ಬೆಂಗಳೂರು: ಚುನಾವಣೆ ಬಳಿಕ ಜೆಡಿಎಸ್-ಕಾಂಗ್ರೆಸ್ ಜೊತೆಯಾಗಿ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡಿವೆ. ಆದ್ರೆ ಸಂಪುಟ ರಚನೆಯ ಬಳಿಕ ಎರಡೂ ಪಕ್ಷಗಳಲ್ಲಿ ಭಿನ್ನಮತದ ಹೊಗೆ ಕಾಣುತ್ತಿದ್ದು, ಕೆಲ ನಾಯಕರು ಪಕ್ಷದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ.
ಇತ್ತ ಕಾಂಗ್ರೆಸ್-ಜೆಡಿಎಸ್ ಲೋಕಸಭಾ ಚುನಾವಣೆಗೂ ಮೈತ್ರಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ. ಭಾನುವಾರ ಕಾಂಗ್ರೆಸ್ ಸಂಸದರಿಂದ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಕಾಂಗ್ರೆಸ್ ಸಂಸದರು ತಗಾದೆ ತೆಗೆದಿದ್ದಾರೆ ಎನ್ನಲಾಗಿದೆ.
Advertisement
Advertisement
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿನ ಕ್ಷೇತ್ರಗಳನ್ನು ಕೇಳುತ್ತಿದೆ ಎಂದು ಹೇಳಲಾಗುತ್ತಿದೆ. ಕಾರಣ ಜೆಡಿಎಸ್ ದಕ್ಷಿಣ ಕರ್ನಾಟಕದಲ್ಲಿ ಪ್ರಾಬಲ್ಯತೆಯನ್ನು ಹೊಂದಿದ್ದು, ಸುಲಭವಾಗಿ ಗೆಲುವು ಸಾಧಿಸಬಹುದು ಎಂಬುದು ಜೆಡಿಎಸ್ ಲೆಕ್ಕಾಚಾರವಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಎಂಬಿ ಪಾಟೀಲ್‍ಗೆ ಹೇಳಿದ್ದೇನು?- ಮಾತುಕತೆಯ ಮಾಹಿತಿ ಇಲ್ಲಿದೆ
Advertisement
ರಾಯಚೂರು, ಚಿಕ್ಕಬಳ್ಳಾಪುರ, ಮಂಡ್ಯ, ಹಾಸನ, ಚಾಮರಾಜನಗರ, ಚಿತ್ರದುರ್ಗ, ತುಮಕೂರು ಮತ್ತು ಶಿವಮೊಗ್ಗ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಕೇಳಿದೆಯಂತೆ. ಆದರೆ ಈ ಕ್ಷೇತ್ರಗಳಲ್ಲಿ ಸದ್ಯ ಕಾಂಗ್ರೆಸ್ ಸಂಸದರು ಇದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನ ಈ ಬಲಿಷ್ಠ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡೋದು ಹೇಗೆ? ಬಿಟ್ಟು ಕೊಟ್ರೆ, ಪಕ್ಷದ ಹಾಲಿ ಸಂಸದರು ಎಲ್ಲಿಗೆ ಹೋಗಬೇಕು ? ಇದ್ರಿಂದ ನಮಗೆ ಡ್ಯಾಮೇಜ್ ಆಗಲ್ವಾ ಅಂತ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರನ್ನು ಸಂಸದರು ಪ್ರಶ್ನೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಇದನ್ನೂ ಓದಿ: ಜೆಡಿಎಸ್‍ನಲ್ಲೂ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟ
Advertisement
ಲೋಕಸಭಾ ಚುನಾವಣೆಗೆ ಬೇಕಾದರೆ ಜೆಡಿಎಸ್‍ಗೆ ಹಾಸನ, ಮಂಡ್ಯ, ಶಿವಮೊಗ್ಗ, ಮೈಸೂರು ಬಿಟ್ಟುಕೊಡೋಣ. ಉಳಿದ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಲಿ. ಆ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳೊಣ ಅಂತಾ ಎಲ್ಲ ಸಂಸದರು ಪರಮೇಶ್ವರ್ ಅವರಿಗೆ ಸಲಹೆ ನೀಡಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.