ಕೋಲಾರ: ಸ್ನೇಹಿತರೊಂದಿಗೆ ತುಂಟಾಟ ಮಾಡುತ್ತಾ ವಿದ್ಯಾರ್ಥಿಯೊರ್ವ (Student) ವಸತಿ ಶಾಲೆಯಲ್ಲಿ ದೆವ್ವ ಇದೆ ಎಂದು ಹೆದರಿಸಿದ ಎಂಬ ಕಾರಣಕ್ಕೆ ವಾರ್ಡನ್ (Warden) ಮನಬಂದಂತೆ ಹೊಡೆದು ಗಾಯಗೊಳಿಸಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು (Mulabagilu) ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಾರ್ಡನ್ ವಿದ್ಯಾರ್ಥಿಗಳಿಗೆ ಬಾಸುಂಡೆ ಬರುವಂತೆ ಹೊಡದಿದ್ದಾರೆ. ಈ ಹಿಂದೆ ಮುರಡೇಶ್ವರಕ್ಕೆ ಪ್ರವಾಸ ಹೋಗಿ 5 ಜನ ವಿದ್ಯಾರ್ಥಿಗಳು ಮೃತಪಟ್ಟು ಸುದ್ದಿಯಾಗಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯ ಈಗ ವಾರ್ಡನ್ ತಮ್ಮ ಸೊಂಟದ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಹೊಡೆದು ಗಾಯಗೊಳಿಸಿದ್ದಾರೆ. ಇದನ್ನೂ ಓದಿ: ಏಕಕಾಲದಲ್ಲಿ 2 ಹೆಣ್ಣು, 1 ಗಂಡು ಸೇರಿ ತ್ರಿವಳಿ ಮಕ್ಕಳಿಗೆ ಜನ್ಮವಿತ್ತ ತಾಯಿ
ಸೋಮವಾರ ಶಾಲೆಯಲ್ಲಿ ಪೋಷಕರ ಸಭೆ ಕರೆದಿದ್ದ ವೇಳೆ ನಾಲ್ಕು ಜನ ವಿದ್ಯಾರ್ಥಿಗಳಿಗೆ ಬಾಸುಂಡೆ ಬರುವಂತೆ ಹೊಡೆದಿರುವ ಘಟನೆ ಬೆಳಕಿಗೆ ಬಂದಿದೆ. ವಸತಿ ಶಾಲೆಯ ಎಸ್.ಅಂಜನ್ ಕುಮಾರ್ ಬಾಸುಂಡೆ ಬರುವಂತೆ ಏಟು ತಿಂದ ವಿದ್ಯಾರ್ಥಿಯಾಗಿದ್ದು, ಈತನ ಜೊತೆಗೆ ಇನ್ನೂ ಮೂರು ವಿದ್ಯಾರ್ಥಿಗಳಿಗೆ ಹೊಡೆದಿದ್ದಾರೆ ಎನ್ನಲಾಗಿದೆ. ಮುಳಬಾಗಿಲು ತಾಲೂಕಿನ ಅನಂತಪುರ ಗ್ರಾಮದ 6ನೇ ತರಗತಿ ವಿದ್ಯಾರ್ಥಿ ಅಂಜನ್ ಕುಮಾರ್‌ನನ್ನು ವಸತಿ ಶಾಲೆಯ ವಾರ್ಡನ್ ಮಹೇಶ್ ಬಾಸುಂಡೆ ಬರುವಂತೆ ಬಾರಿಸಿ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಇ-ಖಾತೆದಾರರಿಗೆ ಬಿಗ್ ಶಾಕ್ – ಬಿಬಿಎಂಪಿಯಿಂದ ಶೋಕಾಸ್ ನೋಟಿಸ್ ಜಾರಿ
ಇತ್ತೀಚೆಗಷ್ಟೆ ತಂದೆಯನ್ನ ಕಳೆದುಕೊಂಡಿರುವ ಅಂಜನ್‌ನನ್ನು ತಾಯಿ ಕಷ್ಟಪಟ್ಟು ವಿದ್ಯಾಭ್ಯಾಸ ಕೊಡಿಸುತ್ತಿದ್ದಾಳೆ. ವಸತಿ ನಿಲಯದಲ್ಲಿ ದೆವ್ವ ಇದೆ ಎಂದು ಸಹಪಾಠಿಗಳನ್ನು ಅಂಜನ್ ಹೆದರಿಸುತ್ತಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳು ಈ ವಿಷಯವನ್ನು ತನ್ನ ಗಮನಕ್ಕೆ ತಂದಿದ್ದರು, ಹಾಗಾಗಿ ಹೊಡೆದಿರುವುದಾಗಿ ವಾರ್ಡನ್ ಮಹೇಶ್ ಹಾಗೂ ಪ್ರಾಂಶುಪಾಲರು ಕುಮಾರ್ ರಾಜ್ ಸಮರ್ಥನೆ ನೀಡಿದ್ದಾರೆ. ಇದನ್ನೂ ಓದಿ: ಮಿಗ್-21 ಯುದ್ಧ ವಿಮಾನದ 62 ವರ್ಷಗಳ ಸೇವೆಗೆ ವಿದಾಯ – ಸೆ. 19ರಂದು ಬೀಳ್ಕೊಡುಗೆ ಸಮಾರಂಭ
ಇನ್ನೂ ಬೆಲ್ಟ್ ಹಾಗೂ ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿರುವ ಹಿನ್ನೆಲೆ ವಿದ್ಯಾರ್ಥಿ ತೊಡೆ ಮೇಲೆ ರಕ್ತ ಹೆಪ್ಪುಗಟ್ಟಿದ ಗಾಯಗಳಾಗಿವೆ. ಶಾಲೆಯಲ್ಲಿ ಪೋಷಕರ ಸಭೆಗೆ ಬಂದಾಗ ತನ್ನ ಮಗನ ಮೇಲೆ ಹಲ್ಲೆ ನಡೆದಿರುವ ಸಂಗತಿ ಬೆಳಕಿಗೆ ಬಂದಿದೆ ಎಂದು ತಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ – ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ