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ಸಮಸ್ಯೆ (Waqf Property Row) ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ ಶೀರ್ಷಿಕೆಯ ಅಡಿಯಲ್ಲಿ ಜನಾಂದೋಲನ ಮಾಡಲು ನಿರ್ಧರಿಸಿದ್ದೇವೆ. ನವೆಂಬರ್ 21 ಮತ್ತು 22ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ತಹಶೀಲ್ದಾರರ ಕಚೇರಿಗಳ ಮುಂದೆ ದಿನವಿಡೀ ಪ್ರತಿಭಟನೆ ನಡೆಸಲಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ (Ashwath Narayan) ಅವರು ತಿಳಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಜೊತೆಗೆ ಎಲ್ಲ ಸಂತ್ರಸ್ತರಿಂದ ಅರ್ಜಿಗಳ ಸ್ವೀಕಾರ, ವಕ್ಫ್ ಅಧಿಕಾರ ದುರ್ಬಳಕೆಯಿಂದ ಸಮಸ್ಯೆ – ಶೋಷಣೆಗೆ ಒಳಗಾದವರ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಆಫ್ರಿಕಾ ವಿರುದ್ಧ ಸರಣಿ ಗೆದ್ದ ಬಳಿಕ ಪತ್ನಿಯೊಂದಿಗೆ ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸೂರ್ಯಕುಮಾರ್ ಭೇಟಿ
Advertisement
Advertisement
ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಪ್ರವಾಸ:
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Bangalore Freedom Park) ಪ್ರತಿಭಟನೆ ನಡೆಸಲಿದ್ದೇವೆ. ಜೊತೆಗೆ 3 ತಂಡಗಳನ್ನು ರಚಿಸಿದ್ದೇವೆ. ಕೇಂದ್ರದ ಸಚಿವರು, ಮಾಜಿ ಮುಖ್ಯಮಂತ್ರಿಗಳು, ಹಿರಿಯರು, ವರಿಷ್ಠರು ಸೇರಿ 3 ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ (R Ashoka), ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ 3 ತಂಡಗಳ ನೇತೃತ್ವ ವಹಿಸುತ್ತಿದ್ದಾರೆ ಎಂದು ಅಶ್ವಥ್ ನಾರಾಯಣ್ ವಿವರಿಸಿದರು.
Advertisement
ಈ ತಂಡಗಳು ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲಿವೆ. ರೈತರು, ಮಠಾಧೀಶರು ಸೇರಿ ತೊಂದರೆಗೆ ಒಳಗಾದವರಿಂದ ಮಾಹಿತಿ ಪಡೆಯಲಿವೆ. ಚಳಿಗಾಲದ ಅಧಿವೇಶನದಲ್ಲಿ ವಿವರ ಮಂಡಿಸಿ, ಜನರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಲೆ ಯತ್ನ ಕೇಸ್; ನಟ ತಾಂಡವೇಶ್ವರ್ ಅರೆಸ್ಟ್- ಕಮಿಷನರ್ ದಯಾನಂದ್ ಹೇಳೋದೇನು?
Advertisement
ಬೆಳಗಾವಿಯಲ್ಲಿ ಬೃಹತ್ ಸಮಾವೇಶ:
ಅಧಿವೇಶನಕ್ಕೂ ಮೊದಲು ಬೆಳಗಾವಿಯಲ್ಲಿ ವಕ್ಫ್ ವಿಚಾರವಾಗಿ ಬೃಹತ್ ಸಮಾವೇಶ ಏರ್ಪಡಿಸಲಾಗುವುದು. ಅಧಿಕಾರ ದುರ್ಬಳಕೆ ಕೈಬಿಡುವಂತೆ ಕಾಂಗ್ರೆಸ್ ಸರ್ಕಾರ ಮತ್ತು ವಕ್ಫ್ ಮಂಡಳಿಗೆ ಸ್ಪಷ್ಟ ಸಂದೇಶ ನೀಡಲಿದ್ದೇವೆ ಎಂದು ಪ್ರಕಟಿಸಿದರು. ಅಹವಾಲು, ಮಾಹಿತಿ ಸಂಗ್ರಹಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ರೈತರು, ವಕೀಲರು ಸೇರಿ ಪ್ರಮುಖರುಳ್ಳ 5 ಜನರ ತಂಡ ರಚಿಸಿದ್ದೇವೆ ಎಂದರು.
ಬಿಜೆಪಿ ಒತ್ತಾಯ ಮತ್ತು ಹೋರಾಟದ ಬಳಿಕ ರಾಜ್ಯದ ಕಾಂಗ್ರೆಸ್ ಸರ್ಕಾರವು ವಕ್ಫ್ ಸಂಬಂಧ ಹೊರಡಿಸಿದ್ದ ನೋಟಿಸ್ ಹಿಂಪಡೆಯಲು ಸೂಚನೆ ನೀಡಿದೆ. ಆರ್‌ಟಿಸಿಯಲ್ಲಿ ವಕ್ಫ್ ಹೆಸರು ನೋಂದಣಿ ಹಿಂಪಡೆಯಬೇಕು ಮತ್ತು 1974ರ ಗೆಜೆಟ್ ಹಿಂಪಡೆಯಲು ನಾವು ಒತ್ತಾಯಿಸುತ್ತಿದ್ದೇವೆ ಎಂದು ತಿಳಿಸಿದರಲ್ಲದೇ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ 1,700ಕ್ಕೂ ಹೆಚ್ಚು ಆಸ್ತಿಗಳನ್ನು ವಶಪಡಿಸಿಕೊಳ್ಳಲು ಮುಂದಾದ ಕುರಿತು ಗಮನ ಸೆಳೆದರು.
ವಕ್ಫ್ ಮೂಲಕ ಆಸ್ತಿ ವಶಪಡಿಸಿಕೊಳ್ಳುವ ವಿಚಾರದಲ್ಲಿ ಜನಜಾಗೃತಿ ಆಗಿದೆ. ವಕ್ಫ್, ಕಾಂಗ್ರೆಸ್ ಸರ್ಕಾರದ ಅಧಿಕಾರ ದುರ್ಬಳಕೆ, ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿಗಳ ಆದೇಶ ಎಂದು ತಿಳಿಸಿ ತ್ವರಿತವಾಗಿ ಕಾಲಂ ನಂಬರ್ 9 ಹಾಗೂ 11ರಲ್ಲಿ ಇಂಡೀಕರಣ, ಆಸ್ತಿ ಬದಲಾವಣೆ ಪ್ರಯತ್ನ ಮಾಡಿದ್ದರು ಎಂದು ಆಕ್ಷೇಪಿಸಿದರು.
ಮಠ, ಮಂದಿರಗಳಿಗೂ ನ್ಯಾಯ ಸಿಗಬೇಕು:
ಮಠ, ಮಂದಿರಗಳಿಗೂ ನ್ಯಾಯ ಲಭಿಸಬೇಕಿದೆ ಎಂದ ಅವರು, ವಕ್ಫ್ ವಿಚಾರದಲ್ಲಿ ಆದ ದುರ್ಬಳಕೆ ಸಂಬಂಧ ಮಾಹಿತಿ ಕಲೆಹಾಕುವ ಕೆಲಸ ನಡೆದಿದೆ. ಸಾರ್ವಜನಿಕರು, ರೈತರು ಪಹಣಿಗಳ ಕುರಿತು ಪರಿಶೀಲಿಸಬೇಕು; ವಕ್ಫ್ ಎಂಟ್ರಿ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು. 3 ತಂಡದಲ್ಲಿ ಯತ್ನಾಳ್ ಅವರೂ ಇದ್ದಾರೆ. ಅವರೂ ಪ್ರವಾಸ ಮಾಡಲಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮುಸ್ಲಿಮರ ಓಲೈಕೆಯಲ್ಲಿ ತೊಡಗಿದೆ. ವಕ್ಫ್ ಹೊಸ ಕಾನೂನು ಬರುವ ಹಿನ್ನೆಲೆಯಲ್ಲಿ ತ್ವರಿತವಾಗಿ ಎಲ್ಲೆಲ್ಲಿ ರೈತರ ಆಸ್ತಿ, ಮಠ, ಮಂದಿರಗಳ ಜಮೀನು, ಶಾಲೆಗಳನ್ನು ವಕ್ಫ್ ಆಸ್ತಿಯಾಗಿ ವಶಪಡಿಸಲು ಮಾಡಿದ ಪ್ರಯತ್ನ ನಾಡಿನ ಜನತೆಗೆ ಗೊತ್ತಿದೆ ಎಂದರು. ಇದನ್ನೂ ಓದಿ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ: ಸಚಿವ ಕೆ.ಜೆ.ಜಾರ್ಜ್
ಕಾಂಗ್ರೆಸ್ ಆಡಳಿತದಲ್ಲಿ ಆಸ್ತಿ ತೆರಿಗೆ, ಪೆಟ್ರೋಲ್, ತೆರಿಗೆಗಳು ಗಗನಕ್ಕೇರಿವೆ. ಜಯನಗರದ ಬಿಜೆಪಿ ಶಾಸಕರಿಗೆ ಅನುದಾನ ನೀಡದೆ ಇರುವುದು, ಅವರನ್ನು ಅವಮಾನ ಮಾಡಿದ್ದನ್ನು ಖಂಡಿಸುತ್ತೇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿ ಸರ್ಕಾರದ ಈ ನಡವಳಿಕೆಯನ್ನು ಖಂಡಿಸುತ್ತೇವೆ. ಅವರು ಕ್ಷಮೆ ಯಾಚಿಸಬೇಕು ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಅಧಿಕಾರ ದುರ್ಬಳಕೆ ಮಾಡದಿರಿ, ದುರಹಂಕಾರದ ಮಾತನಾಡದಿರಿ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಶಾಸಕರೊಬ್ಬರು ಅನುದಾನ ಸಿಗದೇ ಇರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ದಿವಾಳಿಯಾಗಿದೆ. ವೇತನ ನೀಡಲು ದುಡ್ಡಿಲ್ಲ, ರಾಜು ಕಾಗೆಯವರು ಅನುದಾನ ಸಿಗದ ಬಗ್ಗೆ ತಿಳಿಸಿ ಆತ್ಮಹತ್ಯೆಯ ಮಾತನಾಡಿದ್ದಾರೆ. ಗವಿಯಪ್ಪ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಮತ್ತಿತರರು ಮಾತನಾಡಿದ್ದಾರೆ ಎಂದು ವಿವರಿಸಿದರು.
ಅರ್ಹ ಬಿಪಿಎಲ್ ಕಾರ್ಡ್‍ದಾರರಿಗೆ ಸರ್ಕಾರ ಅನ್ಯಾಯ ಮಾಡಲು ಮುಂದಾಗಿದೆ. ನೀವೇ ಗ್ಯಾರಂಟಿ ಘೋಷಿಸಿದವರು. ಎಲ್ಲರಿಗೂ ಇದೀಗ ನಿರ್ಬಂಧ ಹಾಕುತ್ತಿದ್ದೀರಿ. ಮೋದಿಯವರು ಕೊಡುವ ರೇಷನ್, ಆಯುಷ್ಮಾನ್, ನರೇಗಾ ಯೋಜನೆ, ಶಿಕ್ಷಣ ಮತ್ತಿತರ ಸೌಲಭ್ಯಗಳು ಸಿಗದಂತೆ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಮಂತ್ರಿಗಳು ಟೀಕಿಸಿದರು. ಇದನ್ನೂ ಓದಿ: Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕ ವಿಕ್ರಂ ಗೌಡ ಯಾರು?