ಬೆಳಗಾವಿ: ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ ಅವರಿಗೆ ಬಂಧನದ ಭೀತಿ ಎದುರಾಗಿದೆ. 2016ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಪಿ. ರಾಜೀವ್ ವಿರುದ್ಧ ವಾರಂಟ್ ಜಾರಿ ಮಾಡಿದೆ.
2016ರಲ್ಲಿ ಶಾಸಕರಾಗಿದ್ದ ಪಿ.ರಾಜೀವ್ ಅವರು ಸಕ್ಕರೆ ಕಾರ್ಖಾನೆಗಳಿಂದ ಹಣ ಪಡೆದು ರೈತ ಪರ ನಿಲ್ಲುವುದನ್ನು ಬಿಟ್ಟು ಪ್ರತಿಭಟನೆ ಮಾಡುವುದನ್ನ ನಿಲ್ಲಿಸಿದ್ದಾರೆ ಎಂದು ಕುಡಚಿ ಕ್ಷೇತ್ರದ ಮಾಜಿ ಶಾಸಕ ಶಾಮ ಘಾಟಗೆ ಆರೋಪ ಮಾಡಿರುತ್ತಾರೆ. ಆರೋಪ ಮಾಡಿದ ಹಿನ್ನೆಲೆಯಲ್ಲಿ ಶಾಸಕ ರಾಜೀವ್ ನೇರವಾಗಿ ಶಾಮ ಘಾಟಗೆ ಅವರ ಮನೆಗೆ ಹೋಗಿ ಅಭಿವೃದ್ಧಿ ಹಾಗೂ ಹಣ ಪಡೆದ ಬಗ್ಗೆ ಬಹಿರಂಗ ಚರ್ಚೆ ಮಾಡಲು ಆಮಂತ್ರಣ ನೀಡಲು ಹೋಗುತ್ತಾರೆ.
Advertisement
Advertisement
ಈ ಸಂದರ್ಭದಲ್ಲಿ ಶಾಮ ಘಾಟಗೆ ಇಲ್ಲದಿದ್ದರೂ ಕುಟುಂಬಸ್ಥರ ನಡುವೆ ವಾಗ್ವಾದ ನಡೆಯುತ್ತದೆ. ಹೀಗಾಗಿ ಶಾಸಕ ಪಿ.ರಾಜೀವ್ ಸೇರಿದಂತೆ ಅವರ ಬೆಂಬಲಿಗರ ಮೇಲೆ ಘಾಟಗೆ ಕುಟುಂಬ ಕುಡಚಿ ಪೊಲೀಸ್ ಠಾಣೆಯಲ್ಲಿ ಅವ್ಯಾಚ ಶಬ್ಧಗಳಿಂದ ನಿಂದನೆ ಸೇರಿದಂತೆ ಜಾತಿ ನಿಂದನೆ ಪ್ರಕರಣ ದಾಖಲಿಸುತ್ತಾರೆ. ಪ್ರಕರಣ ದಾಖಲಾದರು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಬೆಂಗಳೂರಿನ ವಿಶೇಷ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ. ಬಂಧನ ಭೀತಿ ತಪ್ಪಿಸಲು ಶಾಸಕರು ನ್ಯಾಯವಾದಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv