Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್ ವಿರುದ್ಧ ಬಿಜೆಪಿ ಹೋರಾಟಕ್ಕೆ ಮುಹೂರ್ತ; ನ.21, 22ರಂದು ರಾಜ್ಯಾದ್ಯಂತ ಪ್ರತಿಭಟನೆ: ಅಶ್ವಥ್‌ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ವಕ್ಫ್ ವಿರುದ್ಧ ಬಿಜೆಪಿ ಹೋರಾಟಕ್ಕೆ ಮುಹೂರ್ತ; ನ.21, 22ರಂದು ರಾಜ್ಯಾದ್ಯಂತ ಪ್ರತಿಭಟನೆ: ಅಶ್ವಥ್‌ ನಾರಾಯಣ್

Belgaum

ವಕ್ಫ್ ವಿರುದ್ಧ ಬಿಜೆಪಿ ಹೋರಾಟಕ್ಕೆ ಮುಹೂರ್ತ; ನ.21, 22ರಂದು ರಾಜ್ಯಾದ್ಯಂತ ಪ್ರತಿಭಟನೆ: ಅಶ್ವಥ್‌ ನಾರಾಯಣ್

Public TV
Last updated: November 19, 2024 3:22 pm
Public TV
Share
4 Min Read
ASHWATH NARAYAN
SHARE

– ಬೆಳಗಾವಿಯಲ್ಲಿ ಬೃಹತ್ ಸಮಾವೇಶ

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ಸಮಸ್ಯೆ (Waqf Property Row) ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ ಶೀರ್ಷಿಕೆಯ ಅಡಿಯಲ್ಲಿ ಜನಾಂದೋಲನ ಮಾಡಲು ನಿರ್ಧರಿಸಿದ್ದೇವೆ. ನವೆಂಬರ್ 21 ಮತ್ತು 22ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ತಹಶೀಲ್ದಾರರ ಕಚೇರಿಗಳ ಮುಂದೆ ದಿನವಿಡೀ ಪ್ರತಿಭಟನೆ ನಡೆಸಲಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್‌ ನಾರಾಯಣ್ (Ashwath Narayan) ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಜೊತೆಗೆ ಎಲ್ಲ ಸಂತ್ರಸ್ತರಿಂದ ಅರ್ಜಿಗಳ ಸ್ವೀಕಾರ, ವಕ್ಫ್ ಅಧಿಕಾರ ದುರ್ಬಳಕೆಯಿಂದ ಸಮಸ್ಯೆ – ಶೋಷಣೆಗೆ ಒಳಗಾದವರ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಆಫ್ರಿಕಾ ವಿರುದ್ಧ ಸರಣಿ ಗೆದ್ದ ಬಳಿಕ ಪತ್ನಿಯೊಂದಿಗೆ ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸೂರ್ಯಕುಮಾರ್‌ ಭೇಟಿ

ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಪ್ರವಾಸ:
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Bangalore Freedom Park) ಪ್ರತಿಭಟನೆ ನಡೆಸಲಿದ್ದೇವೆ. ಜೊತೆಗೆ 3 ತಂಡಗಳನ್ನು ರಚಿಸಿದ್ದೇವೆ. ಕೇಂದ್ರದ ಸಚಿವರು, ಮಾಜಿ ಮುಖ್ಯಮಂತ್ರಿಗಳು, ಹಿರಿಯರು, ವರಿಷ್ಠರು ಸೇರಿ 3 ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ (R Ashoka), ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ 3 ತಂಡಗಳ ನೇತೃತ್ವ ವಹಿಸುತ್ತಿದ್ದಾರೆ ಎಂದು ಅಶ್ವಥ್‌ ನಾರಾಯಣ್‌ ವಿವರಿಸಿದರು.

ಈ ತಂಡಗಳು ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲಿವೆ. ರೈತರು, ಮಠಾಧೀಶರು ಸೇರಿ ತೊಂದರೆಗೆ ಒಳಗಾದವರಿಂದ ಮಾಹಿತಿ ಪಡೆಯಲಿವೆ. ಚಳಿಗಾಲದ ಅಧಿವೇಶನದಲ್ಲಿ ವಿವರ ಮಂಡಿಸಿ, ಜನರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಲೆ ಯತ್ನ ಕೇಸ್; ನಟ ತಾಂಡವೇಶ್ವರ್ ಅರೆಸ್ಟ್- ಕಮಿಷನರ್ ದಯಾನಂದ್ ಹೇಳೋದೇನು?

ಬೆಳಗಾವಿಯಲ್ಲಿ ಬೃಹತ್ ಸಮಾವೇಶ:
ಅಧಿವೇಶನಕ್ಕೂ ಮೊದಲು ಬೆಳಗಾವಿಯಲ್ಲಿ ವಕ್ಫ್ ವಿಚಾರವಾಗಿ ಬೃಹತ್ ಸಮಾವೇಶ ಏರ್ಪಡಿಸಲಾಗುವುದು. ಅಧಿಕಾರ ದುರ್ಬಳಕೆ ಕೈಬಿಡುವಂತೆ ಕಾಂಗ್ರೆಸ್ ಸರ್ಕಾರ ಮತ್ತು ವಕ್ಫ್ ಮಂಡಳಿಗೆ ಸ್ಪಷ್ಟ ಸಂದೇಶ ನೀಡಲಿದ್ದೇವೆ ಎಂದು ಪ್ರಕಟಿಸಿದರು. ಅಹವಾಲು, ಮಾಹಿತಿ ಸಂಗ್ರಹಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ರೈತರು, ವಕೀಲರು ಸೇರಿ ಪ್ರಮುಖರುಳ್ಳ 5 ಜನರ ತಂಡ ರಚಿಸಿದ್ದೇವೆ ಎಂದರು.

ಬಿಜೆಪಿ ಒತ್ತಾಯ ಮತ್ತು ಹೋರಾಟದ ಬಳಿಕ ರಾಜ್ಯದ ಕಾಂಗ್ರೆಸ್ ಸರ್ಕಾರವು ವಕ್ಫ್ ಸಂಬಂಧ ಹೊರಡಿಸಿದ್ದ ನೋಟಿಸ್ ಹಿಂಪಡೆಯಲು ಸೂಚನೆ ನೀಡಿದೆ. ಆರ್‌ಟಿಸಿಯಲ್ಲಿ ವಕ್ಫ್ ಹೆಸರು ನೋಂದಣಿ ಹಿಂಪಡೆಯಬೇಕು ಮತ್ತು 1974ರ ಗೆಜೆಟ್ ಹಿಂಪಡೆಯಲು ನಾವು ಒತ್ತಾಯಿಸುತ್ತಿದ್ದೇವೆ ಎಂದು ತಿಳಿಸಿದರಲ್ಲದೇ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ 1,700ಕ್ಕೂ ಹೆಚ್ಚು ಆಸ್ತಿಗಳನ್ನು ವಶಪಡಿಸಿಕೊಳ್ಳಲು ಮುಂದಾದ ಕುರಿತು ಗಮನ ಸೆಳೆದರು.

ವಕ್ಫ್ ಮೂಲಕ ಆಸ್ತಿ ವಶಪಡಿಸಿಕೊಳ್ಳುವ ವಿಚಾರದಲ್ಲಿ ಜನಜಾಗೃತಿ ಆಗಿದೆ. ವಕ್ಫ್, ಕಾಂಗ್ರೆಸ್ ಸರ್ಕಾರದ ಅಧಿಕಾರ ದುರ್ಬಳಕೆ, ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿಗಳ ಆದೇಶ ಎಂದು ತಿಳಿಸಿ ತ್ವರಿತವಾಗಿ ಕಾಲಂ ನಂಬರ್ 9 ಹಾಗೂ 11ರಲ್ಲಿ ಇಂಡೀಕರಣ, ಆಸ್ತಿ ಬದಲಾವಣೆ ಪ್ರಯತ್ನ ಮಾಡಿದ್ದರು ಎಂದು ಆಕ್ಷೇಪಿಸಿದರು.

ಮಠ, ಮಂದಿರಗಳಿಗೂ ನ್ಯಾಯ ಸಿಗಬೇಕು:
ಮಠ, ಮಂದಿರಗಳಿಗೂ ನ್ಯಾಯ ಲಭಿಸಬೇಕಿದೆ ಎಂದ ಅವರು, ವಕ್ಫ್ ವಿಚಾರದಲ್ಲಿ ಆದ ದುರ್ಬಳಕೆ ಸಂಬಂಧ ಮಾಹಿತಿ ಕಲೆಹಾಕುವ ಕೆಲಸ ನಡೆದಿದೆ. ಸಾರ್ವಜನಿಕರು, ರೈತರು ಪಹಣಿಗಳ ಕುರಿತು ಪರಿಶೀಲಿಸಬೇಕು; ವಕ್ಫ್ ಎಂಟ್ರಿ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು. 3 ತಂಡದಲ್ಲಿ ಯತ್ನಾಳ್ ಅವರೂ ಇದ್ದಾರೆ. ಅವರೂ ಪ್ರವಾಸ ಮಾಡಲಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮುಸ್ಲಿಮರ ಓಲೈಕೆಯಲ್ಲಿ ತೊಡಗಿದೆ. ವಕ್ಫ್ ಹೊಸ ಕಾನೂನು ಬರುವ ಹಿನ್ನೆಲೆಯಲ್ಲಿ ತ್ವರಿತವಾಗಿ ಎಲ್ಲೆಲ್ಲಿ ರೈತರ ಆಸ್ತಿ, ಮಠ, ಮಂದಿರಗಳ ಜಮೀನು, ಶಾಲೆಗಳನ್ನು ವಕ್ಫ್ ಆಸ್ತಿಯಾಗಿ ವಶಪಡಿಸಲು ಮಾಡಿದ ಪ್ರಯತ್ನ ನಾಡಿನ ಜನತೆಗೆ ಗೊತ್ತಿದೆ ಎಂದರು. ಇದನ್ನೂ ಓದಿ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ: ಸಚಿವ ಕೆ.ಜೆ.ಜಾರ್ಜ್

ಕಾಂಗ್ರೆಸ್ ಆಡಳಿತದಲ್ಲಿ ಆಸ್ತಿ ತೆರಿಗೆ, ಪೆಟ್ರೋಲ್, ತೆರಿಗೆಗಳು ಗಗನಕ್ಕೇರಿವೆ. ಜಯನಗರದ ಬಿಜೆಪಿ ಶಾಸಕರಿಗೆ ಅನುದಾನ ನೀಡದೆ ಇರುವುದು, ಅವರನ್ನು ಅವಮಾನ ಮಾಡಿದ್ದನ್ನು ಖಂಡಿಸುತ್ತೇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿ ಸರ್ಕಾರದ ಈ ನಡವಳಿಕೆಯನ್ನು ಖಂಡಿಸುತ್ತೇವೆ. ಅವರು ಕ್ಷಮೆ ಯಾಚಿಸಬೇಕು ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಅಧಿಕಾರ ದುರ್ಬಳಕೆ ಮಾಡದಿರಿ, ದುರಹಂಕಾರದ ಮಾತನಾಡದಿರಿ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಶಾಸಕರೊಬ್ಬರು ಅನುದಾನ ಸಿಗದೇ ಇರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ದಿವಾಳಿಯಾಗಿದೆ. ವೇತನ ನೀಡಲು ದುಡ್ಡಿಲ್ಲ, ರಾಜು ಕಾಗೆಯವರು ಅನುದಾನ ಸಿಗದ ಬಗ್ಗೆ ತಿಳಿಸಿ ಆತ್ಮಹತ್ಯೆಯ ಮಾತನಾಡಿದ್ದಾರೆ. ಗವಿಯಪ್ಪ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಮತ್ತಿತರರು ಮಾತನಾಡಿದ್ದಾರೆ ಎಂದು ವಿವರಿಸಿದರು.

ಅರ್ಹ ಬಿಪಿಎಲ್ ಕಾರ್ಡ್‍ದಾರರಿಗೆ ಸರ್ಕಾರ ಅನ್ಯಾಯ ಮಾಡಲು ಮುಂದಾಗಿದೆ. ನೀವೇ ಗ್ಯಾರಂಟಿ ಘೋಷಿಸಿದವರು. ಎಲ್ಲರಿಗೂ ಇದೀಗ ನಿರ್ಬಂಧ ಹಾಕುತ್ತಿದ್ದೀರಿ. ಮೋದಿಯವರು ಕೊಡುವ ರೇಷನ್, ಆಯುಷ್ಮಾನ್, ನರೇಗಾ ಯೋಜನೆ, ಶಿಕ್ಷಣ ಮತ್ತಿತರ ಸೌಲಭ್ಯಗಳು ಸಿಗದಂತೆ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಮಂತ್ರಿಗಳು ಟೀಕಿಸಿದರು. ಇದನ್ನೂ ಓದಿ:  Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

TAGGED:Ashwath NarayanBelagavi ConferencebengalurubjpcongressWaqf Property Rowಅಶ್ವಥ್ ನಾರಾಯಣ್ಕಾಂಗ್ರೆಸ್ಬಿಜೆಪಿಬೆಳಗಾವಿ ಸಮಾವೇಶವಕ್ಫ್‌ ಆಸ್ತಿ ವಿವಾದ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
38 minutes ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
42 minutes ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
1 hour ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
2 hours ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
2 hours ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?