ವಿಜಯಪುರ: ಬರ್ತ್‌ಡೇಗಾಗಿ ಹಾಸ್ಟೆಲ್‌ನ ವಾರ್ಡನ್ ಹಾಗೂ ಅಡುಗೆ ಕೆಲಸದಾಕೆ ಅಲ್ಲಿನ ವಿದ್ಯಾರ್ಥಿನಿಯರನ್ನು ಹೋಟೆಲ್‌ಗೆ ಕರೆದೊಯ್ದು ಪಾರ್ಟಿ ಮಾಡಿಸಿದ್ದರು. ಇದರ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆ (Department of Social Welfare) ಉಪನಿರ್ದೇಶಕರು ಎಚ್ಚೆತ್ತುಕೊಂಡು ಇಬ್ಬರಿಗೂ ನೋಟಿಸ್ ನೀಡಿದ್ದಾರೆ.
ಬಡ ಪೋಷಕರು ಎಲ್ಲರಂತೆ ನಮ್ಮ ಮಕ್ಕಳು ವಿದ್ಯಾವಂತರಾಗಬೇಕು ಅಂತಾ ಕನಸು ಕಂಡಿರುತ್ತಾರೆ. ಆದ್ರ‍್ರೆ ದೊಡ್ಡ ನಗರಗಳಲ್ಲಿ ಶಾಲೆ, ಕಾಲೇಜುಗಳಿಗೆ ಫೀ ಕಟ್ಟಿ, ವಸತಿ ಸೌಲಭ್ಯ ಒದಗಿಸಲು ಸಾಧ್ಯವಾಗದೆ ಪರದಾಡುತ್ತಾರೆ. ಇಂತಹ ಬಡ ಪಾಲಕರ ಅನುಕೂಲಕ್ಕಾಗಿಯೇ ಸರ್ಕಾರ ವಸತಿ ನಿಲಯಗಳನ್ನು ನಿರ್ಮಿಸಿರುತ್ತದೆ. ಆದರೆ ಈ ವಸತಿ ಶಾಲೆಯ ಸಿಬ್ಬಂದಿ ಅಲ್ಲಿನ ನಿಯಮಗಳನ್ನು ಗಾಳಿಗೆ ತೂರಿ, ಬಡ ವಿದ್ಯಾರ್ಥಿಗಳನ್ನು ತಪ್ಪು ದಾರಿಗೆ ಎಳೆಯುವಂತಹ ಕೆಲಸ ಮಾಡುತ್ತಿದ್ದಾರೆ.ಇದನ್ನೂ ಓದಿ: ನಾಳೆಯಿಂದ 2 ದಿನ `ವಿದ್ಯಾಮಂದಿರʼ – ನಿಮ್ಮ PG ಶಿಕ್ಷಣ ಕನಸು ನನಸಾಗಿಸಲು ಬನ್ನಿ
ವಿಜಯಪುರ ನಗರದ ರಾಜಕುಮಾರ್ ಲೇಔಟ್‌ನಲ್ಲಿರುವ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ಈ ಹಾಸ್ಟೆಲ್ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿದೆ. ಈ ವಸತಿ ನಿಲಯದ ವಾರ್ಡನ್ ಶಕುಂತಲಾ ರಜಪೂತ್, ಯಾವುದೇ ಅನುಮತಿ ಪಡೆಯದೇ ಅಲ್ಲಿನ ವಿದ್ಯಾರ್ಥಿನಿಯರನ್ನು ಹುಟ್ಟುಹಬ್ಬದ ಪಾರ್ಟಿಗೆ ಕೊಂಡೊಯ್ದಿದ್ದಾರೆ.
ಕಳೆದ ಶನಿವಾರ ಈ ವಸತಿ ನಿಲಯದ ಅಡುಗೆಕೆಲಸದಾಕೆ ರಿಜ್ವಾನ್ ಮುಲ್ಲಾಳ ಹುಟ್ಟುಹಬ್ಬ ಇತ್ತು. ಹೀಗಾಗಿ ಬರ್ತ್‌ಡೇ ಆಚರಣೆಗೆಂದು ರಾತ್ರಿ 7 ಗಂಟೆಗೆ ಹೋಟಲ್‌ವೊಂದಕ್ಕೆ ವಿದ್ಯಾರ್ಥಿನಿಯರನ್ನ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳೊಂದಿಗೆ ಮೋಜು ಮಸ್ತಿ ಮಾಡಿ, ಕುಣಿದು ಕುಪ್ಪಳಿಸಿ ಪಾರ್ಟಿ ಮಾಡಿದ್ದಾರೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಈ ಮೂಲಕ ವಸತಿ ನಿಲಯದ ವಾರ್ಡನ್ ಹಾಗೂ ಅಡುಗೆ ಕೆಲಸದಾಕೆ ಹಾಸ್ಟೆಲ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದಾಗ ಯಾವುದಾದ್ರೂ ಅವಘಡ ಸಂಭವಿಸಿದ್ದರೆ ಯಾರು ಹೊಣೆ ಎಂದು ಸಾರ್ವಜನಿಕರು ಪ್ರಶ್ನಿಸ್ತಿದ್ದಾರೆ.
ಇನ್ನೂ ಈ ಅಡುಗೆ ಕೆಲಸದಾಕೆ ಈ ಹಿಂದೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ವಸತಿ ನಿಲಯದಲ್ಲೂ ಇದೆ ರೀತಿ ಹುಟ್ಟುಹಬ್ಬ ಆಚರಿಸಿ ಅಮಾನತು ಆಗಿದ್ದಳಂತೆ. ಇದೀಗ ಮತ್ತೆ ಅಂತಹದೇ ತಪ್ಪು ಮಾಡಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಮಾಹಿತಿ ತಿಳಿದ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಎಚ್ಚೆತ್ತುಕೊಂಡಿದ್ದು, ವಾರ್ಡನ್ ಹಾಗೂ ಅಡುಗೆ ಕೆಲಸದಾಕೆಗೆ ನೋಟಿಸ್ ನೀಡಿದ್ದಾರೆ. 3 ದಿನದಲ್ಲಿ ನೋಟಿಸ್‌ಗೆ ಉತ್ತರಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣನವರ್, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲು