ಬೀದರ್: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಮರಾಠಿಗರಿಗೆ ಟಿಕೆಟ್ ನೀಡಬೇಕು. ಟಿಕೆಟ್ ನೀಡದಿದ್ದರೆ ಮತದಾನ ಬಹಿಷ್ಕರಿಸುತ್ತೇವೆ ಎಂದು ಮರಾಠ ಮುಖಂಡರು (Marathi leadears) ಬೀದರ್‌ನಲ್ಲಿ (Bidar) ಎರಡೂ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಮರಾಠ ಮುಖಂಡರು, ಬಿದರ್‌ನಲ್ಲಿ 2.5 ಲಕ್ಷ ಮತದಾರರಿದ್ದಾರೆ. ಕರ್ನಾಟಕದಲ್ಲಿ 50 ಲಕ್ಷ ಅಧಿಕ ಮರಾಠ ಮತದಾರರಿದ್ದಾರೆ. ಆದ್ದರಿಂದ ಭಾಲ್ಕಿ ಮತ್ತು ಬಸವಕಲ್ಯಾಣದಲ್ಲಿ ಮರಾಠ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಎರಡು ಕ್ಷೇತ್ರಗಳಲ್ಲಿ ಮರಾಠಿಗೆ ಟಿಕೆಟ್ ನೀಡದಿದ್ದರೆ ಸ್ವಾತಂತ್ರ್ಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಬರುವುದೇ ಗ್ಯಾರಂಟಿಯಿಲ್ಲ, ಇನ್ನು ಗ್ಯಾರಂಟಿ ಕಾರ್ಡ್‌ನಿಂದ ಏನು ಉಪಯೋಗ?-ಆರ್.ಅಶೋಕ್
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (B.S.Yediyurappa), ಮರಾಠಿಗರಿಗೆ 2ಎ ಮೀಸಲಾತಿ ಕೊಡುತ್ತೇವೆ ಎಂದಿದ್ದರು. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರ ಬಂದರೂ ಮೀಸಲಾತಿ ಸಿಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿದೇಶದಲ್ಲಿ ಮುಂದುವರೆದ ಜನಾಂಗೀಯ ದ್ವೇಷ: ಕೆನಾಡದಲ್ಲಿ ಸಿಖ್ ವಿದ್ಯಾರ್ಥಿ ಮೇಲೆ ಹಲ್ಲೆ