ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಪ್ರವಾದಿ ಮಹಮ್ಮದ್ ಪೈಗಂಬರ್ (Mohammad Paigambar) ಕುರಿತು ಅವಹೇಳನ ಕಾರಿ ಹೇಳಿಕೆ ನೀಡಿದ ಹಿನ್ನೆಲೆ, ಶಾಸಕನ ಹತ್ಯೆಗೆ ಸಂಚು ನಡೆದಿತ್ತು ಎನ್ನುವ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಯುವಕನ ಆಡಿಯೋದಲ್ಲಿ ನಡೆದ ಸಂಭಾಷಣೆ ಪುಷ್ಟಿ ನೀಡಿದೆ.
ಹೌದು. ಏ.7 ರಂದು ಹುಬ್ಬಳ್ಳಿಯ (Hubballi) ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತನಾಡುತ್ತಾ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಯತ್ನಾಳ್ ವಿರುದ್ಧ ಪ್ರತಿಭಟನೆ ನಡೆಸಲು ಒಟ್ಟಾಗಿ ಎಂದು ಕರೆ ನೀಡಿರುವ ಮುಸ್ಲಿಂ ಯುವಕನ (Muslim Boy) ಸ್ಫೋಟಕ ಆಡಿಯೋ ವೈರಲ್ ಆಗಿದೆ. ಇದು ವಿಜಯಪುರದಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ಇದನ್ನೂ ಓದಿ: ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‍ಐಆರ್
ಆಡಿಯೋ ಸಂಭಾಷಣೆಯಲ್ಲಿ ಏನಿದೆ?
ಗೆಳೆಯರೇ.. ನಮಸ್ಕಾರ ಎಲ್ಲ ಸಹೋದರ, ಸಹೋದರಿಯರಿಗೆ ನಮಸ್ಕಾರ. ವಿಜಯಪುರದಲ್ಲಿಂದ ದೊಡ್ಡ ಮೀಟಿಂಗ್ ಕರೆಯಲಾಗಿತ್ತು. ನಗರದ ಆಲಂಗೀರ್ ಹಾಲ್‌ನಲ್ಲಿ ಎಂಎಂಸಿ ಮೀಟಿಂಗ್‌ನಲ್ಲಿ ವಿಜಯಪುರದ ಎಲ್ಲ ದಿಗ್ಗಜ ಸದಸ್ಯರು, ಉಲ್ಮಾಗಳು ಅಲ್ಲಿ ಇದ್ರೂ. ಅಲ್ಲಿ ಇದೇ ತಿಂಗಳ ಏ.15 ರಂದು ವಿಜಯಪುರ ಬಂದ್ ಮಾಡಲು ನಿರ್ಧಾರ ಆಗಿದೆ. ಇನ್ನು ಯತ್ನಾಳ್‌ಗೆ ಅದು ಫೈನಲ್ ದಿನ. ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾನೆ ಯತ್ನಾಳ್. ಇದನ್ನ ವಿರೋಧಿಸಿ 1 ಲಕ್ಷ ಜನರು ರ‍್ಯಾಲಿಯಲ್ಲಿ ಸೇರುತ್ತಿದ್ದಾರೆ. ಈ ಬಾರಿ ಎಲ್ಲರು ನಿರ್ಧರಿಸಿದ್ದಾರೆ ಅವನದ್ದು ಕೊನೆಯ ದಿನ ಅಂತಾ. ಅವನು ಅರೆಸ್ಟ್ ಆಗಬೇಕು ಇಲ್ಲ, ರ‍್ಯಾಲಿ ಅವನ ಮನೆಗೆ ತೆರಳಬೇಕು, ರ‍್ಯಾಲಿ ಅಲ್ಲಿಂದ ಅವನ ಮನೆಗೆ ನೇರವಾಗಿ ಹೋಗುತ್ತೆ. ಆದ್ದರಿಂದ ಎಲ್ಲ ಸಹೋದರ, ಸಹೋದರಿಯರು ಹೆಚ್ಚಿನ ಸಂಖ್ಯೆಯಲ್ಲಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಬೇಕು. ಏ.15ರಂದು ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ ಸೇರಬೇಕು, ನಿಮ್ಮ ಅಕ್ಕ-ಪಕ್ಕದ ಊರುಗಳಲ್ಲಿರುವ ಎಲ್ಲ ಸ್ನೇಹಿತರು, ಅಣ್ಣ-ತಮ್ಮಂದಿರಿಗೆ ವಿಷಯ ಹೇಳಿ.
ಈ ಬಾರಿ ಅವನದ್ದು ಫೈನಲ್ ದಿನ ಇದೆ. ಇಲ್ಲಿವರೆಗೂ ಅವನ ವಿರುದ್ಧ ದೂರು ಕೊಡುತ್ತಿದ್ದೆವು. ಆದ್ರೆ ಏನಾಗುತ್ತಿತ್ತು ಅವನು ಬೇಲ್ ಮೇಲೆ ಹೊರಗಡೆ ಬರ್ತಾ ಇದ್ದ. ಈ ಬಾರಿ ಆ ರೀತಿ ಆಗಲ್ಲ. ಈ ಬಾರಿ ಅವನು ಅರೆಸ್ಟ್ ಆಗಬೇಕು, ಇಲ್ಲ ಅವನ ರುಂಡ ದೇಹದಿಂದ ಇಬ್ಭಾಗ ಆಗಬೇಕು. ಮುಸ್ಲಿಂ ಸದಸ್ಯರು ಎಲ್ಲರೂ ಸಿದ್ಧರಾಗಿ ಕುಳಿತಿದ್ದಾರೆ. ಏ.15ರಂದು ಯಾವುದೇ ಕೆಲಸ ಇದ್ದರೂ ರಜೆ ಮಾಡಿ, ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆ ಆಗಿ. ಇನ್ ಷಾ ಅಲ್ಲಾ.. ಎಲ್ಲರು ಅಲ್ಲೇ ಸಿಗೋಣ ಎಂದು ಆಡಿಯೋನಲ್ಲಿ ಹೇಳಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್‌ನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ
ಸದ್ಯ ಶಾಸಕನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎನ್ನುವುದಕ್ಕೆ ಪುಷ್ಟಿ ನೀಡುವಂತಿರುವ ಈ ಆಡಿಯೋ ತೀವ್ರ ಸದ್ದು ಮಾಡುತ್ತಿದೆ.