ಮನೆಗೆ ವಿದ್ಯಾರ್ಥಿನಿಯರನ್ನು ಕರೆದ ವಾರ್ಡನ್ – ಪತಿ, ಸ್ನೇಹಿತರ ಜೊತೆ ಸೇರಿ ಲೈಂಗಿಕ ದೌರ್ಜನ್ಯ

Public TV
1 Min Read
HOSTEL WARDEN

ಜೈಪುರ: ಸರ್ಕಾರಿ ಹಾಸ್ಟೆಲ್‍ನ ಇಬ್ಬರು ವಿದ್ಯಾರ್ಥಿನಿಯರಿಗೆ ವಾರ್ಡನ್, ಆಕೆಯ ಪತಿ ಮತ್ತು ಆತನ ಸ್ನೇಹಿತರು ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

ಹಾಸ್ಟೆಲ್ ವಾರ್ಡನ್ ಹಾಸ್ಟೆಲ್‍ನಲ್ಲಿದ್ದ 12ನೇ ತರಗತಿ ವಿದ್ಯಾರ್ಥಿನಿಯರನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು. ಅಲ್ಲಿ ಆಕೆಯ ಪತಿ ಮತ್ತು ಆತನ ಸ್ನೇಹಿತರು ಸೇರಿಕೊಂಡು ಕೆಲವು ದಿನಗಳವರೆಗೂ ಹುಡುಗಿಯರ ಮೇಲೆ ಅತ್ಯಾಚಾರ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಎಸ್‍ಪಿ ಮಹೇಶ್ ತ್ರಿಪಾಠಿ ಹೇಳಿದ್ದಾರೆ.

hostel

ಮಿಗ್ ಕಮಾಂಡರ್ ಅಭಿನಂದನ್ ಅವರು ಪಾಕಿಸ್ತಾನದಿಂದ ಭಾರತಕ್ಕೆ ವಾಪಸ್ ಬಂದಿದ್ದರಿಂದ ಮಕ್ಕಳಿಗೆ ಸಿಹಿ ಹಂಚಲು ಶಾಲೆಯ ಪ್ರಿನ್ಸಿಪಾಲ್ ಸುಖಿ ರಾಮ್ ಹೋಗಿದ್ದರು. ಈ ವೇಳೆ ತಮಗೆ ಹಾಸ್ಟೆಲ್ ವಾರ್ಡನ್, ಪತಿ ಮತ್ತು ಇತರರು ಕೆಲವು ದಿನಗಳವರೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪತ್ರ ಬರೆದು ಕೊಟ್ಟಿದ್ದಾರೆ. ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಿನ್ಸಿಪಾಲ್ ಸಹಾಯದಿಂದ ಹುಡುಗಿಯರು ಶನಿವಾರ ಕಿಶನ್‍ಗಢ ಬಾಸ್ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಪತಿ ನೀಲ್ ಕಮಲ್ ಮತ್ತು ಇನ್ನೊಬ್ಬನನ್ನು ರಮೇಶ್ ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

hostel 1

ಈ ಪ್ರಕರಣ ಕುರಿತು ತನಿಖೆ ನಡೆಸಲು ಮಹಿಳಾ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಪೊಲೀಸರು ಸಂತ್ರಸ್ತೆಯರ ಹೇಳಿಕೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ. ಇತ್ತ ಶಾಲಾ ಅಧಿಕಾರಿಗಳು ಹಾಸ್ಟೆಲ್ ವಾರ್ಡನ್ ಅನ್ನು ಅಮಾನತುಗೊಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *