ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ನ ಗುಂಪು ಹಂತದ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಕೈಚೆಲ್ಲಿದ್ದ ಭಾರತ ಫೈನಲ್ಸ್‌ನಲ್ಲಿ ಮಲೇಷ್ಯಾ ವಿರುದ್ಧ 1-3 ಅಂತರದಲ್ಲಿ ಪರಾಭವಗೊಂಡು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.
Advertisement
ಬೆಳ್ಳಿಪದಕಕ್ಕೆ ಕೊರಳೊಡ್ಡಿದ್ದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಮಲೇಷ್ಯಾ ಸೋಲಿಸೋದು ಅಷ್ಟು ಸುಲಭವಾಗಿರಲಿಲ್ಲ. ನಾವು ಫೈನಲ್‌ನಲ್ಲಿ ಆಡುತ್ತಿದ್ದರಿಂದ ಪ್ರತಿ ಪಂದ್ಯವೂ ನಮಗೆ ಮುಖ್ಯವಾಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: CWG2022: ಗುಂಪು ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದ ಭಾರತ, ಸಿಂಗಲ್ಸ್‌ನಲ್ಲಿ ಸಿಂಧು ಪರಾಕ್ರಮ
Advertisement
Advertisement
ಎಲ್ಲರೊಂದಿಗೆ ನಾನೂ ಒಂದು ತಂಡವಾಗಿ ಚೆನ್ನಾಗಿ ಆಡಿದ್ದೇನೆ. ದುರದೃಷ್ಟವಶಾತ್ ತಂಡದಲ್ಲಿ ನಡೆದ ಸಣ್ಣಪುಟ್ಟ ಬದಲಾವಣೆಯಿಂದಾಗಿ ಚಿನ್ನ ಗೆಲ್ಲುವ ಅವಕಾಶ ಕೈತಪ್ಪಿತ್ತು. ನಾವು ಬೆಳ್ಳಿ ಪದಕ ಪಡೆದಿದ್ದು, ನನ್ನ ತಂಡ ಸಂತೋಷವಾಗಿದೆ. ಇದು ಕೇವಲ ದಿನದ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಈ ದಿನ ನಮ್ಮದಲ್ಲ ಎಂದು ನಾನು ಭಾವಿಸುತ್ತೇನೆ. ಮತ್ತೊಮ್ಮೆ ಬಲವಾದ ತಂಡವಾಗಿ ಹೊರ ಹೊಮ್ಮುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement
ಈಗ ವೈಯಕ್ತಿಕ ಆಟದ ಮೇಲೆ ಕೇಂದ್ರೀಕರಿಸುವುದು ಬಹಳ ಮುಖ್ಯ. ಅದರಲ್ಲಿ ನಾನು ನೂರಕ್ಕೆ ನೂರರಷ್ಟು ಫಲಿತಾಂಶ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ 8ನೇ ಪದಕ – ವಿಕಾಸ್ ಠಾಕೂರ್‌ಗೆ ಬೆಳ್ಳಿ
ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ ಶ್ರೀಕಾಂತ್ ಮಲೇಷ್ಯಾದ ಕೆಳಕ್ರಮಾಂಕದ ಆಟಗಾರ ತ್ಸೆಯಾಂಗ್ ಜಿ-ವಿರುದ್ಧ ಸೋಲು ಅನುಭವಿಸಿದ್ದು, ತಂಡದ ಸೋಲಿಗೆ ಕಾರಣವಾಯಿತು. ಅಲ್ಲದೇ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕೂಡ ಸೋಲನುಭವಿಸಿದರು. ಇದರಿಂದ ತಂಡ 2-0 ಯಿಂದ ಹಿನ್ನಡೆ ಕಾಯ್ದುಕೊಂಡಿತು.