ಗುವಾಹಟಿ: ಬಾಲ್ಯ ವಿವಾಹದ (Child Marriage) ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿರುವ ಅಸ್ಸಾಂನ (Assam) ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ನೇತೃತ್ವದ ಸರ್ಕಾರ ಇಂದು ಎರಡನೇ ಹಂತದ ಕಾರ್ಯಾಚರಣೆ ನಡೆಸಿದ್ದು, ಕಾನೂನಿನ ವಿರುದ್ಧ ಅಪ್ರಾಪ್ತರ ಮದುವೆ ಮಾಡಿಸುತ್ತಿದ್ದ 800ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಈ ಬಗ್ಗೆ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿರುವ ಹಿಮಂತ ಬಿಸ್ವಾ ಶರ್ಮಾ ಈ ವರ್ಷದ ಆರಂಭದಲ್ಲಿ ಮೊದಲ ಸುತ್ತಿನ ಕಾರ್ಯಾಚರಣೆಯಲ್ಲಿ ರಾಜ್ಯಾದ್ಯಂತ ಸಾವಿರಾರು ಮಂದಿಯನ್ನು ಬಂಧಿಸಲಾಯಿತು. ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಗಳಲ್ಲಿ ಬಂಧಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು: ಯೋಗಿ
ಕಳೆದ ಐದು ವರ್ಷಗಳಲ್ಲಿ ಬಾಲ್ಯವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಒಟ್ಟು 3,907 ಜನರನ್ನು ಬಂಧಿಸಲಾಗಿದೆ. ಅವರಲ್ಲಿ 3,319 ಜನರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012ರ (POCSO) ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಸೆಪ್ಟೆಂಬರ್ 11 ರಂದು ಅಸ್ಸಾಂ ವಿಧಾನಸಭೆಗೆ ಶರ್ಮಾ ತಿಳಿಸಿದ್ದರು. ಇದನ್ನೂ ಓದಿ: ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ
Web Stories